ಬಿಜೆಪಿ ಮುಖಂಡ ಶುಕ್ಲಾ ಹತ್ಯೆ: ಟಿಎಂಸಿ, ಬಿಜೆಪಿ ನಡುವೆ ವಾಕ್ಸಮರ
ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೊಪ್ಪಿಸಿದೆ.
Team Udayavani, Oct 6, 2020, 2:41 PM IST
ಕೋಲ್ಕತಾ: ಪಶ್ಚಿಮ ಬಂಗಾಳದ “ಉತ್ತರ 24 ಪರಗಣಾಸ್’ ಜಿಲ್ಲೆಯ ತಿತಾಗಢ ಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದ ಬಿಜೆಪಿ ನಾಯಕ ಮನೀಶ್ ಶುಕ್ಲಾರವರ
ಹತ್ಯೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ವಿಪಕ್ಷ ಬಿಜೆಪಿ ನಡುವಿನ ಬಹಿರಂಗ ವಾಕ್ಸಮರಕ್ಕೆ ವೇದಿಕೆಯಾಗಿದೆ.
ಭಾನುವಾರ ರಾತ್ರಿ 7:30ರ ಸುಮಾರಿಗೆ, ತಿತಾಗಢ ಪೊಲೀಸ್ ಠಾಣೆ ಸಮೀಪ ಬೈಕ್‌ನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಶುಕ್ಲಾ ಮೇಲೆ ಗುಂಡು ಹಾರಿಸಿ ಹತ್ಯೆ
ಗೈದಿದ್ದರು. ಶುಕ್ಲಾ ತಿತಾಗಢ ನಗರಸಭೆಯ ಬಿಜೆಪಿ ಸದಸ್ಯರೂ ಆಗಿದ್ದರು.
ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೊಪ್ಪಿಸಿದೆ. ಮತ್ತೂಂದೆಡೆ, ಹತ್ಯೆಯನ್ನು
ತೀವ್ರವಾಗಿ ಖಂಡಿಸಿರುವ ಬಿಜೆಪಿ ಕಾರ್ಯಕರ್ತರು, ಜಿಲ್ಲೆಯ ಹಲವೆಡೆ ರಸ್ತೆ ತಡೆ ನಡೆಸಿ, ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಬೇಸರ: ಶುಕ್ಲಾ ಹತ್ಯೆ ಬೆನ್ನಲ್ಲಿ ಭುಗಿಲೆದ್ದಿರುವ ಆಕ್ರೋಶದ ಸನ್ನಿವೇಶದ ಬಗ್ಗೆ ಮಾತನಾಡುವಂತೆ ಮಮತಾ ಬ್ಯಾನರ್ಜಿಯವರ ಮೊಬೈಲ್‌ಗೆ
ತಾವು ಕಳುಹಿಸಿದ ಸಂದೇಶಕ್ಕೆ ಪ್ರತಿಯಾಗಿ ಯಾವುದೇ ಉತ್ತರ ನೀಡಿಲ್ಲ ಎಂದು ರಾಜ್ಯಪಾಲ ಜಗದೀಪ್ ಧನ್ ಕರ್ ಆರೋಪಿಸಿದ್ದಾರೆ. ಅಲ್ಲದೆ, ತಾವು ಕಳುಹಿಸಿದ್ದ ಸಮನ್ಸ್‌ಗೂ ಸರ್ಕಾರದಿಂದ ಉತ್ತರ ಬಂದಿಲ್ಲ ಎಂದು ಬೇಸರಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂಡೋಪಾಧ್ಯಾಯ, ರಾಜ್ಯಪಾಲರಿಗೆ ಸರ್ಕಾರದ ವಿವರಣೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.