ಚಾ.ನಗರ: ಸರಳ ದಸರಾ ಆಚರಣೆಗೆ ನಿರ್ಧಾರ
Team Udayavani, Sep 28, 2020, 3:12 PM IST
ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದ ದಸರಾ ಮಹೋತ್ಸವವನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಾಂಪ್ರದಾಯಕವಾಗಿ ಹಾಗೂ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಎಸ್.ಸುರೇಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಹೀಗಾಗಿ ಸಾಮಾಜಿಕ ಅಂತರ, ಇನ್ನಿತರ ಕಾರಣಗಳಿಂದ ಈ ಹಿಂದಿನಂತೆ ಪೂಜೆ ಮತ್ತಿತರ ಸಾಂಪ್ರದಾಯಕ ಆಚರಣೆ ಮಾತ್ರ ಇರುವುದು ಒಳಿತು. ಆದರೆ ದೀಪಾಲಂಕಾರ ಮಾತ್ರ ಎಂದಿನಂತೆ ಇರಲಿ, ಬೇರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಬೇಡ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ,ಈ ಬಾರಿ ಕೊರೊನಾಕಾರಣದಿಂದ ಜನಸಂದಣಿಗೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು. ಜಿಪಂ ಸದಸ್ಯ ಕೆರೆಹಳ್ಳಿ ನವೀನ್ ಮಾತನಾಡಿ, 50 ರಿಂದ 100 ಜನರನ್ನು ಒಳಗೊಂಡಂತೆ ಸಾಂಪ್ರದಾಯಿಕವಾಗಿ ದಸರಾ ಆಚರಣೆಯಾಗಲಿ ಎಂದರು.
ಎಲ್ಲರ ಅಭಿಪ್ರಾಯ, ಸಲಹೆ ಆಲಿಸಿದ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್, ಈ ಬಾರಿ ಸಾಂಪ್ರದಾಯಕವಾಗಿ ದಸರಾ ಆಚರಿಸೋಣ, ಕೊರೊನಾ ಮುಕ್ತ ವಾದ ನಂತರವೈಭವದಿಂದಮುಂದಿನ ಬಾರಿ ದಸರಾ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದರು.
ಮನೆ ಮನೆ ದಸರಾ ಮೂಲಕ ಬಹುಮಾನ, ಪ್ರಮಾಣ ಪತ್ರ ವಿತರಣೆ ಮಾಡಬಹುದೆ ಎಂಬ ಬಗ್ಗೆಯೂ ಚಿಂತಿಸಬಹುದು. ಆದರೆ, ನಗರದಲ್ಲಿ ದೀಪಾಲಂಕಾರ ಈ ಹಿಂದಿನಂತೆ ಇರಲಿ. ಎಲ್ಲರ ಅಭಿಪ್ರಾಯದಂತೆ ದಸರಾ ಸರಳ ಆಚರಣೆ ಇರಲಿ ಎಂದರು.
ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆನ್‌ಲೈನ್ ಮೂಲಕ ಮಾತನಾಡಿ, ನಗರದ ಪ್ರಮುಖ ರಸ್ತೆ, ಉದ್ಯಾನವನಗಳಿಗೆ ದೀಪಾಲಂಕಾರಕ್ಕಾಗಿಮುಂದೆ ಬರುವ ಪ್ರಾಯೋಜಕರೊಂದಿಗೆ ಸಮಾಲೋಚಿಸಲಾಗುವುದು, ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ನವರಾತ್ರಿ ಸಂದರ್ಭದಲ್ಲಿ ಪೂಜೆ-ಪುನಸ್ಕಾರಕ್ಕಾಗಿ ತಿಳಿಸಲಾಗುವುದು ಎಂದರು.
ತಾಪಂ ಉಪಾಧ್ಯಕ್ಷ ಕೆ.ರವೀಶ್, ಜಿಪಂ ಸಿಇಒ ಹರ್ಷಲ್ ಬೋಯಲ್ ನಾರಾಯಣ್ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಹೆಚ್ಚುವರಿ ಎಸ್ಪಿ ಅನಿತಾ ಹದ್ದಣ್ಣನವರ್, ಎಸಿ ಡಾ. ಗಿರೀಶ್ ದಿಲೀಪ್ ಬೋಡ್ಲೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.