ಬಿಹಾರ ಚುನಾವಣೆ: ಸೀಟು ಹಂಚಿಕೆಯಲ್ಲಿ 50-50 ಸೂತ್ರ ಅನುಸರಿಸಿದ ಜೆಡಿಯು-ಬಿಜೆಪಿ: ವರದಿ
Team Udayavani, Oct 4, 2020, 1:01 PM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟದ ಸೀಟು ಹಂಚಿಕೆ ಬಹುತೇಕ ಅಂತಿಮ ಹಂತ ತಲುಪಿದ್ದು 50-50 ಸೂತ್ರವನ್ನು ಅನುಸರಿಸಿವೆ ಎಂದು ವರದಿ ತಿಳಿಸಿದೆ.
ಒಟ್ಟು 243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರ್ ನಲ್ಲಿ ಜೆಡಿಯು 122 ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 121 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ಮಾಧ್ಯಮ ಮೂಲಗಳು ತಿಳಿಸಿವೆ. ನಿತೀಶ್ ಕುಮಾರ್ ಅವರ ಪಕ್ಷವು ಜೀತಾನ್ ರಾಮ್ ಮಾಂಜಿ ಅವರ ಹಿಂದೂಸ್ತಾನಿ ಅವಮ್ ಮೋರ್ಚಾಗೆ ತನ್ನ ಕೋಟಾದಲ್ಲಿ ಅವಕಾಶ ನೀಡಿದರೆ, ಬಿಜೆಪಿ ಮೈತ್ರಿಕೂಟದಲ್ಲಿ ಉಳಿದುಕೊಂಡರೆ ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷಕ್ಕೆ ತನ್ನ ಪಾಲಿನಿಂದ ಸ್ಥಾನಗಳನ್ನು ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ ಬಿಹಾರದ ಆಡಳಿತರೂಢ ಮೈತ್ರಿಕೂಟ ಇದೀಗ ಸಂಕಷ್ಟಕ್ಕೆ ಸಿಲುಕಿದ್ದು ನಿತೀಶ್ ಕುಮಾರ್ ಮತ್ತು ಪಾಸ್ವಾನ್ ರ ಪುತ್ರ ಚಿರಾಗ್ ಪಾಸ್ವಾನ್ ನಡುವಿನ ದೀರ್ಘಕಾಲದ ಒಳಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಡಿ.ಕೆ. ರವಿ ಪತ್ನಿ ಕುಸುಮಾ
ಬಿಹಾರ ವಿಧಾನಸಭಾ ಚುನಾವಣೆಯು ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7ರಂದು ಮೂರು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್ ನಂತರ ದೇಶದಲ್ಲಿ ಎದುರಾಗುತ್ತಿರುವ ಮೊದಲ ವಿಧಾನಸಬೆ ಚುನಾವಣೆ ಇದಾಗಿದೆ.
ಏತನ್ಮಧ್ಯೆ ವಿಪಕ್ಷಗಳದ ಸೀಟು ಹಂಚಿಕೆಯೂ ಆಗಿದ್ದು, ಆರ್ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೀಟು ಹಂಚಿಕೆಯಲ್ಲಿ ಒಮ್ಮತಕ್ಕೆ ಬಂದಿವೆ. ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಪೈಕಿ 144 ಕ್ಷೇತ್ರಗಳಲ್ಲಿ ರಾಷ್ಟ್ರೀಯ ಜನತಾ ದಳ ಸ್ಪರ್ಧಿಸಲಿದೆ. ಇದರಲ್ಲಿ ವಿಐಪಿ ಮತ್ತು ಜೆಎಂಎಂ ಪಕ್ಷಗಳಿಗೂ ಒಂದಷ್ಟು ಸ್ಥಾನಗಳನ್ನ ಆರ್ಜೆಡಿ ಬಿಟ್ಟುಕೊಡಲಿದೆ. ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳನ್ನ ಪಡೆದಿದೆ. ಉಳಿದ ಸ್ಥಾನಗಳನ್ನ ಕಮ್ಯೂನಿಸ್ಟ್ ಪಕ್ಷಗಳಿಗೆ ನೀಡಲಾಗಿದೆ. ಆರ್ಜೆಡಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನ ಮಹಾಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.
ಇದನ್ನೂ ಓದಿ: ದೀಪಿಕಾ, ಶೃದ್ಧಾ, ಸಾರಾ ವಿಚಾರಣೆ ನಡೆಸಿದ್ದ ಎನ್ ಸಿಬಿ ಅಧಿಕಾರಿಗೆ ಕೋವಿಡ್ ಸೋಂಕು ದೃಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.