![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 6, 2020, 9:08 AM IST
ಬೆಂಗಳೂರು: ತಮ್ಮ ಬಗ್ಗೆ ಅವಮಾನಕರವಾಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ವಿರುದ್ಧ ಕುಸುಮಾ ಹನುಮಂತರಾಯಪ್ಪ ತಿರುಗೇಟು ನೀಡಿದ್ದಾರೆ.
ಕಳೆದೊಂದು ತಿಂಗಳಿನಿಂದ ಡ್ರಗ್ಸ್ ಜಾಲದ ಸುಳಿವು ನೀಡುತ್ತಾ ಕೇಂದ್ರ ಬಿಂದುವಾಗಿರುವ ಪ್ರಶಾಂತ್ ಸಂಬರಗಿ, ಸೋಮವಾರ ಡಿ ಕೆ ಶಿವಕುಮಾರ್ ಮನೆಗೆ ಸಿಸಿಬಿ ದಾಳಿ ನಡೆದ ನಂತರ ಕುಸುಮಾ ಬಗ್ಗೆ ಪೋಸ್ಟ್ ಮಾಡಿದ್ದರು.
ದಿವಂಗತ ಡಿ ಕೆ ರವಿ ಪತ್ನಿ ಕುಸುಮಾ ರವಿವಾರ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಚಿತ್ರವನ್ನು ಪೋಸ್ಟ್ ಮಾಡಿರುವ ಸಂಬರಗಿ” ಕುಸುಮಾರ ದುರಾದೃಷ್ಟ ಡಿ ಕೆ ರವಿಯಿಂದ ಡಿ ಕೆ ಶಿವಕುಮಾರ್ ಗೆ ವರ್ಗಾವಣೆಯಾಗಿದೆ “ ಎಂದಿದ್ದರು.
ಇದನ್ನೂ ಓದಿ:ಬೋಸ್ಟನ್ ವಿ.ವಿಯ ಎಂಎಸ್ ಸ್ನಾತಕೋತ್ತರ ಪದವೀಧರೆ ಡಿಕೆ ರವಿ ಪತ್ನಿ ಕುಸುಮಾ ರವಿ
ಸಂಬರಗಿ ಪೋಸ್ಟ್ ಗೆ ತಿರುಗೇಟು ನೀಡಿ ಕುಸುಮಾ ಬರೆದಿರುವ ಪೋಸ್ಟ್ ಹೀಗಿದೆ.
ಸಹೋದರ ಪ್ರಶಾಂತ್ ಸಂಬರಗಿಯವರೆ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವ ಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು.
ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.
ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?
ಇದನ್ನೂ ಓದಿ: ಡಿ ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಸೇರ್ಪಡೆ: ಏನಿದು ಕಾಂಗ್ರೆಸ್ ಹೊಸ ಪ್ಲ್ಯಾನ್?
ಹೆಣ್ಣು ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಲಕ್ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ?
ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.