ಜಿಲ್ಲಾದ್ಯಂತ ಸ್ವಚ್ಛತಾ ಸಪ್ತಾಹ ನಡೆಸಿ: ಡೀಸಿ

Team Udayavani, Sep 27, 2020, 1:40 PM IST

ಜಿಲ್ಲಾದ್ಯಂತ ಸ್ವಚ್ಛತಾ ಸಪ್ತಾಹ ನಡೆಸಿ: ಡೀಸಿ

ದೇವನಹಳ್ಳಿ: ಪರಿಣಾಮಕಾರಿಯಾಗಿ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಸ್ವಚ್ಛತಾ ಸಪ್ತಾಹ ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಸೂಚಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಲೇರಿಯಾ ವಿರೋಧಿ ಮತ್ತು ಡೆಂಘೀ ವಿರೋಧಿ ಮಾಸಾಚರಣೆ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಟ್ಟಡಗಳ ಸುತ್ತಮುತ್ತ ಹಾಗೂ ನಿರ್ಮಾಣಗೊಳ್ಳುತ್ತಿರುವ ಹೊಸ ಕಟ್ಟಡದ ಮೇಲ್ಭಾಗದಲ್ಲಿ ನೀರು ನಿಲ್ಲದಂತೆ ಮಾಲಿಕರಿಗೆ ಸೂಚನೆನೀಡಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ನೀರು ನಿಂತಿರುವ ಹೊಂಡ, ಗಣಿಗಾರಿಕೆ ಪ್ರದೇಶದ ಹೊಂಡಗಳಲ್ಲಿ ಗಪ್ಪಿ ಮೀನು ಬಿಡಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಹೊಸಕೋಟೆ ಮತ್ತು ನೆಲಮಂಗಲ ತಾಲೂಕು ಸೇರಿ ನಗರ ಪ್ರದೇಶದ ಹೊರ ಭಾಗದಲ್ಲಿ ಕಸದ ತುಂಬಿರುವುದು ಕಂಡು ಬಂದಿದ್ದು, ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸ್ವಚ್ಛತೆ ಕಾಪಾಡಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಗೆ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ರೋಗ ನಿಯಂತ್ರಣಗಳ ಬಗ್ಗೆ ಮಾಹಿತಿ ನೀಡಬೇಕು. ಸ್ವತ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ತಾಲೂಕವಾರು ನಗರಸಭೆ ಮತ್ತು ಪುರಸಭೆ ಮುಖ್ಯಸ್ಥರು ಇತರೆ ಇಲಾಖೆ ಸಹಯೋಗದೊಂದಿಗೆ ಜಾಗೃತಿ ಮೂಡಿಸಿ ರೋಗ ತಡೆಗಟ್ಟಲು ಕ್ರಮವಹಿಸಬೇಕು. ಮನೆಗಳಲ್ಲಿ ಶೇಖರಿಸುವ ನೀರನ್ನು ವಾರಕ್ಕೊಮ್ಮೆ ಸ್ವಚ್ಛಮಾಡುವ ಜೊತೆಗೆ ನೀರಿನ ಟ್ಯಾಂಕ್‌ಗಳ ಮೇಲೆ ಮುಚ್ಚಳಿಕೆಯಿಂದ ಭದ್ರಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೆಂದ್ರ ಮಾತನಾಡಿ, ಜಿಲ್ಲೆಯಲ್ಲಿ 3 ಮಲೇರಿಯಾ, 7 ಚಿಕೂನ್‌ಗುನ್ಯಾ ಹಾಗೂ 8 ಡೆಂಘೀ ಪ್ರಕರಣ ಕಂಡುಬಂದಿದ್ದು, ಸಾಂಕ್ರಾಮಿಕ ರೋಗಗಳ ನಿಯಂ ತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಮಂಜುಳಾದೇವಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.