ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ
Team Udayavani, Sep 27, 2020, 3:41 PM IST
ಬೆಂಗಳೂರು: ಕೆಲವು ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ಕೊಟ್ಟಿದ್ದರೂ ಕೂಡಾ ಎಲ್ಲಾ ವಿಭಾಗದ ಸರಕಾರಿ ಬಸ್ ಗಳ ಓಡಾಟ ಎಂದಿನಂತೆ ಇರಲಿದೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬಂದ್ ದಿನ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡಬೇಕೆಂದು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕೋರಲಾಗಿದೆ. ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.