ಡೀಸಿ ಹೆಸರಲ್ಲಿ ನಕಲಿ ಇ-ಮೇಲ್ ಖಾತೆ
Team Udayavani, Oct 9, 2020, 4:20 PM IST
ರಾಮನಗರ: ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ನಕಲಿ ಐಡಿಯಿಂದ ಸೃಜಿಸಿ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿ ಹೆಸರಿನಲ್ಲಿ ಚೀಫ್ಎಕ್ಸಿಕ್ಯೂಟಿವ್ 00124 ಅಟ್ ಜಿಮೇಲ್.ಕಾಂ ಎಂಬ ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳಿಗೆ ಅ.8ರ ಗುರುವಾರ ತಪ್ಪು ಸಂದೇಶಗಳನ್ನು ಕಳುಹಿಸಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂಥವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕೃತ ಈ ಮೇಲ್ ಐಡಿ: ಜಿಲ್ಲಾಧಿಕಾರಿಯವರು ತಮ್ಮ ಅಧಿಕೃತ ಇ-ಮೇಲ್ ಐಡಿ ಡಿಇಒ.ರಾಮನಗರ ಅಟ್ ಜಿಮೇಲ್.ಕಾಂನಿಂದ ಇ -ಮೇಲ್ ಕಳಿಸಲಾಗುತ್ತದೆ. ಸದರಿ ಐಡಿಯಿಂದ ಬರುವ ಸಂದೇಶಗಳನ್ನು ಹೊರತುಪಡಿಸಿ ಇನ್ನಾವುದೇ ಐಡಿಗಳಿಂದ ಬರುವ ಬರುವಂತಹ ಸಂದೇಶ, ಮಾಹಿತಿಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಕೋರಿದ್ದು, ಸಾರ್ವಜನಿಕರ ಗಮನಕ್ಕೂ ತಂದಿದ್ದಾರೆ. ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್ ಐಡಿ ಹೊರತುಪಡಿಸಿ ಇನ್ನಾವುದೇ ನಕಲಿ ಅಥವಾ ಅನಧಿಕೃತ ಐಡಿಗಳಿಂದ ಸಂದೇಶ ಇಲ್ಲವೇ ಮಾಹಿತಿ ಬಂದಲ್ಲಿ ಆ ಬಗ್ಗೆ ಕೂಡಲೇ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ನಕಲಿ ಇ-ಮೇಲ್ ಖಾತೆ ತೆರೆಯುವುದುಇಲ್ಲವೇ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ರವಾನಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೀಸಲಾತಿ ಪ್ರಕಟ :
ರಾಮನಗರ: ಜಿಲ್ಲೆಯ ಮೂರು ನಗರಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಹೊಸದಾಗಿ ಮೀಸಲಾತಿ ನಿಗದಿಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎ.ವಿಜಯ್‌ಕುಮಾರ್ ಆದೇಶ ಹೊರೆಡಿಸಿದ್ದಾರೆ. ಆದೇಶದ ಪ್ರಕಾರ ಚನ್ನಪಟ್ಟಣನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿಗೆ ಮತ್ತು ಉಪಾಧ್ಯಕ್ಷ ಸ್ಥಾನಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.ಕನಕಪುರ ನಗರಸಭೆಯ ಅಧ್ಯಕ್ಷ ಸ್ಥಾನ ಬಿಸಿಎ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಠ ವರ್ಗಕ್ಕೆ ಮಿಸಲಾಗಿದೆ. ರಾಮನಗರ ನಗರಸಭೆಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂಉಪಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಮೀಸಲುಗೊಳಿಸಿ ಆದೇಶ ಹೊರೆಡಿಸಿದ್ದಾರೆ.
ನಗರಸಭೆ, ಪುರಸಭೆ ಮತ್ತು ಪಟ್ಟಣಪಂಚಾಯ್ತಿಗಳ ಅಧ್ಯಕ್ಷ ಉಪಾಧ್ಯಕ್ಷಸ್ಥಾನಗಳಿಗೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಮಂತ್ರಿ ಮಂಡಲದಲ್ಲಿಪ್ರಸ್ತಾಪವಾಗಿ 11.3.2020ರ ಮೀಸಲಾತಿ ಪ್ರಕಟಣೆಯನ್ನು ಹಿಂದಕ್ಕೆ ಪಡೆದುಕೊಂಡು ಮಾರ್ಗದರ್ಶಿ ಸೂಚನೆಗಳನ್ನು ಕಳೆದಸೆಪ್ಟಂಬರ್‌ನಲ್ಲಿ ಸರ್ಕಾರ ಹೊರೆಡಿಸಿತ್ತು. 11ನೇ ಸೆಪ್ಟಂಬರ್ 2020ರ ಮಾರ್ಗಸೂ ಚಿಗಳ ಅನ್ವಯ ನಗರಸಭೆಗಳ 9ನೇ ಅವಧಿಗೆ ಹೊಸ ಮೀಸಲಾತಿಯನ್ನುಕಲ್ಪಿಸಲಾಗಿದೆ. ಕರ್ನಾಟಕ ಮುನಿಸಿಪಾಲಿಟಿಸ್ (ಅಧ್ಯಕ್ಷ, ಉಪಾಧ್ಯಕ) ಚÒ ುನಾವಣೆ (ಪರಿಷ್ಕೃತ)ನಿಯಮ ಮತ್ತು ಮಾರ್ಗದರ್ಶನಗಳ ಅನ್ವಯ ಮೀಸಲಾತಿ ಆದೇಶ ಹೊರೆಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.