ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ
Team Udayavani, Oct 2, 2020, 6:49 PM IST
ಬೀದರ: ಹೆಚ್ಚಿನ ಮಳೆಯಿಂದಾಗಿ ಕೆರೆ ಮತ್ತು ಬಾವಿಗಳು ತುಂಬಿಕೊಂಡಿವೆ. ರಸ್ತೆಗಳು ಹಾಳಾಗಿದ್ದು, ಚರಂಡಿಗಳು ಅಲ್ಲಲ್ಲಿ ತುಂಬಿಕೊಂಡಿವೆ. ಈ ಬಗ್ಗೆ ಪಿಡಿಒಗಳು ಗಮನ ಕೊಡುತ್ತಿಲ್ಲವೆಂಬ ದೂರು ಬರುತ್ತಿವೆ. ಪಿಡಿಒಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಎಚ್ಚರಿಸಿದ್ದಾರೆ.
ಗ್ರಾಮಗಳಲ್ಲಿ ಚರಂಡಿಗಳನ್ನು ಶುಚಿಗೊಳಿಸದೇ ಇದ್ದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುವುದಲ್ಲದೇ ಮಲೇರಿಯಾ, ಡೆಂಘೀಯಂತಹ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಪಿಡಿಒಗಳನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಮಾಡಲು ಕ್ರಮ ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಬ್ಲೀಚಿಂಗ್ ಪೌಡರ್ ಹಾಕಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛ ಗೊಳಿಸಬೇಕು. ಗ್ರಾಮ ಗಳಲ್ಲಿ ಕೊಳಚೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸ ಬೇಕು. ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಕೆಸರು ತುಂಬಿಕೊಂಡಿದ್ದರೆ ಕೂಡಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ಸುಮಾರು 10-12 ಪಿಡಿಒಗಳ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ದೂರುಗಳಿವೆ. ಮುಂದಿನ ದಿನಗಳಲ್ಲಿ ದೂರುಗಳು ಪುನರಾವರ್ತನೆಯಾದಲ್ಲಿ ಅಂಥವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಅಮಾನತು ಮಾಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ಜನಹಿತದ ದೃಷ್ಟಿಕೋನದಿಂದ ಸೇವೆ ಸಲ್ಲಿಸಬೇಕು. ಗ್ರಾಮಗಳಿಗೆ ಪಿಡಿಒಗಳು ಭೇಟಿ ಕೊಡದಿದ್ದಲ್ಲಿ, ಮೂಲಭೂತ ಸೌಕರ್ಯ ಒದಗಿಸಲು ವಿಫಲರಾದಲ್ಲಿತಮಗೆ ದೂರು ನೀಡುವಂತೆ ಸಚಿವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಶೀಘ್ರ ಬೆಳೆ ಹಾನಿ ಪರಿಹಾರ ಒದಗಿಸಿ :
ಬೀದರ: ಅತಿವೃಷ್ಟಿಯಿಂದಾಗಿ ತೋಟಗಾರಿಕೆ ಬೆಳೆಗಳನ್ನು ಕಳೆದು ಕೊಂಡಿರುವ ಜಿಲ್ಲೆಯ ರೈತರಿಗೆ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮನವಿ ಮಾಡಿದ್ದಾರೆ. ಈ ಕುರಿತು ತೋಟಗಾರಿಕೆ ಇಲಾಖೆ ಸಚಿವ ನಾರಾಯಣ ಗೌಡ ಅವರಿಗೆ ಪತ್ರ ಬರೆದಿರುವ ಅವರು, ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳಾದ ಟೊಮ್ಯಾಟೋ, ಶುಂಠಿ,ಪಪ್ಪಾಯಿ, ಬಾಳೆ ಸೇರಿ ಅನೇಕ ಬೆಳೆಗಳು ಹಾನಿಯಾಗಿ ಕೃಷಿಕರು ಕಂಗಾಲಾಗಿದ್ದಾರೆ. ಜಿಲ್ಲೆಯ 21,600 ಹೆಕ್ಟೇರ್ ತೋಟಗಾರಿಕೆ ಜಮೀನಿನ ಪೈಕಿ 5 ಸಾವಿರ ಹೆಕ್ಟೇರ್ ಬೆಳೆ ಹಾಳಾಗಿದೆ. ಕಳೆದ 8-10 ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ಜಿಲ್ಲೆಯ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಬೆಳೆಗೆ ಸೂಕ್ತ ಪರಿಹಾರ ಒದಗಿಸಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.