ಹತ್ರಾಸ್‌ ಅತ್ಯಾಚಾರಕ್ಕೆ ಖಂಡನೆ

Team Udayavani, Oct 6, 2020, 2:53 PM IST

ಹತ್ರಾಸ್‌ ಅತ್ಯಾಚಾರಕ್ಕೆ ಖಂಡನೆ

ಚನ್ನಪಟ್ಟಣ:ಉತ್ತರಪ್ರದೇಶದಹತ್ರಾಸ್‌ನಲ್ಲಿನಡೆದಿರುವ ಯುವತಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಸಂಘಟನೆಗಳಿಂದ ಪಟ್ಟಣದ ಅಂಬೇಡ್ಕರ್‌ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ರಾಮು, ದೇಶದಲ್ಲಿ ಆಡಳಿತನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಮ ರಾಜ್ಯದಲ್ಲಿ ರಾವಣನ ಆಡಳಿತ ನಡೆಸುತ್ತಿದೆ. ಹೆಣ್ಣುಮಕ್ಕಳಿಗೆ ದೇಶದಲ್ಲಿ ರಕ್ಷಣೆ ಇಲ್ಲ. ಈ ಸರ್ಕಾರವನ್ನು ಮೊದಲು ಕಿತ್ತೂಗೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಖಂಡ ಶರತ್‌ಚಂದ್ರ ಮಾತನಾಡಿ, ಹಣ್ಣುಮಕ್ಕಳ ‌ ಮೇಲೆ ನಿರಂತರವಾಗಿ ಅತ್ಯಾಚಾರ,ಕೊಲೆ,ಲೈಂಗಿಕ ದೌರ್ಜನ್ಯ ಎಸಗುವ ಪ್ರವೃತ್ತಿ ಹೆಚ್ಚಾಗುತ್ತಿದ್ದು,  ಉತ್ತರಪ್ರದೇಶ ಸರ್ಕಾರ ಇದನ್ನು ತಡೆಗಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು. ಕಿಸಾನ್‌ ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಆರ್‌ .ನವ್ಯಶ್ರೀ ಮಾತನಾಡಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ನಾಲ್ವರು ಅರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು.ಕುಟುಂಬದ ಸದಸ್ಯರಿಗೆಗೊತ್ತಾಗದಂತೆ ಅತ್ಯಾಚಾರ ನಡೆಸಿ ಸಂತ್ರಸ್ತೆಯ ಶವಸಂಸ್ಕಾರ ನಡೆಸಿದ ಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಪಡಿಸಿದರು.

ದಸಂಸ ಕುಮಾರ್‌ಮಾತನಾಡಿ, ಯೋಗಿ ಆದಿತ್ಯನಾಥ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿಸಂಪೂರ್ಣ ವಿಫಲವಾಗಿದ್ದು, ಈ ಸರ್ಕಾರವನ್ನು  ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಕರವೇ ತಾಲೂಕು ಅಧ್ಯಕ್ಷ ಸಾಗರ್‌ ಮಾತನಾಡಿ, ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯ ಮಾಡಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸೈಯದ್‌ ನೂರುದ್ದೀನ್‌, ಜೆಡಿಎಸ್‌ ಮುಖಂಡ ಜಯಕಾಂತ್‌, ಮತ್ತೀಕೆರೆ ಹನುಮಂತಯ್ಯ, ಸ್ವರಾಜ್‌ ಸಂಘಟನೆಯ ಸುಕನ್ಯ, ದಲಿತ ಮುಖಂಡ ಸಿದ್ದರಾಮಯ್ಯ, ಕದಂಬ ಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್‌, ದಲಿತ ಮುಖಂಡರಾದ ಎಸ್‌ .ಸಿ.ಶೇಖರ್‌, ಸಿದ್ದರಾಮು, ಪ್ರದೀಪ್‌ ಅಪ್ಪಗೆರೆ, ರಘುರಾಮ್‌ ಸೇರಿದಂತೆ ಎಸ್‌ಡಿಪಿಐ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.