ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ
Team Udayavani, Sep 28, 2020, 11:03 AM IST
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ.ಜಿ.ಎಸ್ ಅಮೂರ (95) ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಿ.ಎಸ್.ಅಮೂರ ಇಂದು ಬೆಳಗ್ಗೆ 5 ಗಂಟೆಗೆ ಜೆ.ಪಿನಗರದ ಮೂರನೇ ಹಂತದಲ್ಲಿರುವ ಮಗನ ನಿವಾಸದಲ್ಲಿ ನಿಧನರಾಗಿದ್ದಾರೆ.
ಹಾವೇರಿ ಜಿಲ್ಲೆ ಬೊಮ್ಮನಹಳ್ಳಿಯಲ್ಲಿ 1925 ರಲ್ಲಿ ಜನಿಸಿದ್ದ ಗುರುರಾಜ ಶ್ಯಾಮಾಚಾರ ಆಮೂರರು ಕನ್ನಡ ಸಾಹಿತ್ಯ ವಿಮರ್ಶೆಯಲ್ಲಿ ದಿಗ್ಗಜರಾಗಿದ್ದರು. ಧಾರವಾಡದಲ್ಲಿ ಶಿಕ್ಷಣ ಪಡೆದ ಅವರು ಔರಂಗಾಬಾದನ ಮರಾಠವಾಡಾ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿ, ಆಗಲೇ ‘ಕಾಮಿಡಿಯ ಪರಿಕಲ್ಪನೆ’ಎಂಬ ಮಹಾಪ್ರಬಂಧ ಬರೆದು ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದರು.
ಸೀಮೋಲಂಘನ, ಭುವನದ ಭಾಗ್ಯ, ಅರ್ಥಲೋಕ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ವಿಮರ್ಶಾ ಬರಹಗಳು, ಸಣ್ಣ ಕಥೆಗಳ ವಿಮರ್ಶ ಬರಹಗಳು ಅವರ ಸಾಹಿತ್ಯ ಶ್ರೇಷ್ಠತೆಯ ಕೊಡುಗೆಗಳಾಗಿವೆ. ಅವರ ಕೊರಡು ಕೊನರಿದಾಗ ಕೃತಿ ವಿಶಿಷ್ಟವಾದದ್ದು. ಇನ್ನುಳಿದಂತೆ ಬೇಂದ್ರೆ ಅವರ ಸಾಹಿತ್ಯವನ್ನು ವಿಭಿನ್ನ ನೆಲೆಯಲ್ಲಿ ಕಟ್ಟಿಕೊಟ್ಟಿರುವ ಆಮೂರರು ಗಿರೀಶ್ ಕಾರ್ನಾಡ್ ರ ರಂಗಭೂಮಿ ವಿಚಾರಗಳನ್ನು ರಂಗ ವಿಮರ್ಶಾ ವಿಧಾನಗಳಲ್ಲಿ ಕಟ್ಟಿ ಕೊಟ್ಟಿದ್ದಾರೆ. ಸಾಹಿತಿ ಅನಂತಮೂರ್ತಿ ಅವರು ಅಮೂರರನ್ನು ಕನ್ನಡ ಸಾಹಿತ್ಯ ಲೋಕದ ಭೀಷ್ಮ ಎಂದೇ ಸದಾ ಕರೆಯುತ್ತಿದ್ದರು.
ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ೪೦ ಕ್ಕೂ ಹೆಚ್ಚು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ. ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯೆಜಿಸಿದ್ದಾರೆ. ಇವರ ಅಗಲಿಕೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ: ಜಿ.ಎಸ್.ಅಮೂರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಅಭಿಮಾನಿಗಳು ಮತ್ತು ಶಿಷ್ಯವೃಂದಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಆಧುನಿಕ ಕನ್ನಡ ಸಾಹಿತ್ಯ ವಿಮರ್ಶಕರಲ್ಲಿ ಅಗ್ರಮಾನ್ಯರೆಂದು ಪರಿಗಣಿಸಲ್ಪಟ್ಟಿರುವ ಡಾ: ಅಮೂರ ಅವರು ಪಂಪ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದರು. (1/2)
— CM of Karnataka (@CMofKarnataka) September 28, 2020
ಜಿ.ಎಸ್.ಅಮೂರ ಅವರ ಅಂತ್ಯಕ್ರಿಯೆ ಮಧ್ಯಾಹ್ನ 1.30ಕ್ಕೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಪುತ್ರ ರವಿ ಆಮೂರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.