ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅ.28ರಂದು ಚುನಾವಣೆ
Team Udayavani, Sep 29, 2020, 3:13 PM IST
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.
ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಜೂನ್ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.
ಇದನ್ನೂ ಓದಿ:ಚುನಾವಣಾ ಪರ್ವ: ಆರ್ ಆರ್ ನಗರ, ಶಿರಾ ಉಪಚುನಾವಣೆಗೆ ದಿನ ನಿಗದಿ
ಅಕ್ಟೋಬರ್ 1 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12ರಂದು ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.