ಭುಜಂಗ ಪಾರ್ಕ್: ರೇಡಿಯೋ ಟವರ್‌ಗೆ ಚಾಲನೆ
ಆಹ್ಲಾದಕರ ಸಂಜೆಗೆ ರೇಡಿಯೋ ಇಂಚರ
Team Udayavani, Oct 3, 2020, 4:18 AM IST
ಉಡುಪಿ: ಸುಂದರ ಸಂಜೆ, ಪಾರ್ಕ್‌ನಲ್ಲಿ ಹಾಯಾಗಿ ಕುಳಿತು ರೇಡಿಯೋ ಕೇಳಬೇಕು ಎಂಬ ಆಕಾಂಕ್ಷೆ ಹೊಂದಿರುವವರಿಗೆ ಇದೀಗ ಶುಭ ಸುದ್ದಿ. ಉಡುಪಿಯ ಪ್ರಸಿದ್ಧ ರೇಡಿಯೋ ಟವರ್ ಮತ್ತೆ ಕಾರ್ಯಾರಂಭ ಮಾಡಿದೆ.
ಗಾಂಧಿ ಜಯಂತಿಯಂದು ಲೋಕಾರ್ಪಣೆ
ಅಜ್ಜರಕಾಡುವಿನ ಭುಜಂಗ ಪಾರ್ಕ್ ನಲ್ಲಿ 1938ರಲ್ಲಿ ನಿರ್ಮಾಣಗೊಂಡಿರುವ ರೇಡಿಯೋ ಟವರ್ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಣೆ ಸ್ಥಗಿತಗೊಳಿಸಿತ್ತು. ಕಳೆದ ಬಾರಿಯ ಗಾಂಧಿ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ಇದನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಲು ಸೂಚಿಸಿದ್ದರು. ಅದರಂತೆ ಶುಕ್ರವಾರ ಗಾಂಧಿ ಜಯಂತಿ ಪ್ರಯುಕ್ತ ಶಾಸಕ ಕೆ.ರಘುಪತಿ ಭಟ್ ಅವರು ಉದ್ಘಾಟನೆ ನೆರವೇರಿಸಿದರು.
ಸಂಜೆ 5.30ಯಿಂದ 8ರವರೆಗೆ ಅವಕಾಶ
ದುರಸ್ತಿಗೊಂಡಿರುವ ಈ ಟವರ್ ಮೂಲಕ ಪಾರ್ಕ್‌ಗೆ ಆಗಮಿಸುವ ಸಾರ್ವಜನಿಕರು, ಟವರ್‌ನ ಕೆಳಗಡೆ ಇರುವ ಕಲ್ಲುಬಂಡೆ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕುಳಿತು ಪ್ರತಿದಿನ ಸಂಜೆ 5.30ರಿಂದ 8 ಗಂಟೆಯವರೆಗೆ ರೇಡಿಯೋ
ಕಾರ್ಯಕ್ರಮಗಳನ್ನು ಆಲಿಸಬಹುದಾಗಿದೆ.
ಹೊಸ ಮೈಕ್, ರೇಡಿಯೋ
ಟವರ್‌ನ ಹಳೆಯ ಮೂಲ ಸ್ವರೂಪದಲ್ಲಿ ಏನೂ ಬದಲಾವಣೆ ಮಾಡದೆ, ಹೊಸ ಮೈಕ್‌ಗಳು ಮತ್ತು ರೇಡಿಯೋ ಅಳವಡಿಸಲಾಗಿದೆ. ಕೇಳುಗರಿಗೆ ಹೊಸ ಅನುಭವ ನೀಡಲಿರುವ ಈ ಟವರ್ ಹೆಚ್ಚು ಕರ್ಕಶವಿಲ್ಲದೆ ಪಾರ್ಕ್‌ನೊಳಗಿನ ಕೇಳುಗರಿಗೆ ಮಾತ್ರ ಮಾರ್ದನಿಸಲಿದೆ. ಅಲ್ಲದೆ ಈ ಹಿಂದಿನಂತೆ ಬೆಳಗ್ಗೆ 8, ಮಧ್ಯಾಹ್ನ 12.30 ಮತ್ತು ರಾತ್ರಿ 8 ಗಂಟೆಗೆ ಟವರ್ ಮೂಲಕ ಅಲಾರಂ ಮೊಳಗಲಿದೆ.
ರೇಡಿಯೋ ಟವರ್ ನ ಉದ್ಘಾಟನೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.