ತುರ್ತು ಸ್ಪಂದನ ಸಹಾಯಕ್ಕೆ 112 ಸಹಾಯವಾಣಿ ಪ್ರಾಯೋಗಿಕ ಅನುಷ್ಠಾನ
Team Udayavani, Oct 6, 2020, 6:17 PM IST
ಹಾವೇರಿ: ಅಪರಾಧ, ದುರಂತ, ಅವಘಡ, ವಿಪತ್ತು ಸೇರಿದಂತೆ ಇನ್ನಿತರ ಸಮಸ್ಯೆಯಲ್ಲಿ ಸಿಲುಕಿದವರನ್ನು ಒಂದೇ ಭಾರತ ಒಂದೇ ತುರ್ತು ಕರೆ 112 ಸಹಾಯವಾಣಿ ಸಂಖ್ಯೆ ಮೂಲಕ ಸಂಪರ್ಕಿಸಲು ನೂತನ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಂದೇ ಭಾರತ ಒಂದೇ ತುರ್ತು ಕರೆ ಪರಿಕಲ್ಪನೆಯ ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆಯನ್ನು ಕೇಂದ್ರ ಗೃಹ ಇಲಾಖೆ ಜಾರಿಗೆ ತಂದಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಿದೆ. ಇದರಲ್ಲಿ ಹಾವೇರಿ ಜಿಲ್ಲೆ ಒಳಗೊಂಡಿದೆ. ಇನ್ನು ಮುಂದೆ ಜಿಲ್ಲೆಯ ಸಾರ್ವಜನಿಕರು ತುರ್ತು ಕರೆಗಾಗಿ ಪೊಲೀಸ್ ನೆರವು ಪಡೆಯಲು 112 ಸಂಖ್ಯೆಗೆ
ಡಯಲ್ ಮಾಡಲು ಮನವಿ ಮಾಡಿದರು.
ಇದನ್ನೂ ಓದಿ :ಚಾಮರಾಜನಗರ : 73 ಮಂದಿಯಲ್ಲಿ ಕೋವಿಡ್ ಪ್ರಕರಣ ದೃಢ: 131 ಮಂದಿ ಗುಣಮುಖ
ಪೊಲೀಸ್ ನೆರವು, ಅಗ್ನಿಶಾಮಕ ದಳದ ನೆರವು ಅಥವಾ ಆಂಬ್ಯುಲೆನ್ಸ್ ಸೇವೆ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು (ಇಆರ್‌ಎಸ್‌ಎಸ್) ಎಮರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ಎಲ್ಲಿಂದಲೇ ಕರೆ ಬಂದರೂ ತುರ್ತಾಗಿ ಅಲ್ಲಿಗೆ ತಲುಪಿಸಿ ರಕ್ಷಣೆ ಒದಗಿಸಲು ಅನುಕೂಲವಾಗಲಿದೆ. 112ಕ್ಕೆ ಕರೆ
ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕೀಕೃತ ತುರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15ರಿಂದ 17 ನಿಮಿಷದಲ್ಲಿ ವಾಹನ ಅಲ್ಲಿಗೆ ತಲುಪುತ್ತದೆ ಎಂದು
ತಿಳಿಸಿದರು. ಜಿಲ್ಲೆಗೆ ಈ ಉದ್ದೇಶಕ್ಕಾಗಿ 14 ಬೀಟ್ ವಾಹನ ಪೂರೈಸಲಾಗಿದೆ. ಒಂದು ವಾಹನದಲ್ಲಿ ಒಬ್ಬ ಎಎಸ್‌ಐ, ಒಬ್ಬ ಕಾನ್ಸ್‌ಟೇಬಲ್ ಹಾಗೂ ವಾಹನ ಚಾಲಕ ಸೇರಿ ಮೂರು ಜನ ಸಿಬ್ಬಂದಿಗಳಿರುತ್ತಾರೆ.
ಇದನ್ನೂ ಓದಿ :ಇನ್ಮುಂದೆ ಬರಲಿದೆ ಗೂಗಲ್ ಪೇಪರ್ ಫೋನ್ : ಇದು ಜಗತ್ತೆ ನಿಬ್ಬೆರಗಾಗಿಸುವ ಹೊಸ ಅವಿಷ್ಕಾರ
30 ಜನ ಪುರುಷ, 4 ಜನ ಮಹಿಳಾ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ದಿನದ 24 ತಾಸುಗಳು ನಿರಂತರ 2 ಪಾಳೆಯದಲ್ಲಿ
ಪ್ರಾಯೋಗಿಕವಾಗಿ ಚಟುವಟಿಕೆ ಪ್ರಾರಂಭವಾಗಿದೆ ಎಂದು ತಿಳಿಸಿದರು.
112 ಸಂಖ್ಯೆಯ ವಾಹನದಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನ ಅಳವಡಿಸಲಾಗಿದೆ. ಇದರಿಂದ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಅನುಕೂಲವಾಗಲಿದೆ. ಇನ್ನು ಮುಂದೆ ಕಂಟ್ರೋಲ್ ರೂಂ ಸಂಖ್ಯೆ 100, 108 ಸಹಾಯವಾಣಿ ಸಂಖ್ಯೆ
ನೂತನ ಸಹಾಯವಾಣಿ ಸಂಖ್ಯೆ 112ರಲ್ಲಿ ವಿಲೀನವಾಗಲಿದೆ. ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸ್ ಸಿಬ್ಬಂದಿ ನೆರವು ಪಡೆಯಬಹುದು ಎಂದರು. ಈ ಸಂದರ್ಭದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಇನ್ಸ್ ಪೆಕ್ಟರ್ ಉಮೇಶ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.