ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.
Team Udayavani, Sep 28, 2020, 9:56 AM IST
ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ರೈತರ ಹಾಗೂ ವಿಪಕ್ಷಗಳ ವಿರೋಧದ ನಡುವೆಯೇ ಸಂಸತ್ ನಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ.
ದೆಹಲಿಯ ಸೆಂಟ್ರಲ್ ಪ್ರದೇಶದಲ್ಲಿ ಬೆಳಗ್ಗೆ 15ರಿಂದ 20 ಮಂದಿ ಗುಂಪುಗೂಡಿದ್ದು, ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದರು. ಪೊಲೀಸರ ಹೇಳಿಕೆ ಪ್ರಕಾರ, ಪ್ರತಿಭಟನಾಕಾರರು ಕಾಂಗ್ರೆಸ್ ಪರ ಘೋಷಣೆ ಕೂಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಂದ್: ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ
ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.
ಕರ್ನಾಟಕದಲ್ಲಿಯೂ ರಾಜ್ಯ ಬಂದ್ ಗೆ ರೈತ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ರಾಜ್ಯದಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವಂತೆ ತಿಳಿಸಿದ್ದರು.
ಇದನ್ನೂ ಓದಿ: ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.