ತಲಕಾವೇರಿಯಲ್ಲಿ ತೀರ್ಥ ಪ್ರೋಕ್ಷಣೆ ಮಾತ್ರ : ಕೋವಿಡ್ ನೆಗೆಟಿವ್ ಪತ್ರ ಕಡ್ಡಾಯ
Team Udayavani, Oct 5, 2020, 10:56 AM IST
ಮಡಿಕೇರಿ : ಕಾವೇರಿ ನದಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಅ. 17ರಂದು ಬೆಳಗ್ಗೆ 7.03ಕ್ಕೆ ಕಾವೇರಿ ತೀರ್ಥ ಉದ್ಭವವಾಗಲಿದೆ. ಆದರೆ ಈ ಕ್ಷಣವನ್ನು ವೀಕ್ಷಿಸಲು ಆಗಮಿಸುವ ಹೊರ ಜಿಲ್ಲೆ ಹಾಗೂ ರಾಜ್ಯದ ಭಕ್ತರು ಕೋವಿಡ್ ಪರೀಕ್ಷೆಯ ದೃಢೀಕರಣ ಪತ್ರವನ್ನು ಜತೆಗೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಕಾವೇರಿ ತುಲಾಸಂಕ್ರಮಣದ ಪೂರ್ವಭಾವಿ ಸಭೆ ನಡೆಸಿದ ಅವರು ಆರೋಗ್ಯ ಸುರಕ್ಷಾ ಕ್ರಮಗಳೊಂದಿಗೆ ತಲಕಾವೇರಿಯಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತೀರ್ಥ ಉದ್ಭವದ ಸಂದರ್ಭ ಸಾಂಪ್ರದಾಯಿಕ ಆಚರಣೆಗಳಿಗೆ ಯಾವುದೇ ಅಡ್ಡಿ, ಆತಂಕಗಳಿರುವುದಿಲ್ಲ, ಆದರೆ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಹೊರಗಿನಿಂದ ಬರುವ ಭಕ್ತರ ಮೇಲೆ ನಿಗಾ ವಹಿಸಲಾಗುವುದು ಎಂದರು. ಕೊಡಗು ಜಿಲ್ಲೆಯ ಭಕ್ತರಿಗೆ ಕೋವಿಡ್ ಪರೀಕ್ಷೆಯ ಪ್ರಮಾಣಪತ್ರ ನಿಯಮ ಅನ್ವಯವಾಗುವುದಿಲ್ಲ. ಆದರೆ ಯಾರಿಗೂ ತಲಕಾವೇರಿಯ ಕೊಳಕ್ಕೆ ಇಳಿಯಲು ಅವಕಾಶ ನೀಡುವುದಿಲ್ಲ. ಬದಲಿಗೆ ಕಾವೇರಿ ತೀರ್ಥವನ್ನು ಭಕ್ತರ ಮೇಲೆ ಪ್ರೋಕ್ಷಣೆ ಮಾಡಲಾಗುತ್ತದೆ ಅಷ್ಟೇ ಎಂದರು.
ಇದನ್ನೂ ಓದಿ :ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ ಇಂದಿನಿಂದ ದುಬಾರಿ ದಂಡ: ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.