20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ಸರ್ಕಾರದ ಕ್ರಮ ಖಂಡನೀಯ
Team Udayavani, Oct 4, 2020, 6:28 PM IST
ಬೆಂಗಳೂರು : ಜೀವವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ ಎಂದಿದ್ದಾರೆ.
ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲವನ್ನೂ ಸೂಚಿಸಿದ್ದಾರೆ ಎಂದಿದ್ದಾರೆ.
ಯೋಗ ವಿ.ವಿ.ಗೆ 15 ಎಕರೆ, ಗುಲ್ಬರ್ಗಾ ವಿ.ವಿ.ಗೆ 15 ಎಕರೆ ಸಿ.ಬಿ.ಎಸ್.ಸಿ. ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು ಎಂದರು.
ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿ.ವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ” ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ.
ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ,ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ.
ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು. ಬೆಳೆಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.