ಬಟ್ಟೆ ಕಳ್ಳತನಕ್ಕೆ ಯತ್ನ: ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ತಪ್ಪಿದ ಕಳ್ಳತನ

Team Udayavani, Oct 9, 2020, 4:07 PM IST

ಬಟ್ಟೆ ಕಳ್ಳತನಕ್ಕೆ ಯತ್ನ: ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ತಪ್ಪಿದ ಕಳ್ಳತನ

ಆರೋಪಿ. ಒಳಚಿತ್ರದಲ್ಲಿ ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಬಟ್ಟೆ ಅಂಗಡಿ ಶಟರ್ ಮುರಿದು ದೋಚಲು ಯತ್ನಿಸಿದ ತೃತೀಯ ಲಿಂಗಿಯೊಬ್ಬನನ್ನು ಅಲ್ಲೇ ಗಸ್ತು ತಿರುಗುತ್ತಿದ್ದ ಗೂರ್ಖನ ಸಮಯಪ್ರಜ್ಞೆಯಿಂದ ಸೆರೆ ಹಿಡಿದ ಕಾರಣ ಲಕ್ಷಾಂತರ ಮೌಲ್ಯದ ಬಟ್ಟೆ ಕಳ್ಳತನ ತಪ್ಪಿದೆ.

ಕಳ್ಳತನಕ್ಕೆ ಯತ್ನಿಸಿದ ತೃತೀಯ ಲಿಂಗಿಯನ್ನು ಕೊಪ್ಪಳ ಜಿಲ್ಲೆಯವನೆಂದು ಗುರುತಿಸಲಾಗಿದೆ. ಕಳ್ಳತನ ಕಂಡು ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದ ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ ಇದೀಗ ವ್ಯಾಪಾರಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ತನ್ನ ಜೀವದ ಹಂಗು ತೊರೆದು ಲಕ್ಷಾಂತರ ರೂ. ಮೌಲ್ಯದ ಬಟ್ಟೆ ಕಳ್ಳತನ ತಪ್ಪಿಸಿದ್ದಕ್ಕೆ ನಗದು ಬಹುಮಾನ ಪಡೆದಿದ್ದಾನೆ.

ಗುರುವಾರ ಮಧ್ಯರಾತ್ರಿ ಮುದ್ದೇಬಿಹಾಳ ಪಟ್ಟಣದಲ್ಲಿನ ಮಹಾವೀರ ಜೈನ್ ಎಂಬರಿಗೆ ಸೇರಿದ ದಾದಾಗಣಪತಿ ಬಟ್ಟೆ ಅಂಗಡಿಯ ಶಟರ್ ಮುರಿದು, ಕಳ್ಳತನಕ್ಕೆ ಯತ್ನ ನಡೆದಿತ್ತು. ಈ ಹಂತದಲ್ಲಿ ಗಸ್ತು ತಿರುಗುತ್ತಿದ್ದ ಗೂರ್ಖಾ ಬಹಾದ್ದೂರಸಿಂಗ್ ಅಂಗಡಿ ಕಳ್ಳತನವನ್ನು ಕಂಡು ಕೂಡಲೇ ಅಂಗಡಿ‌ ಮಾಲೀಕನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಅಷ್ಟರಲ್ಲಿ ಹೊರಗಿನಿಂದ ಯಾರೋ ಮಾತನಾಡಿದ ಸದ್ದು ಕೇಳಿದ 3-4 ಜನ ಕಳ್ಳರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಂತದಲ್ಲಿ ಜೀವದ ಹಂಗು ತೊರೆದ ಬಹಾದ್ದೂರ್ ಸಿಂಗ್ ತೃತೀಯ ಲಿಂಗಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾನೆ.

ಇದನ್ನೂ ಓದಿ:ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !

ಕಳ್ಳತನಕ್ಕೆ ಯತ್ನಿಸಿದವರು ಅಂಗಡಿಯಲ್ಲಿನ ಬೆಳೆ ಬಾಳುವ ಸುಮಾರು 3-4 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಗಂಟು ಕಟ್ಡಿ ಇಟ್ಡಿದ್ದರು. ಗೂರ್ಖಾ ಅದೇ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದು, ಸಮಯಪ್ರಜ್ಞೆ ತೋರದಿದ್ದಲ್ಲಿ ಕಳ್ಳರ ಕೈಚಳಕ ಯಶಸ್ವಿಯಾಗಿ ನಡೆಯುತ್ತಿತ್ತು.

ಗೂರ್ಖಾ ಬಹಾದ್ದೂರ್ ಸಿಂಗ್ ಥಾಪಾ

ಗೂರ್ಖಾ ಸೆರೆಹಿಡಿದು ಕೊಟ್ಟ ಆರೋಪಿ ರಾಯಣ್ಣ ತಾನು ತೃತೀಯ ಲಿಂಗಿಯಾಗಿದ್ದಾನೆ. ಲಿಂಗ ಪರಿವರ್ತನೆ ಶಸ್ತ್ರ ಚಿಕಿತ್ಸಾ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂ ಬೇಕಿತ್ತು. ಈ ಹಣ ಹೊಂದಿಸಿಕೊಳ್ಳಲು ಕಳ್ಳತನಕ್ಕೆ ಮುಂದಾಗಿದ್ದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.