ಅ.2ರಿಂದ ಕಾಲು ಬಾಯಿ ಜ್ವರಕ್ಕೆ ಲಸಿಕೆ
Team Udayavani, Sep 30, 2020, 2:44 PM IST
ಹಾಸನ: ಜಿಲ್ಲೆಯಲ್ಲಿ ಅ.2ರಿಂದ ನ.15ರ ವರೆಗೆ ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ ಹಾಕುವ 17ನೇ ಸುತ್ತಿನ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಆರ್.ಗಿರೀಶ್, ಜಿಲ್ಲೆಯಲ್ಲಿ 6,56,156 ಜಾನುವಾರುಗಳಿದ್ದು, ಅವುಗಳ ಮಾಲಿಕರಿಗೆ ಕಾಲು ಮತ್ತು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಸ್ವರೂಪದ ಬಗ್ಗೆ ವ್ಯಾಪಕ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಂಡ ರಚಿಸಿ: 45 ದಿನ ಕಾಲ ನಡೆಯುವ 17ನೇ ಸುತ್ತಿನ ಸಾಮೂಹಿಕ ಕಾಲು ಮತ್ತು ಬಾಯಿ ಜ್ವರ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಪೂರ್ಣಗೊಳಿಸಲು ಪಶು ವೈದ್ಯರನ್ನೊಳಗೊಂಡ ವ್ಯವಸ್ಥಿತ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸ ಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕರಪತ್ರ ಹಂಚಿ ಜಾಗೃತಿ ಮೂಡಿಸಿ: ಗ್ರಾಪಂ ಕಚೇರಿಗಳ, ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಶು ಆರೋಗ್ಯ ಕೇಂದ್ರಗಳು ಸೇರಿ ಹಲವು ಕಡೆಗಳಲ್ಲಿ ಪೋಸ್ಟರ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿ, ಕರಪತ್ರ ಹಂಚುವ ಮೂಲಕವೂ ಜಾಗೃತಿ ಮೂಡಿಸಬೇಕು.
ಹೆಚ್ಚಿನ ವಾಹನ ಒದಗಿಸಿ: ಕಾಲು ಮತ್ತು ಬಾಯಿ ಜ್ವರದ ಕುರಿತು ಸ್ಥಳೀಯ ಸುದ್ದಿವಾಹಿನಿಗಳು ಹಾಗೂ ಆಕಾಶವಾಣಿಗಳ ಮೂಲಕ ರೈತರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು. ಲಸಿಕಾಕಾರ್ಯಕ್ಕೆ ಸಹಾಯ ವಾಗುವಂತೆ ಪಶು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಹಾಗೂ ಹಾಸನ ಹಾಲು ಒಕ್ಕೂಟವು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಒದಗಿಸಬೇಕು ಎಂದು ಹೇಳಿದರು.
ಪಿಡಿಒಗಳ ಮೂಲಕ ಪ್ರಚಾರ: ಜಿಪಂ ಸಿಇಒ ಬಿ.ಎ.ಪರಮೇಶ್ ಮಾತನಾಡಿ, ಕಾಲು, ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರತಿ ಹಳ್ಳಿಗಳಿಗೂ ಮಾಹಿತಿ ನೀಡಿ, ಅರಿವು ಮೂಡಿಸುವಂತೆ ಪಿಡಿಒ ಹಾಗೂ ಕಾರ್ಯದರ್ಶಿಗೆ
ಸೂಚನೆ ನೀಡಲಾಗುವುದು. ಇದೊಂದು ಪ್ರಮುಖ ಕಾರ್ಯಕ್ರಮವಾಗಿದ್ದು, ರೈತರು ಹೈನುಗಾರಿಕೆ ವೃದ್ಧಿಗೆ ಸಹಕಾರಿಯಾಗಿದೆ. ಹಾಗಾಗಿ ಪಶು ವೈದ್ಯಕೀಯ ಇಲಾಖೆ ಮೂಲಕ ಲಸಿಕಾ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೇಳಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕ ಡಾ.ಕೆ.ಆರ್.ರಮೇಶ್, ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಸುಂದರೇಶ್, ಹಾಸನ ಪಶು ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಶಿವಕುಮಾರ್, ಪಶು ವೈದ್ಯಕೀಯ ಕಾಲೇಜಿನ ಮೈಕ್ರೋ ಬಯೋಲಾಜಿಸ್ಟ್ ಡಾ.ರವೀಂದ್ರ ಹೆಗ್ಡೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ.ಜಾನಕಿ, ಡಾ. ವೆಂಕಟೇಶ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.