ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ


Team Udayavani, Sep 27, 2020, 4:00 PM IST

ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ

ಹಾಸನ: ಕೋವಿಡ್ ಪರಿಣಾಮವಾಗಿ ಆಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನಿರೀಕ್ಷಿತ ಮಟ್ಟದಲ್ಲಿ ದೇಣಿಗೆ ಸಂಗ್ರಹವಾಗುತ್ತಿಲ್ಲ ಎಂದು ಆಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್‌ ನಿರ್ದೇಶಕರಲ್ಲೊಬ್ಬರಾದ ಉಡುಪಿ ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ನಗರದ ಎಂ.ಜಿ.ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಠಕ್ಕೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮ ಭೂಮಿ ಯಲ್ಲಿ ಶೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾ ನ್ಯಾಸ ನೆರವೇರಿಸಿದ್ದಾರೆ. ಕಾಮಗಾರಿ ಮುಂದುವರಿದಿದೆ. ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕಾಮಗಾರಿ ಮಂದಗತಿಯಲ್ಲಿದೆ. ನಾವುಗಳೂ ಅಲ್ಲಿಗೆ ಹೋಗಲಾಗುತ್ತಿಲ್ಲ ಸೋಂಕು ತಗ್ಗಿದ ಮೇಲೆ ಆಯೋಧ್ಯೆಗೆ ಭೇಟಿ ನೀಡುವುದಾಗಿ ತಿಳಿಸಿದರು.

ದೇಣಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ನಡೆಸುವ ಚಿಂತನೆ ನಡೆದಿತ್ತು. ಆದರೆ, ಕೋವಿಡ್ ಹರಡುತ್ತಿರುವುದರಿಂದ ಅದು ಸಾಧ್ಯವಾಗಿಲ್ಲ. ಆದರೆ, ಎಲ್ಲರ ಸಹಕಾರವಿರುವುದರಿಂದ ನಿಗದಿತ ಸಮಯದಲ್ಲಿ ರಾಮ ಮಂದಿರ ನಿರ್ಮಾಣ ಸಂಪನ್ನಗೊಳ್ಳಲಿದೆ ಎಂಬ ವಿಶ್ವಾಸವನ್ನು ಸ್ವಾಮೀಜಿ ವ್ಯಕ್ತಪಡಿಸಿದರು.

ದೇಣಿಗೆ ಸಂಗ್ರಹಕ್ಕೆ ಆಂದೋ.ಲನ ನಡೆಯ ದಿದ್ದರೂ ವೈಯಕ್ತಿಕವಾಗಿ ದೇಣಿಗೆ ಸಂಗ್ರಹ ವಾಗುತ್ತಿದ್ದು, ಬ್ಯಾಂಕಿನಲ್ಲಿ ತೆರೆದಿರುವ ಖಾತೆಗೆ ದೇಣಿಗೆಯನ್ನು ಸಾರ್ವ ಜನಿಕರುಜಮಾಮಾಡಬಹುದು. ರಾಮಜನ್ಮಭೂಮಿ ಟ್ರಸ್ಟ್‌ ಜೊತೆಯಲ್ಲಿಯೇ ಮಂದಿರ ನಿರ್ಮಾಣಕೋಸ್ಕರ ಪ್ರತ್ಯೇಕ ಸಮಿತಿಯೊಂದನ್ನು ರಚಿಸಿ, ಅದಕ್ಕೆ ಎಲ್ಲಾ ಜವಾಬ್ದಾರಿಯನ್ನು ಕೊಡಲಾಗುತ್ತದೆ. ರಾಮ ಮಂದಿರ, ಬೃಂದಾವನದ ನಿರ್ಮಾಣ ಕಾರ್ಯ ನಿಗದಿಯಂತೆ ನಡೆಯುತ್ತದೆ ಎಂದು ಹೇಳಿದರು.  ಎಸ್‌.ಪಿ.ಬಾಲಸುಬ್ರಮಣ್ಯಂ, ಕೇಂದ್ರ ಸಚಿವಸುರೇಶ್‌ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ವಾಮೀಜಿ, ಅವರಿಬ್ಬರಿಗೂ ಸದ್ಗತಿ ದೊರೆಯಲೆಂದು ಪ್ರಾರ್ಥಿಸಿದರು.

ಕೋವಿಡ್ ಸಮುದಾಯಕ್ಕೆ ಹರಡುತ್ತಿದೆ. ಜನರು ಜಾಗೃತರಾಗಿರಬೇಕು. ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೋಗ ಹರಡುವುದನ್ನು ತಡೆಯಬೇಕು. ಸಾಂಕ್ರಾಮಿಕ ರೋಗ ತೊಲಗಲಿ, ದೇಶದಲ್ಲಿ ಆರೋಗ್ಯ ನೆಲಸಲಿ ಎಂದು ನಮ್ಮ ಆಶಯ ತಿಳಿಸಿದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.