ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರ ಆಕ್ರೋಶ


Team Udayavani, Sep 29, 2020, 1:09 PM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರ ಆಕ್ರೋಶ

ಚಿಕ್ಕಬಳ್ಳಾಪುರ: ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳಿಂದ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಚಿಕ್ಕಬಳ್ಳಾಪುರ ನಗರ ಹೊರತುಪಡಿಸಿ ಜಿಲ್ಲಾದ್ಯಂತ ಬಂದ್‌ ಯಶಸ್ವಿಯಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಬಂದ್‌ನ ಪ್ರಭಾವ ಕೇವಲ ಬೆಳಗ್ಗೆ 10 ಗಂಟೆವರೆಗೆ ಮಾತ್ರವಿತ್ತು. ತದ ನಂತರ ವ್ಯಾಪಾರ ವಹಿವಾಟು ನಡೆಯಿತು. ರೈತಸಂಘ ಹಾಗೂ ಹಸಿರು ಸೇನೆ, ಕನ್ನಡಪರ ಸಂಘಟನೆಗಳು ಪಂಜಿನ ಮೆರವಣೆಗೆ ನಡೆಸಿ ಕೇಂದ್ರ- ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಬೆಳಗ್ಗೆಯಿಂದಲೇ ಜನಜೀವನ ಎಂದಿನಂತೆ ಕಂಡು ಬಂತು. ಸರ್ಕಾರಿ ಕಚೇರಿ, ಬ್ಯಾಂಕ್‌ ತೆರೆದಿದ್ದವು. ಆದರೂ ಹಾಜರಾತಿ ವಿರಳವಾಗಿ ಕಂಡು ಬಂದಿತ್ತು. ಕೆಲ ವರ್ತಕರು ಸ್ವಪ್ರೇರಣೆಯಿಂದ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪರೋಕ್ಷವಾಗಿ ಬಂದ್‌ಗೆ ಬೆಂಬಲ ನೀಡಿದರು.

ಬಸ್‌ ಇದ್ದರೂ ಪ್ರಯಾಣಿಕರಿಲ್ಲ: ಸಾರಿಗೆ ಬಸ್‌ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸಿದರೂ ಜನರ ಸಂಚಾರ ಅಷ್ಟಾಗಿ ಕಂಡು ಬರಲಿಲ್ಲ. ಬಸ್‌ ನಿಲ್ದಾಣ ಬಿಕೋ ಎನ್ನುತ್ತಿತ್ತು. ಮತ್ತೂಂದಡೆ ಪ್ರತಿ ಭಟನಾಕಾರರು ಚಿಕ್ಕಬಳ್ಳಾಪುರದ ಡಿಪೋಗೆ ತೆರಳಿ ಬಸ್‌ ಸಂಚಾರ ಕೂಡಲೇ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು. ರೈತರ ಹೋರಾಟಕ್ಕೆ ಮಣಿದು ಬಸ್‌ ಅನ್ನು ಡಿಪೋಗೆ ವಾಪಸ್‌ಕರೆಸಿಕೊಂಡರು.

ಕೇಂದ್ರ -ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಚಿಕ್ಕಬಳ್ಳಾಪುರ ಶಿಡ್ಲಘಟ್ಟ ವೃತ್ತದಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಎಸ್ಪಿ ಮಿಥುನ್‌ ಕುಮಾರ್‌ ಸ್ಥಳಕ್ಕೆ ಬಂದುಪರಿಶೀಲಿಸಿದರು ಜಿಲ್ಲಾಕೇಂದ್ರದ ಎಪಿಎಂಸಿ ಮಾರು ಕಟ್ಟೆ ತೆರದಿತ್ತು.ಆದರೂ ರೈತರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದರಿಂದ ವ್ಯಾಪಾರ ಕುಂಠಿತಗೊಂಡಿತ್ತು.

ರೈತರ ಧರಣಿ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಬಂದ್‌ ಯಶಸ್ವಿಯಾಗಿ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ 234 ರಲ್ಲಿ ಮಾನವ ಸರಪಳಿ ನಿರ್ಮಿಸಿ ರೈತರು ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು, ರೈತ ಸಂಘದ ಮುಖಂಡರ ಮಧ್ಯೆ ಮಾತಿನ ಚಕಮುಖೀ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಿದ್ದ ರೈತರನ್ನು ಪಕ್ಕದಲ್ಲಿ ಎಳೆದು ತಂದಿದ್ದಾರೆ. ಇದೇ ರೀತಿಯಲ್ಲಿ ಜಂಗಮಕೋಟೆಯಲ್ಲಿ ರಾಜ್ಯ- ತಲದುಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಯತ್ನಿಸಿದ ರೈತ ಮುಖಂಡರನ್ನು ಶಿಡ್ಲಘಟ್ಟ ಗ್ರಾಮಾಂ ತರ ಠಾಣೆ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ರೈತ ಸಂಘದ ಅಧ್ಯಕ್ಷ ಶಿಡ್ಲಘಟ್ಟ ಸಿಪಿಐ ಕಚೇರಿ ಮುಂದೆ ಧರಣಿ ನಡೆಸಿ ಬಂಧಿತ ರೈತರ ಬಿಡುಗಡೆಗೆ ಆಗ್ರಹಿಸಿದರು.

ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಆಗ ಮಿಸಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿ ಕೆಲವೊಂದು ನಿಬಂಧನೆ ಹಾಕಿ ಬಂಧಿಸಿದ ರೈತರನ್ನು ಬಿಡುಗಡೆ ಮಾಡಿದ್ದಾರೆ. ಶಿಡ್ಲಘಟ್ಟ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಎಂದಿ ನಂತೆ ನಿರಾತಂಕವಾಗಿ ವ್ಯಾಪಾರ ವಹಿವಾಟು ನಡೆಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್‌ಕುಮಾರ್‌ ಅವರ ನೇತೃತ್ವದಲ್ಲಿಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರೈತ ಹಾಗೂ ಕಾಂಗ್ರೆಸ್‌ ಮುಖಂಡ ಯಲುವಹಳ್ಳಿ ರಮೇಶ್‌, ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾಧ್ಯಕ್ಷ ರಾಮನಾಥ್‌, ಕಾರ್ಯದರ್ಶಿ ವೇಣು ಗೋಪಾಲ್‌, ರೈತ ಸಂಘಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ, ಚಿಕ್ಕಬಳ್ಳಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ, ಸಿಪಿಎಂ ಜಿಲ್ಲಾ ಧ್ಯಕ್ಷ ಮುನಿಕೃಷ್ಣಪ್ಪ, ಸಿಪಿಎಂ ಮುನಿವೆಂಕಟಪ್ಪ, ಕನ್ನಡಪರ ಸಂಘಟನೆ ರಾಮೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.