ಮತ್ತೊಂದು ರನ್ ಮಳೆಗೆ ಶಾರ್ಜಾ ರೆಡಿ: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ
Team Udayavani, Oct 4, 2020, 2:59 PM IST
ಶಾರ್ಜಾ: ಆಡಿರುವ ಎರಡು ಪಂದ್ಯಗಳಲ್ಲಿ ತಲಾ ಎರಡು ಪಂದ್ಯ ಗೆದ್ದಿರುವ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಶಾರ್ಜಾ ಅಂಗಳದಲ್ಲಿ ಮುಖಾಮುಖಿಯಾಗುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ವಾರ್ನರ್ ಸಾರಥ್ಯದ ಹೈದರಾಬಾದ್ ತಂಡ ಶುಕ್ರವಾರದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆರಂಭಿಕ ಆಘಾತ ಎದುರಿಸಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪ್ರಿಯಮ್ ಗರ್ಗ್ ಮತ್ತು ಅಭಿಷೇಕ್ ಶರ್ಮ ಜವಾಬ್ದಾರಿಯುತ ಆಟವಾಡಿ ತಂಡದ ಮೊತ್ತವನ್ನು 150ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿದ್ದರು ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಮೇಲೆ ತಂಡ ಹೆಚ್ಚು ಭರವಸೆ ಇರಿಸಿದೆ.
ವಾರ್ನರ್, ಬೇರ್‌ಸ್ಟೊ, ಮನೀಷ್ ಪಾಂಡೆ ಹಿಂದಿನ ಐಪಿಎಲ್‌ನಲ್ಲಿ ತೋರಿದ ಚಾರ್ಮ್ ತೋರುವಲ್ಲಿ ಈ ಬಾರಿ ಸಂಪೂರ್ಣ ವಿಫಲರಾಗುತ್ತಿದ್ದಾರೆ. ಈ ಪಂದ್ಯದಲ್ಲಿ ಸಿಡಿದು ನಿಲ್ಲುವ ಅನಿವಾರ್ಯ ಇವರ ಮೇಲಿದೆ.
ಇದನ್ನೂ ಓದಿ:ಟೂರ್ನಿ ಮಧ್ಯೆಯೇ ಕೆಕೆಆರ್ ತಂಡದಲ್ಲಿ ನಾಯಕತ್ವ ಬದಲಾವಣೆ? ಹೊಸ ಚರ್ಚೆ ಹುಟ್ಟುಹಾಕಿದ ಮಾರ್ಗನ್
ಮುಂಬೈ ಮೇಲ್ನೋಟಕ್ಕೆ ಹೈದರಾ ಬಾದ್‌ಗಿಂತ ಬಲಿಷ್ಠ ತಂಡ ಎಂಬುದರಲ್ಲಿ ಎರಡು ಮಾತಿಲ್ಲ. ಬ್ಯಾಟಿಂಗ್‌ನಲ್ಲಿ ನಾಯಕ ರೋಹಿತ್ ಶರ್ಮ, ಕ್ವಿಂಟನ್ ಡಿ ಕಾಕ್, ಪೊಲಾರ್ಡ್, ಪಾಂಡ್ಯ ಬ್ರದರ್ಸ್, ಇಶಾನ್ ಕಿಶನ್ , ಬೌಲಿಂಗ್‌ನಲ್ಲಿ ಬುಮ್ರಾ, ರಾಹುಲ್ ಚಹರ್, ಜೇಮ್ಸ್ ಪ್ಯಾಟಿನ್ಸನ್, ಟ್ರೆಂಟ್ ಬೌಲ್ಟ್ ಅವರೆಲ್ಲ ಮುಂಬೈ ತಂಡಕ್ಕೆ ಶಕ್ತಿ ತುಂಬಿದ್ದಾರೆ.
ತಂಡಗಳು:
ಮುಂಬೈ: ರೋಹಿತ್ ಶರ್ಮಾ (ನಾ), ಕ್ವಿಂಟನ್ ಡಿ ಕಾಕ್ (ವಿಕೀ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಹೈದರಾಬಾದ್: ಡೇವಿಡ್ ವಾರ್ನರ್ (ನಾ), ಜಾನಿ ಬೆರಿಸ್ಟೋ (ವಿ,ಕೀ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ / ಜೇಸನ್ ಹೋಲ್ಡರ್, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ ಸಿದ್ದಾರ್ಥ್ ಕೌಲ್, ಟಿ ನಟರಾಜನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.