ಬೇಡಿಕೆ ಈಡೇರಿಕೆಗೆ ಹೊರಗುತ್ತಿಗೆ ನೌಕರರಿಂದ ಪತ್ರ ಚಳವಳಿ

Team Udayavani, Oct 6, 2020, 4:45 PM IST

ಬೇಡಿಕೆ ಈಡೇರಿಕೆಗೆ ಹೊರಗುತ್ತಿಗೆ ನೌಕರರಿಂದ ಪತ್ರ ಚಳವಳಿ

ದಾವಣಗೆರೆ: ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 12ನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ 300ಕ್ಕೂ ಹೆಚ್ಚು ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿಶ್ವೇಶ್ವರಯ್ಯ ಉದ್ಯಾನದಲ್ಲಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವ ಮೂಲಕ ವಿನೂತನ ಚಳವಳಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಎನ್‌.ಸಿ. ಹಾಲಸ್ವಾಮಿ, ರಾಜ್ಯ  ಸಮಿತಿ ಸೆಪ್ಟೆಂಬರ್‌ 24 ರಿಂದ ಕೆಲಸ ಬಹಿಷ್ಕರಿಸಿಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಇಲಾಖೆಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರುಶಾಂತಿಯುತವಾಗಿ ಧರಣಿ ನಡೆಸುತ್ತಿದ್ದೇವೆ.ದಾವಣಗೆರೆಯಲ್ಲೂ 12 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದು ಪತ್ರ ಚಳವಳಿ ಮೂಲಕ ಸರ್ಕಾರಕ್ಕೆ ನಮ್ಮ ಹೋರಾಟದ ಉದ್ದೇಶ ತಿಳಿಸಿದ್ದೇವೆ ಎಂದರು.

ನಾವು ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಕೆಲಸ ಕಾಯಂ ಮಾಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದೆ ಅಧಿಕಾರಿಗಳ ಮೂಲಕ ಶಿಸ್ತುಕ್ರಮದ ಎಚ್ಚರಿಕೆ ನೀಡಲು ನಿರ್ದೇಶನಮಾಡುತ್ತಿರುವುದು ವಿಷಾದನೀಯ. ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ್ದಾರೆ.ಪ್ರಾಣ ಪಣಕ್ಕಿಟ್ಟು ಕೆಲಸ ಮಾಡಿದ ನಮಗೆ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ನೋಟಿಸ್‌ ಜಾರಿ ಮಾಡುವ ಮೂಲಕ ನ್ಯಾಯಯುತ ಹೋರಾಟ ಹತ್ತಿಕ್ಕುವಕೆಲಸ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾನ ವೇತನ, ಸೇವಾ ಭದ್ರತೆ, ಎಲ್ಲ ಹುದ್ದೆಗಳಿಗೆ ವೇತನ ಭತ್ಯೆ, ಶ್ರೇಣಿ ನೀಡಬೇಕು. ಹರಿಯಾಣ ರಾಜ್ಯದ ಮಾದರಿಯಲ್ಲಿ ಮಾನವಸಂಪನ್ಮೂಲ ನಿಯಮ ಜಾರಿಗೊಳಿಸಬೇಕು, ಮಧ್ಯವರ್ತಿಗಳಿಲ್ಲದೇ ವೇತನ ಇಲಾಖೆ ನೇರವಾಗಿ ಪಾವತಿಮಾಡಬೇಕು, ಬೋನಸ್‌ ನೀಡಬೇಕು, ವರ್ಗಾವಣೆಗೆ ಅವಕಾಶ ನೀಡಬೇಕು ಹೀಗೆಒಟ್ಟು 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಪತ್ರ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡಾ| ಮಂಜುನಾಥ್‌, ಪ್ರಮುಖರಾದ ಮಂಜುನಾಥ್‌ ಎ.ಎಲ್‌., ಲೀಲಾವತಿ, ಡಾ| ಅಂದನಗೌಡ ಪಾಟೀಲ್‌, ಅಂಬರೀಷ್‌, ಸಚಿನ್‌ ಹಾಗೂ ರವಿಕುಮಾರ್‌ ಹೊಳಲ್ಕೆರೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.