ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ
Team Udayavani, Sep 26, 2020, 8:54 PM IST
ಮಂಡ್ಯ : ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 99ಕ್ಕೆ ಏರಿಕೆಯಾಗಿದೆ. ಶನಿವಾರ 259 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 10 ಸಾವಿರ ಗಡಿದಾಟಿದೆ.
ಕೊರೊನಾ ಸೋಂಕಿನಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಮಳವಳ್ಳಿ ತಾಲೂಕಿನ 42 ವ್ಯಕ್ತಿ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
259 ಮಂದಿಗೆ ಕೋವಿಡ್ ದೃಢ:
ಶನಿವಾರ ಮಂಡ್ಯ 80, ಮದ್ದೂರು 25, ಮಳವಳ್ಳಿ 21, ಪಾಂಡವಪುರ 8, ಶ್ರೀರಂಗಪಟ್ಟಣ 27, ಕೆ.ಆರ್.ಪೇಟೆ 42 ಮತ್ತು ನಾಗಮಂಗಲದ 56 ಮಂದಿ ಸೇರಿದಂತೆ 259 ಪ್ರಕರಣಗಳು ಹೊಸದಾಗಿ ಕಾಣಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ 10,050 ಸೋಂಕಿತ ಪ್ರಕರಣಗಳು ದಾಖಲಾಗಿವೆ.
103 ಮಂದಿ ಕೋವಿಡ್ ಮುಕ್ತ:
ಕೊರೊನಾ ಮುಷ್ಠಿಗೆ ಸಿಲುಕಿದ್ದ 103 ಮಂದಿ ಶನಿವಾರ ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಮಂಡ್ಯ 30, ಮದ್ದೂರು 5, ಮಳವಳ್ಳಿ 11, ಪಾಂಡವಪುರ 43, ಶ್ರೀರಂಗಪಟ್ಟಣ 9, ಕೆ.ಆರ್.ಪೇಟೆ 3 ಹಾಗೂ ನಾಗಮಂಗಲದ ಇಬ್ಬರು ಗುಣಮುಖರಾಗಿದ್ದಾರೆ. ಇದುವರೆಗೂ 8339 ಮಂದಿ ಬಿಡುಗಡೆಯಾಗಿದ್ದು, 1551 ಸಕ್ರಿಯ ಪ್ರಕರಣಗಳಿವೆ.
ಈ ಪೈಕಿ 581 ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ, 132 ಖಾಸಗಿ ಆಸ್ಪತ್ರೆಗಳ ಐಸೋಲೇಷನ್ನಲ್ಲಿ, 87 ಕೋವಿಡ್ ಕೇರ್ ಸೆಂಟರ್ನಲ್ಲಿ ಹಾಗೂ 751 ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಜಿಲ್ಲೆಯಲ್ಲಿ 1443 ಜನರ ಗಂಟಲಿನ ದ್ರವ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.