ಅನಧಿಕೃತ ನೀರಿನ ಘಟಕ ಕಾಮಗಾರಿ ಸ್ಥಗಿತಗೊಳಿಸಿ


Team Udayavani, Oct 6, 2020, 2:02 PM IST

ಅನಧಿಕೃತ ನೀರಿನ ಘಟಕ ಕಾಮಗಾರಿ ಸ್ಥಗಿತಗೊಳಿಸಿ

ಮಂಡ್ಯ: ನಗರದ ಅಶೋಕನಗರದಲ್ಲಿನ ಬಾಲ ಭವನ ಉದ್ಯಾನವನದಲ್ಲಿ ಅನಧಿಕೃತವಾಗಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಕೂಡಲೇ ಕಾಮಗಾರಿಯನ್ನು ರದ್ದುಪಡಿಸಬೇಕು. ಅಕ್ರಮ ನಡೆಸಿರುವ ನಗರಸಭೆ ಆಯುಕ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದರಾಜು ಆಗ್ರಹಿಸಿದರು.

ನಗರಸಭೆ ಆಯುಕ್ತರು ಉದ್ದೇಶಪೂರ್ವಕವಾಗಿ ದಾಖಲೆ ಮತ್ತು ಮಾಹಿತಿಗಳನ್ನು ನೀಡದೆ, ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸದೇ ಉದ್ಯಾನದಲ್ಲಿ ಅನಧಿಕೃತ ಕಟ್ಟಡಗಳನ್ನು ಕಟ್ಟಲು ಸಹಕಾರ ನೀಡಿದ್ದಾರೆ. ಆದ್ದರಿಂದ ಇವರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಒತ್ತಾಯಿಸಿದರು.

ಉದ್ಯಾನವೇ ಮಾಯವಾಗುವ ಸಾಧ್ಯತೆ: ಯಾವುದೇ ಉದ್ಯಾನವನಗಳಲ್ಲಿ ಸಾರ್ವಜನಿಕ ಕಾಮಗಾರಿಗಳು ಶೇ.10ರಷ್ಟು ಜಾಗವನ್ನು ಮೀರ ಬಾರದು ಎಂಬ ಕಾನೂನಿದ್ದರೂ ಕೂಡ ಅಶೋಕ ನಗರದ ಉದ್ಯಾನವನದಲ್ಲಿ ಗ್ರಂಥಾಲಯ, ನೀರಿನ ಟ್ಯಾಂಕ್‌, ಬಾಲಭವನ ಸೇರಿ ಶೇ.25ರಷ್ಟು ಸ್ಥಳ ಬಳಕೆಯಾಗಿದೆ. ಹಾಗಿದ್ದರೂ ಕೂಡ ಉದ್ಯಾನಗಳ ಕಾಯ್ದೆಗೆ ವಿರುದ್ಧವಾಗಿ ಈಗ ಶುದ್ಧ ನೀರಿನ ಘಟಕ ಮಾಡಲು ಕಾಮಗಾರಿ ನಡೆಸಲಾಗಿದೆ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಉದ್ಯಾ ನವೇ ಮಾಯವಾಗಿ ಕೇವಲ ಕಟ್ಟಡಗಳೇ ಕಂಡು ಬಂದರೆ ಅಚ್ಚರಿಯಿಲ್ಲ ಎಂದುಕಳವಳ ವ್ಯಕ್ತಪಡಿಸಿದರು.

ಅನಧಿಕೃತ ಕಟ್ಟಡಕ್ಕೆ ಅವಕಾಶ ಬೇಡ: ಸದ್ಯ ಈ ಉದ್ಯಾನದಲ್ಲಿ ಆಸಕ್ತ ನಾಗರೀಕರೇ ಸ್ವಂತ ಹಣ ಬಳಸಿ ಪಾರ್ಕ್‌ನ್ನು ಅಭಿವೃದ್ಧಿಗೊಳಿಸಿದ್ದಾರೆ. ಆದ್ದ ರಿಂದ ನೀರಿನ ಘಟಕವನ್ನು ಬೇರೆ ಕಡೆ ಮಾಡಿಕೊಳ್ಳಲಿ, ಪಾರ್ಕ್‌ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಳ್ಳಲು ಅನಧಿಕೃತ ಕಟ್ಟಡಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ಪೌರಾಯುಕ್ತರಿಂದ ಕರ್ತವ್ಯ ಲೋಪ: ಜಿಲ್ಲಾಧಿಕಾರಿಯವರನ್ನು 19ನೇ ವಾರ್ಡ್‌ ಅಶೋಕನಗರದ ಸಾರ್ವಜನಿಕರು ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದರು. ಆಗ ಜಿಲ್ಲಾಧಿಕಾರಿಗಳು ಪೌರಾಯುಕ್ತರಿಗೆ ಕರೆ ಮಾಡಿ ಕಾಮಗಾರಿ ಮುಂದುವರಿಸದಂತೆ ಗುತ್ತಿಗೆದಾರರಿಗೆ ಸೂಚಿಸುವಂತೆ ತಿಳಿಸಿದ್ದರು.ಆದರೆ, ಆಯುಕ್ತರು ಗುತ್ತಿಗೆದಾರರಿಗೆ ನೋಟಿಸ್‌ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ. ಇವರಜೊತೆಗೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿಕುಮಾರ್‌, ವಾರ್ಡ್‌ನ ಅಭಿಯಂತರ ರಾಜೇಗೌಡ, ಇವರ ಕರ್ತವ್ಯ ಲೋಪದಿಂದ ವಾರ್ಡ್‌ನ ಸಾರ್ವಜನಿಕರು ಹಾಗೂ ಅನಧಿಕೃತ ಉಪಗುತ್ತಿಗೆದಾರರಾದ ಶೇಖರ್‌ ಮಧ್ಯೆ ವಾಗ್ವಾದಗಳು ಮತ್ತು ಸಂಘರ್ಷಗಳು ನಡೆಯಲು ಕಾರಣವಾಗಿವೆ. ಇದರ ವಿರುದ್ಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ ಎಂದರು.

ಇದರ ಬಗ್ಗೆ ಪೌರಾಡಳಿತ ನಿರ್ದೇಶಕರಿಗೆ ಮನವಿ ಮಾಡಲಾಗಿತ್ತು. ಡೀಸಿ ಹಾಗೂ ಪೌರಾಡಳಿತ ನಿರ್ದೇ ಶಕರ ಆದೇಶವನ್ನು ತಾತ್ಸಾರ ಹಾಗೂ ನಿರ್ಲಕ್ಷ್ಯ ಮಾಡಿದ್ದಾರೆ. ಸುಮಾರು 100 ದಿನಗಳಿಗೂ ಹೆಚ್ಚು ಅವಧಿ ಮುಗಿದಿದ್ದರೂ ಕಾಮಗಾರಿ ರದ್ದುಪಡಿಸುವ ಬಗ್ಗೆ ಯಾವುದೇ ಅಗತ್ಯಕ್ರಮಕೈಗೊಂಡಿಲ್ಲ ಎಂದರು.

ಹಣಕ್ಕಾಗಿ ಖಾಸಗಿಗೆ: ಸಾರ್ವಜನಿಕ ಹಿತಾದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಘಟಕ ಸ್ಥಾಪಿಸುತ್ತಿಲ್ಲ.ಹಣಕ್ಕಾಗಿ ಖಾಸಗಿಯವರಿಗೆ ವಹಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆಯಾವುದೇ ಅನುಕೂಲವಾಗುವುದಿಲ್ಲ. ನೀರು ಪರಿಷ್ಕರಣೆ ಮಾಡಿ ಮನೆ ಮನೆಗಳಿಗೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಆರೋಪಿಸಿದರು.

ಸ್ಲಂಗಳಲ್ಲಿ ಮಾಡಲಿ: ನಗರದಲ್ಲಿ 26 ಸ್ಲಂಗಳಿವೆ. ಆದರೆ, ಅಲ್ಲಿ ಒಂದೂ ಶುದ್ಧ ನೀರಿನ ಘಟಕ ಸ್ಥಾಪಿ ಸಿಲ್ಲ. ಜನರ ‌ ಹಿತಕ್ಕಾಗಿ ಮಾಡುವವರು ಸ್ಲಂ ಜನರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲಿ. ಅದನ್ನು ಬಿಟ್ಟು ಸಾರ್ವಜನಿಕ ಹಣವ‌ನ್ನು ವ್ಯಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಪೌರಾಯುಕ್ತರಾದ ಲೋಕೇಶ್‌ ಅವರು ಸಮುದಾಯ ವ್ಯವಹಾರಗಳ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವಅರ್ಹತೆ ಹೊಂದಿದ್ದು,ಪೌರಾಯುಕ್ತರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ಅರ್ಹತೆ ಹೊಂದಿಲ್ಲ. ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸ ಬೇಕಾದ ಪೌರಾಯುಕ್ತರು, ಗುತ್ತಿಗೆದಾರರಿಗೆ ಸಹ ಕಾರ ನೀಡುವುದರ ಮೂಲಕ ಅನಧಿಕೃತವಾಗಿ ಉದ್ಯಾನಗಳಲ್ಲಿ ಕಟ್ಟಡಗಳನ್ನು ನಿರ್ಮಿಸಲು ಕಾರಣರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋಷ್ಠಿಯಲ್ಲಿ ಡಾ.ಬಿ.ಕೆ.ಸುರೇಶ್‌, ನಾಗಾನಂದ, ಜಗದೀಶ್‌, ರಾಜೇಶ್‌, ರೇಣುಕ, ನೀರಜ್‌ ಇತರರಿದ್ದರು.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.