ಎಂದೂ ಮರೆಯಲಾಗದ ಸ್ವರ್ಣಮಂದಿರ, ಜಲಿಯನ್ ವಾಲಾಬಾಗ್, ವಾಘಾ ಗಡಿ ಪ್ರವಾಸ !
Team Udayavani, Sep 27, 2020, 2:50 PM IST
ಸುಳ್ಯ: ರಾಷ್ಟ್ರಮಟ್ಟದ ಕ್ರೀಡಾ ಪಟುವಾಗಿದ್ದ ನಾನು ಅರಣ್ಯ ಅಭಿವೃದ್ದಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಪ್ರತಿ ವರ್ಷವೂ ದೇಶದ ವಿವಿಧ ರಾಜ್ಯಗಳಲ್ಲಿ ನಡೆಸಲಾಗುತ್ತಿದ್ದ ರಾಷ್ಟ್ರೀಯ ಅರಣ್ಯ ಕ್ರೀಡಾ ಕೂಟದಲ್ಲಿ weight lifting, ಮತ್ತು ಅಥ್ಲೆಟಿಕ್ಸ್ ವಿಭಾಗದಲ್ಲಿ ಸ್ಪರ್ಧಿಯಾಗಿರುತಿದ್ದೆ. ಅಂತೆಯೇ 2008ರಲ್ಲಿ ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ನಡೆಸಲಾದ 17ನೇ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ತಂಡದಲ್ಲಿದ್ದ ನಾನು, ನನ್ನ ಮಗನನ್ನೂ ಕೂಡ ಕರೆದುಕೊಂಡು ತೆರಳಿದ್ದೆ.
ಪ್ರತಿ ಬಾರಿ ವಿವಿಧ ರಾಜ್ಯಗಳಲ್ಲಿ ರಾಷ್ಟ್ರೀಯ ಕ್ರೀಡಾಕೂಟ ನಡೆದಾಗ, ಕ್ರೀಡಾಪಟುಗಳು ಅಲ್ಲಿನ ಹತ್ತಿರದ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೆವು. ಪಂಜಾಬಿನಲ್ಲಿ ನಡೆದ ಕ್ರೀಡಾಕೂಟ ಸಮಯದಲ್ಲೂ ಮೂರು ಪ್ರವಾಸಿ ಸ್ಥಳಗಳಿಗೆ ತೆರಳಿ ಅಲ್ಲಿನ ಸೌಂದರ್ಯವನ್ನು ಆಸ್ವಾದಿಸಿದೆವು.
ಅಮೃತಸರದಲ್ಲಿರುವ ಶ್ರೀ ಹರ್ಮಂದಿರ್ ಸಾಹಿಬ್ ಅಥವಾ ಸ್ವರ್ಣಮಂದಿರಕ್ಕೆ ನಮ್ಮ ಮೊದಲನೇಯ ಭೇಟಿಯಾಗಿತ್ತು. 1589 ರಿಂದ 1604ರ ಅವಧಿಯಲ್ಲಿ ನಿರ್ಮಿಸಲಾದ, ಸಿಖ್ಖರ ಪವಿತ್ರ ಸ್ವರ್ಣ ಮಂದಿರವು ಸರೋವರದ ಮಧ್ಯದಲ್ಲಿ ಕಣ್ಮನ ಸೆಳೆಯುವ ರೀತಿಯಲ್ಲಿ ನಿರ್ಮಾಣವಾಗಿದೆ. ಸ್ವರ್ಣಮಂದಿರದ golden dome ಎಂಬುದು ಅಪ್ಪಟ 24 ಕ್ಯಾರೆಟ್ ಚಿನ್ನದಿಂದ ಮಾಡಿರುವುದಾಗಿದೆ. ಬಹಳ ಸೌಂದರ್ಯ ಭರಿತವಾದ ಮಂದಿರದಲ್ಲಿ ನೂರಾರು ಭಕ್ತರೊಂದಿಗೆ ಅಲ್ಲಿ ಕಳೆದ ಕ್ಷಣ ಸ್ಮರಣಿಯವಾಗಿತ್ತು.
ನಂತರ ತೆರಳಿದ್ದು ಚರಿತ್ರೆಯಲ್ಲಿ ಬ್ರಿಟಿಷ್ ಸೇನಾಧಿಕಾರಿಯೋರ್ವನ ಕ್ರೌರ್ಯಕ್ಕೆ ಸಾಕ್ಷಿಯಾಗಿ ನಿಂತ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸ್ಥಳಕ್ಕೆ. ಈ ಘಟನೆಯಲ್ಲಿ ನೂರಾರು ಮಂದಿ ಪ್ರಾಣತೆತ್ತರು ಎಂಬುದಕ್ಕೆ ಸಾಕ್ಷಿಯಾಗಿ ಅಲ್ಲಿದ್ದ ಬುಲ್ಲೆಟ್ ಗಳ ಗುರುತು ಕಂಡಾಗ ಕಣ್ಣಾಲಿಗಳು ತೇವಗೊಂಡಿದ್ದವು.
ಮುಂದೆ ಅಮೃತಸರದಿಂದ ಸುಮಾರು 28 ಕಿ. ಮೀ ದೂರದಲ್ಲಿರುವ ವಾಘಾ ಬಾರ್ಡರ್ ಗೆ ನಮ್ಮ ಪ್ರಯಾಣ ಸಾಗಿತ್ತು. ಇಂಡಿಯಾ ಪಾಕಿಸ್ತಾನದ ಗಡಿ ಬಾಗಿಲು. ಸಾಯಂಕಾಲ 4.30 ರಿಂದ 5.30 ರ ಅವಧಿಯಲ್ಲಿ ನಡೆಯುವ ಎರಡು ದೇಶಗಳ ಧ್ವಜಾರೋಹಣ ಇಂದಿಗೂ ಕಣ್ಣಿಗೆ ಕಟ್ಟುವಂತಿದೆ. ಸೈನಿಕರ ಶೌರ್ಯ, ಧೈರ್ಯ, ಪರಾಕ್ರಮ ಎಲ್ಲವೂ ವರ್ಣನಾತೀತವಾದುದು.
- ಎ. ರಮೇಶ್ ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.