6 ತಿಂಗಳೊಳಗೆ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ

Team Udayavani, Sep 30, 2020, 1:23 PM IST

6 ತಿಂಗಳೊಳಗೆ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ

ಚಾಮರಾಜನಗರ: ಜಿಲ್ಲೆಯನ್ನು ಇನ್ನು 6  ತಿಂಗಳೊಳಗೆ ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಲು ಅಗತ್ಯವಿರುವ ಕಾರ್ಯಯೋಜನೆ ರೂಪಿಸಿ ಇದರ ಅನುಷ್ಠಾನಕ್ಕೆ ಕಾರ್ಯೋನ್ಮುಖ ರಾಗುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಎಷ್ಟು ಸಂಖ್ಯೆಯಲ್ಲಿ ಬಾಲ ಕಾರ್ಮಿಕರಿದ್ದಾರೆ? ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ? ಎಂದು ಪತ್ತೆಹಚ್ಚಬೇಕು, ಅಗತ್ಯ ಪೂರ್ವ ಸಿದ್ಧತೆಯೊಂದಿಗೆ ಸಮೀಕ್ಷೆ ನಡೆಸಬೇಕು. ಕಾರ್ಯಕ್ಷಮತೆಹೆಚ್ಚಿಸಲುನೆರವಾಗುವಮೊಬೈಲ್‌ ಆ್ಯಪ್‌, ಸಾಫ್ಟ್ವೇರ್‌ ಅನ್ನು ಅಭಿವೃದ್ಧಿಗೊಳಿಸಿ ಕೊಳ್ಳಬೇಕು. ನಿಗದಿತ ನಮೂನೆಯನ್ನು ಸಿದ್ಧಪಡಿಸಿ ಕೊಳ್ಳಬೇಕು. ಇತರೆ ಇಲಾಖೆಗಳ ನೆರವು ಪಡೆದು ಸಮೀಕ್ಷೆ ಪೂರ್ಣಗೊಳಿಸಬೇಕೆಂದರು.

ಸಮೀಕ್ಷೆಗೆ ಮೊದಲು ಸಾಕಷ್ಟು ಜಾಗೃತಿ ಕಾರ್ಯ ಕ್ರಮಗಳನ್ನುನಡೆಸಬೇಕಿದೆ,ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕಿದೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾತ್ರವಲ್ಲ ಇತರೆ ಸಂಬಂಧಪಟ್ಟ ಇಲಾಖೆಗಳುಜೊತೆಗೂಡಿಜಂಟಿಕಾರ್ಯಾಚರಣೆ ನಡೆಸಿ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಬೇಕಿದೆ. ಈ ಎಲ್ಲವೂ ಯಶಸ್ವಿ ಯಾಗಲು ಕಾರ್ಯಬದ್ಧ ಯೋಜನೆ ತಯಾರಿ ಮಾಡಿಕೊಳ್ಳಬೇಕೆಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ  ಯೋಜನಾ ಬದ್ಧವಾಗಿ ಸಮೀಕ್ಷೆ ಕೈಗೊಳ್ಳಲು ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯಬೇಕು, ಆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೂ ಸಮೀಕ್ಷೆ ನಡೆಸಿ ಬಾಲ ಕಾರ್ಮಿಕ ಮುಕ್ತವೆಂದು ಘೋಷಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಗುರಿ ನಿಗದಿ ಪಡಿಸಿಕೊಂಡು ಕಾಲಮಿತಿಯೊಳಗೆ ಸಮೀಕ್ಷೆ ಕೈಗೊಳ್ಳಬೇಕು. ಈ ಬಗ್ಗೆ ಪ್ರಗತಿ ಪರಿಶೀಲನೆಯಾಗಬೇಕು ಎಂದರು.

ಫ‌ಲಕ ಪ್ರದರ್ಶಿಸಿ: ಬಾಲ ಕಾರ್ಮಿಕರ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಮಕ್ಕಳ ನೆರವಿಗಾಗಿ ಸಹಾಯವಾಣಿ ಸಂಖ್ಯೆ 1098 ಲಭ್ಯವಿದೆ. ಇದರ ಸದುಪಯೋಗಕ್ಕಾಗಿ ವ್ಯಾಪಕ ಪ್ರಚಾರ ಮಾಡಬೇಕಿದೆ. ಎಲ್ಲಾ ಸರ್ಕಾರಿ ವಾಹನ, ಪೊಲೀಸ್‌ ಠಾಣೆ, ರೈಲು, ಬಸ್‌ ನಿಲ್ದಾಣ, ಆಸ ³ತ್ರೆ, ಶಾಲೆ, ಮಾರುಕಟ್ಟೆ, ಹೋಟೆಲ್‌, ಅಂಗಡಿ ಮುಂಭಾಗ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯ ನ್ನೊಳಗೊಂಡ ಫ‌ಲಕಗಳನ್ನು ಪ್ರದರ್ಶಿಸ ಬೇಕು. ರೆಡಿಯೋ ಮೂಲಕವೂ ತಲುಪುವ ಹಾಗೆ ವ್ಯವಸ್ಥೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಅಧಿಕಾರಿ ಮಹೇಶ್‌, ಡಿವೈಎಸ್‌ಪಿ ಅನ್ಸರ್‌ ಅಲಿ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.