ಪ್ರತಿಭಟನೆಗಳು ಇರಲಿ; ಸಾರ್ವಜನಿಕರಿಗೆ ಅಡ್ಡಿ ಸಲ್ಲದು


Team Udayavani, Oct 9, 2020, 6:50 AM IST

ಪ್ರತಿಭಟನೆಗಳು ಇರಲಿ; ಸಾರ್ವಜನಿಕರಿಗೆ ಅಡ್ಡಿ ಸಲ್ಲದು

ಭಿನ್ನಾಭಿಪ್ರಾಯಗಳು ಮತ್ತು ಆಡಳಿತ ವ್ಯವಸ್ಥೆ ಜತೆ ಜತೆಯಾಗಿಯೇ ಹೋಗಬೇಕು. ಆದರೆ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ವಿಚಾರದಲ್ಲಿ ಪ್ರತಿಭಟನೆ ಮತ್ತು ಧರಣಿಗಳ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸ್ವಾಗತಾರ್ಹವಾಗಿದೆ.

ಸಿಎಎ ವಿರೋಧಿಸಿ ದಿಲ್ಲಿಯ ಶಹೀನ್‌ಬಾಗ್‌ನಲ್ಲಿ ಸುದೀರ್ಘಾವಧಿ ವರೆಗೆ ರಸ್ತೆ ತಡೆ ಮಾಡಿದ್ದ ಕುರಿತಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ನಿರ್ದಿಷ್ಟ ಅಥವಾ ಪ್ರತಿಭಟನೆಗಳಿಗೆಂದೇ ನಿಗದಿ ಮಾಡಿರುವ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬೇಕೇ ಹೊರತು, ಜನರಿಗೆ ಸಮಸ್ಯೆ ತಂದೊಡ್ಡುವ ರೀತಿಯಲ್ಲಿ ವರ್ತಿಸಬಾರದು ಎಂದಿತ್ತು. ಅಷ್ಟೇ ಅಲ್ಲ, ಪ್ರತಿಭಟನನಿರತರು, ಅಧಿಕಾರಶಾಹಿಯ ಪಾತ್ರದ ಬಗ್ಗೆಯೂ ಸುಪ್ರೀಂ ಕೋರ್ಟ್‌ ಈ ತೀರ್ಪಿನಲ್ಲಿ ಸೂಚ್ಯವಾಗಿ ಹೇಳಿದೆ.

ವಸಾಹತುಶಾಹಿ ವಿರುದ್ಧದ ಪ್ರತಿಭಟನೆಗೂ, ಈಗ ನಮ್ಮ ನಡುವಿನವರೇ ಆಡಳಿತ ಮಾಡುತ್ತಿರುವ ಪ್ರಜಾಪ್ರಭುತ್ವದ ವಿರುದ್ಧ ನಡೆಸುವ ಪ್ರತಿಭಟನೆಗೂ ವ್ಯತ್ಯಾಸವಿದೆ. ಆಗಿನ ಪ್ರತಿಭಟನೆಯನ್ನು ಈಗಿನದ್ದಕ್ಕೆ ಹೋಲಿಕೆ ಮಾಡುವುದು ಸರಿಯಾದುದಲ್ಲ. ಹಾಗೆಂದು ಪ್ರತಿಭಟನೆಯನ್ನೇ ಮಾಡಬಾರದು ಎಂದು ಹೇಳಲೂ ಸಾಧ್ಯವಿಲ್ಲ ಎಂಬುದು ಸುಪ್ರೀಂ ಕೋರ್ಟ್‌ ಅಭಿಪ್ರಾಯ.

ಸರಕಾರದ ಕ್ರಮ ಅಥವಾ ನಿರ್ಲಕ್ಷ್ಯದ ಬಗ್ಗೆ ಧ್ವನಿ ಎತ್ತಬೇಕಾದುದು ಎಲ್ಲರ ಕರ್ತವ್ಯ. ಇದಕ್ಕೆ ಸಂವಿಧಾನವೇ ಅವಕಾಶ ನೀಡಿದೆ. ಅಷ್ಟೇ ಏಕೆ, ಭಿನ್ನಾಭಿಪ್ರಾಯಗಳು ಮತ್ತು ಆಡಳಿತವು ಜತೆ ಜತೆಯಾಗಿಯೇ ಸಾಗಬೇಕು. ಆಗಷ್ಟೇ ಪ್ರಜಾಪ್ರಭುತ್ವ ಇನ್ನಷ್ಟು ಗಟ್ಟಿಯಾಗುತ್ತದೆ ಎಂಬುದು ಸುಪ್ರೀಂ ಕೋರ್ಟ್‌ ತೀರ್ಪಿನ ಸಾರಾಂಶ.

ಆದರೆ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿರುವ ಅದು, ಈ ವಿಚಾರದಲ್ಲಿ ಸರಕಾರ ಏನಾದರೂ ಕ್ರಮ ತೆಗೆದುಕೊಳ್ಳಬಹುದಿತ್ತು ಎಂದೂ ಬೇಸರ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಈ ವಿಚಾರ ಕೋರ್ಟ್‌ನ ಮುಂದೆಯೂ ಬರಬೇಕಾಗಿರಲಿಲ್ಲ ಎಂದು ಹೇಳಿದೆ.

ಇಂಥ ಪ್ರತಿಭಟನೆಗಳ ಹಿಂದಿನ ಆತಂಕದ ಬಗ್ಗೆಯೂ ಸುಪ್ರೀಂ ಕೋರ್ಟ್‌ ಹೇಳಿರುವುದನ್ನು ಗಮನಿಸಬೇಕು. ಶಹೀನ್‌ಬಾಗ್‌ ಪ್ರತಿಭಟನೆಯಲ್ಲಿ ನಾಯಕತ್ವದ ಕೊರತೆ ಇತ್ತು, ಹಲವು ಗುಂಪುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ಇವುಗಳು ತಮ್ಮ ಸ್ವಹಿತಾಸಕ್ತಿ ಈಡೇರಿಸಿಕೊಳ್ಳಲು ಹವಣಿಕೆ ಮಾಡುವ ಸಂಭವವು ಇತ್ತು. ಹೀಗಾಗಿ, ಅಂದಿನ ಶಹೀನ್‌ ಬಾಗ್‌ ಹೋರಾಟ, ಮಹಿಳೆಯರ ಧ್ವನಿಯನ್ನು ಸಶಕ್ತಗೊಳಿಸುವ ಏಕೈಕ ಧ್ವನಿಯಾಗಿ ಉಳಿದಿರಲಿಲ್ಲ. ಅಷ್ಟೇ ಅಲ್ಲದೆ ಪ್ರತಿಭಟನೆಯನ್ನು ಹಿಂಪಡೆಯುವ ಅಧಿಕಾರವನ್ನೂ ಆ ಮಹಿಳೆಯರು ಹೊಂದಿರಲಿಲ್ಲ ಎಂಬ ಅಂಶವನ್ನು ಉಲ್ಲೇಖೀಸಿದೆ.

ಜತೆಗೆ ಸಾರ್ವಜನಿಕರಿಗೆ ತೊಂದರೆ ನೀಡುವಂಥ ಸ್ಥಳದಲ್ಲಿ ಯಾರಾದರೂ ಪ್ರತಿಭಟನೆ ಅಥವಾ ಧರಣಿ ನಡೆಸುತ್ತಿದ್ದರೂ ಆಡಳಿತಶಾಹಿ ಅವರನ್ನು ಅಲ್ಲಿಂದ ಕಳುಹಿಸಬಹುದು ಎಂಬ ಮಾತುಗಳನ್ನೂ ಸುಪ್ರೀಂ ಕೋರ್ಟ್‌ ಹೇಳಿದೆ. ಮುಂದಿನ ದಿನಗಳಲ್ಲಿ ಇಂಥ ಪರಿಸ್ಥಿತಿಗಳು ಉದ್ಭವವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ನಿಗದಿತ ಸ್ಥಳದಲ್ಲಿ ಪ್ರತಿಭಟನೆಗಳು ನಡೆಯಲಿ, ಧರಣಿ, ಹೋರಾಟದ ವೇಳೆ ಮಾತುಕತೆಗೂ ಆಸ್ಪದವಿರಲಿ. ಆದರೆ, ಯಾವುದೇ ಕಾರಣಕ್ಕೂ ಪ್ರತಿಭಟನೆಗಳು ಕೈಮೀರಿ ಹೋಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಧೀಶರು ಖಡಕ್ಕಾಗಿಯೇ ಹೇಳಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಕೋರ್ಟ್‌ ಹೇಳಿರುವ ಅಂಶಗಳು ಒಪ್ಪತಕ್ಕಂತವುಗಳೇ ಆಗಿವೆ. ದಿಢೀರನೇ ರಸ್ತೆ ತಡೆ ನಡೆಸುವುದು, ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ನಿರ್ಬಂಧ ಒಡ್ಡುವುದು, ಜನರ ಓಡಾಟಕ್ಕೆ ಅನುಮತಿ ನೀಡದೇ ಇರುವುದು, ಎಷ್ಟೋ ಬಾರಿ ಈ ಟ್ರಾಫಿಕ್‌ ಜಾಮ್‌ನಲ್ಲಿ ಆ್ಯಂಬುಲೆನ್ಸ್‌ಗಳೇ ಸಿಲುಕಿರುವ ಘಟನೆಗಳೂ ನಡೆದಿವೆ. ಈ ಅಂಶಗಳನ್ನು ಗಮನಿಸಿದರೆ ಸುಪ್ರೀಂ ತೀರ್ಪು ಸರಿ ಅನ್ನಿಸುತ್ತದೆ.

ಟಾಪ್ ನ್ಯೂಸ್

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.