![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 8, 2020, 8:37 AM IST
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಶೂಟೌಟ್ ನಡೆದಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ.
ಸುಳ್ಯ ನಗರದ ಶಾಂತಿನಗರದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದು ಅಪರಿಚಿತರು ಗುಂಡಿಕ್ಕಿದ್ದಾರೆ.
ಗುಂಡೇಟು ತಗಲಿದ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ. ಈತ ಬಿಜೆಪಿ ಹಾಗೂ ಸಾಮಾಜಿಕ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.
ಇದನ್ನೂ ಓದಿ:ದಂಡಕ್ಕಷ್ಟೆ ವಿನಾಯಿತಿ : ದಂಡ ಮೊತ್ತ ಇಳಿದಿರಬಹುದು, ಆದರೆ ಮಾಸ್ಕ್ ಬಿಡಬೇಡಿ
ಇಂದು 6 ಗಂಟೆಗೆ ಸಂಪತ್ ತನ್ನ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಹಾರಿಸಿದ್ದಾರೆ. ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಸಮೀಪದಲ್ಲಿದ್ದ ಕಾಂತಪ್ಪ ಎಂಬವರ ಮನೆಗೆ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಗಾಯಾಳು ಸಂಪತ್ ನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್ ಐ ಹರೀಶ್, ಹಾಗೂ ಪೋಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.