ಕಾಂಗ್ರೆಸ್ಸಿಗರಿಂದ ದಾರಿ ತಪ್ಪಿಸುವ ಕೆಲಸ: ಸಂಸದ ಭಗವಂತ ಖೂಬಾ
Team Udayavani, Oct 3, 2020, 4:07 PM IST
ಬೀದರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ರೈತರ ಹಿತಕ್ಕಾಗಿ ಎಪಿಎಂಸಿ ಕಾಯ್ದೆ ಸೇರಿ ಹೊಸ ಮಸೂದೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ಸಿಗರು ಈ ಬಗ್ಗೆ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದು, ರೈತರು ಇಂತಹ ಹೇಳಿಕೆಗಳಿಂದ ದೂರವಿರಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಪ್ಪಂದವು ರೈತರಿಗೆ ಪೂರ್ವನಿಗದಿತ ದರ ಪಡೆಯಲು ಅನುವು ಮಾಡಿಕೊಡಲಿದೆ. ಯಾವಾಗ ಬೇಕಾದರೂ ರೈತರು ಒಪಂದದಿಂದ ನಿರ್ಗಮಿಸಬಹುದು. ರೈತರು ಭೂಮಿಯನ್ನು ಮಾರಾಟ, ಲೀಸ್ ಅಥವಾ ಅಡ ಇಡುವಿಕೆಗೆ ನಿಷೇಧಿಸಲ್ಪಟ್ಟಿದೆ ಎಂದು ಮಸೂದೆಯಲ್ಲಿ ಸ್ಪಷ್ಟವಾಗಿ ನಿರ್ದೇಶಿಸಲ್ಪಟ್ಟಿದೆ, ಒಪ್ಪಂದವು ಬೆಳೆಗಳಿಗೆ ಸಂಬಂಧಿಸಿದೆ ಹೊರತು ಭೂಮಿಗೆ ಸಂಬಂಧಿಸಿಲ್ಲ. ಕೃಷಿ ಮಸೂದೆಗೂ ಕನಿಷ್ಠ ಬೆಂಬಲ ಬೆಲೆಗೂ ಯಾವುದೇ ಸಂಬಂಧವಿಲ್ಲ. ಎಂ.ಎಸ್.ಪಿ. ನೀಡಲಾಗುತ್ತದೆ ಮತ್ತು ಮುಂದೆಯೂ ಅದು ಮುಂದುವರಿಯುತ್ತದೆ. ಕೃಷಿ ಮಸೂದೆಯೂ ರೈತರಿಗೆ ಸ್ವಾತಂತ್ರ್ಯ ನೀಡಲಿದೆ. ಈಗ ರೈತರು ತಮ್ಮ ಬೆಳೆಗಳನ್ನು ಯಾರಿಗೆ ಬೇಕಾದರೆ, ಯಾವಾಗ ಬೇಕಾದರೂ ಮಾರಾಟ ಮಾಡಬಹುದು ಮತ್ತು ಇದು ಒಂದು ರಾಷ್ಟ್ರ ಒಂದು ಮಾರುಕಟ್ಟೆ ಸೃಷ್ಟಿಸಲಿದೆ.
ರೈತನು ತಾನು ಬೆಳೆದ ಬೆಳೆಗಳನ್ನು ತನಗಿಷ್ಟವಾದಲ್ಲಿ, ತನಗೆ ಸರಿಹೊಂದುವ ಬೆಲೆಯಲ್ಲಿ ದೇಶಾದ್ಯಂತ ಎಲ್ಲಿ ಬೇಕಾದರೂ ಮಾರಾಟ ಮಾಡಲಿ ಎನ್ನುವ ಉದ್ದೇಶದಿಂದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ ಜಾರಿಗೆ ತರಲಾಗಿದೆ. ಇತರ ರಾಜ್ಯಗಳ ಪರವಾನಗಿ ಹೊಂದಿದ ವ್ಯಾಪಾರಿಗಳೊಂದಿಗೆ ನೇರವಾಗಿ ಒಪ್ಪಂದ ಮಾಡಿಕೊಂಡು ರೈತ ವ್ಯವಹರಿಸಬಹುದಾಗಿದೆ, ದಲ್ಲಾಳಿಗಳಿಂದ ಮುಕ್ತಿ ನೀಡುವುದು ಮಸೂದೆ ಉದ್ದೇಶವಾಗಿದೆ ಎಂದರು.
ಬೆಳೆ ಖಾತ್ರಿ ಮತ್ತು ಕೃಷಿ ಸೇವೆಗಳ ಮಸೂದೆಯಿಂದ ಸಣ್ಣ ರೈತ ಕೂಡ ನೇರವಾಗಿ ಸಗಟು ಮಾರಾಟಗಾರರೊಂದಿಗೆ ಮತ್ತು ರಫ್ತುದಾರರೊಂದಿಗೆ ನೇರ ಒಪ್ಪಂದ ಅಥವಾ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಬಹುದು. ಸರಿಯಾದ ಕೃಷಿ ಯಂತ್ರೋಪಕರಣಗಳನ್ನು ಖರೀದಿದಾರರೇ ರೈತರಿಗೆ ನೀಡುತ್ತಾರೆ. ಜತೆಗೆ, ತಾಂತ್ರಿಕ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುವರು. ಇದರಿಂದ ದೇಶದ ಬೆನ್ನೆಲುಬಾಗಿರುವ ರೈತನ ಆದಾಯ 2022ರವೆಳೆಗೆ ದ್ವಿಗುಣಗೊಳಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.