ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ: ಸುಕುಮಾರ್‌ ಶೆಟ್ಟಿ

ಜಾಲಾಡಿ- ಸಂತೋಷನಗರ ಡಿವೈಡರ್‌ ಕ್ರಾಸಿಂಗ್‌ ಬೇಡಿಕೆ

Team Udayavani, Sep 29, 2020, 2:06 AM IST

ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ: ಸುಕುಮಾರ್‌ ಶೆಟ್ಟಿ

ಕುಂದಾಪುರ: ಹೆಮ್ಮಾಡಿ ಸಮೀಪದ ಜಾಲಾಡಿ – ಸಂತೋಷನಗರ ಮಧ್ಯೆ “ಡಿವೈಡರ್‌ ಕ್ರಾಸಿಂಗ್‌’ಗೆ ಅನುಮತಿ ಕೊಡಲು ಹೆದ್ದಾರಿ ಪ್ರಾಧಿಕಾರ ನಿರಾಕರಿಸಿರುವ ವಿಚಾರವನ್ನು ಅಲ್ಲಿನ ಗ್ರಾಮಸ್ಥರು ಸೋಮವಾರ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಗಮನಕ್ಕೆ ತಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕರು ಈ ಬಗ್ಗೆ ಕೂಡಲೇ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತನಾಡಿ, ಡಿವೈಡರ್‌ ಕ್ರಾಸಿಂಗ್‌ಗೆ ಅನುಮತಿ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಹೆಮ್ಮಾಡಿ ಸಮೀಪದ ಜಾಲಾಡಿ – ಸಂತೋಷನಗರ ಮಧ್ಯೆ “ಡಿವೈಡರ್‌ ಕ್ರಾಸಿಂಗ್‌’ಗೆ ಅಲ್ಲಿನ ಜನ ಬೇಡಿಕೆ ಸಲ್ಲಿಸಿದ್ದರೂ ಅದಕ್ಕೆ ಅನುಮತಿ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರಾಕರಿಸಿರುವ ಕುರಿತಂತೆ “ಉದಯವಾಣಿ ಸುದಿನ’ವು ಸೆ. 28ರಂದು ವಿಸ್ತೃತವಾದ ವರದಿ ಪ್ರಕಟಿಸಿತ್ತು. ಈ ವರದಿಯನ್ನು ಆಧರಿಸಿ ಜಾಲಾಡಿ, ಸಂತೋಷನಗರ, ಬುಗುರಿಕಡು ಪರಿಸರದ ಜನ ಶಾಸಕರ ಗಮನಕ್ಕೆ ತಂದಿದ್ದು, ಅವರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ.

ಜನರ ಬೇಡಿಕೆಯೇನು?
ಜಾಲಾಡಿ ಹಾಗೂ ಸಂತೋಷನಗರದ ಜನ ಹೆಮ್ಮಾಡಿ ಸರ್ಕಲ್‌ ಅಥವಾ ತಲ್ಲೂರು ಜಂಕ್ಷನ್‌ಗೆ ಹೋಗಿ ಸುತ್ತು ಬಳಸಿಕೊಂಡು ಬರಬೇಕಾಗಿದೆ. ಇಲ್ಲದಿದ್ದರೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸಬೇಕು ಅಥವಾ 3 ಕಿ.ಮೀ. ದೂರದ ತಲ್ಲೂರು ಪೇಟೆಗೆ ಹೋಗಿ ತಿರುಗಿಸಿ ಬರಬೇಕು. ಕೆಲವರು ಅನಿವಾರ್ಯವಾಗಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದು, ಇದು ಅಪಾಯಕಾರಿಯಾಗಿದ್ದು, ಅನಿರೀಕ್ಷಿತ ಅವ ಘಡಗಳು ಸಂಭವಿಸುತ್ತಿವೆ. ಈ ಕಾರಣಕ್ಕೆ ಹೆಮ್ಮಾಡಿ ಜಂಕ್ಷನ್‌ನಿಂದ ಜಾಲಾಡಿಯವರೆಗೆ ಸರ್ವಿಸ್‌ ರಸ್ತೆ ನಿರ್ಮಿಸಬೇಕು ಎನ್ನುವ ಬೇಡಿಕೆ ಇಲ್ಲಿನ ಜನರದ್ದಾಗಿದೆ.

ಟಾಪ್ ನ್ಯೂಸ್

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.