ಹತ್ರಾಸ್ ಪ್ರಕರಣ:ತನಿಖಾ ವರದಿ ಸಲ್ಲಿಸಲು ಎಸ್ ಐಟಿಗೆ ಮತ್ತೆ 10 ದಿನಗಳ ಕಾಲಾವಕಾಶ: ಸಿಎಂ
ಹತ್ರಾಸ್ ಎಂಬ ಹಳ್ಳಿಯಲ್ಲಿ ದಲಿತ ಯುವತಿ ಮೇಲೆ ನಾಲ್ವರು ಹಲ್ಲೆ ನಡೆಸಿದ್ದು, ಇದರಿಂದ ಆಕೆ ಗಂಭೀರವಾಗಿ ಗಾಯಗೊಂಡಿದ್ದಳು.
Team Udayavani, Oct 7, 2020, 12:55 PM IST
ಲಕ್ನೋ/ಹತ್ರಾಸ್: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಹತ್ರಾಸ್ ದಲಿತ ಯುತಿಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ ತನಿಖಾ ವರದಿ ಸಲ್ಲಿಸಲು ಉತ್ತರಪ್ರದೇಶ ಸರ್ಕಾರ ಮತ್ತೆ 10 ದಿನಗಳ ಕಾಲಾವಕಾಶ ನೀಡಿದೆ.
ಹತ್ರಾಸ್ ಪ್ರಕರಣದ ತನಿಖಾ ವರದಿಯನ್ನು ಎಸ್ ಐಟಿ ಬುಧವಾರ(ಅಕ್ಟೋಬರ್ 07, 2020) ಸರ್ಕಾರಕ್ಕೆ ಸಲ್ಲಿಸಬೇಕಾಗಿತ್ತು. ಆದರೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತ್ತೆ ಹತ್ತು ದಿನಗಳ ಕಾಲಾವಧಿ ನೀಡಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ ಐಟಿ ನೀಡಲಿರುವ ವರದಿಯ ಗಡುವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ತು ದಿನಗಳ ಕಾಲ ವಿಸ್ತರಿಸಿರುವುದಾಗಿ ಉತ್ತರಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಕೆ ಅವಸ್ಥಿ ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ತಿಳಿಸಿದೆ.
ಸೆಪ್ಟೆಂಬರ್ 14ರಂದು ಉತ್ತರಪ್ರದೇಶದ ಹತ್ರಾಸ್ ಎಂಬ ಹಳ್ಳಿಯಲ್ಲಿ ದಲಿತ ಯುವತಿ ಮೇಲೆ ನಾಲ್ವರು ಹಲ್ಲೆ ನಡೆಸಿದ್ದು, ಇದರಿಂದ ಆಕೆ ಗಂಭೀರವಾಗಿ ಗಾಯಗೊಂಡಿದ್ದಳು. ಅಲ್ಲದೇ ಆಕೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.