ಕೋಲ್ಕತ್ತಾಗೆ ಕಿಂಗ್ಸ್ ಸವಾಲು: ಟಾಸ್ ಗೆದ್ದ ಕೋಲ್ಕತ್ತಾ ಬ್ಯಾಟಿಂಗ್ ಆಯ್ಕೆ
Team Udayavani, Oct 10, 2020, 3:00 PM IST
ಅಬುಧಾಬಿ: ಸತತ ಸೋಲುಗಳಿಂದ ಕಂಗೆಟ್ಟಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ವಿರುದ್ಧದ ಕಳೆದ ಪಂದ್ಯದಲ್ಲಿ ಜಯ ಗಳಿಸಿರುವ ಉತ್ಸಾಹದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು ಅಬುಧಾಬಿ ಅಂಗಳದಲ್ಲಿ ಮುಖಾಮುಖಿಯಾಗುತ್ತಿದೆ.
ಶೇಕ್ ಜಯೀದ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಣಯ ಮಾಡಿದೆ.
ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್
ಸತತ ನಾಲ್ಕು ಸೋಲಿನಿಂದ ಕಂಗೆಟ್ಟಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯವಿದೆ. ಬಹುತೇಕ ಪ್ಲೇ ಆಫ್ ಹಾದಿ ಮುಚ್ಚಿದ್ದರು ಮುಂದಿನ ಎಲ್ಲ ಪಂದ್ಯಗಳನ್ನು ಅತ್ಯಧಿಕ ರನ್‌ರೇಟ್‌ನಲ್ಲಿ ಗೆದ್ದರೆ ಎಲ್ಲೊ ಒಂದು ಅವಕಾಶ ಸಿಗುವ ಸಾಧ್ಯತೆ ಇರುವುದರಿಂದ ಪಂಜಾಬ್‌ಗ ಈ ಪಂದ್ಯ ಮಹತ್ವದ್ದಾಗಿದೆ. ಇಲ್ಲಿಯೂ ಪಂಜಾಬ್ ಸೋತದ್ದೇ ಆದಲ್ಲಿ ಈ ಬಾರಿಯ ಐಪಿಎಲ್ ಕೂಟದಿಂದ ಹೊರನಡೆದ ಮೊದಲ ತಂಡವಾಗಲಿದೆ.
ಆತ್ಮವಿಶ್ವಾಸದಲ್ಲಿ ಕೆಕೆಆರ್
ಕಳೆದ ಚೆನ್ನೈ ವಿರುದ್ಧದ ಅಲ್ಪಮೊತ್ತದ ಪಂದ್ಯವನ್ನು ಹಿಡಿದುನಿಲ್ಲಿಸಿದ ಕೆಕೆಆರ್‌ಗೆ ತನ್ನ ತಂಡದ ಬೌಲರ್‌ಗಳ ಮೇಲೆ ಆತ್ಮವಿಶ್ವಾಸ ಮೂಡಿದೆ. ಅದರಂತೆ ಈ ಪಂದ್ಯದಲ್ಲಿಯೂ ಇವರ ಮೇಲೆ ನಿರೀಕ್ಷೆ ಇರಿಸಲಾಗಿದೆ. ಇದೇ ಮೊದಲ ಬಾರಿ ಆರಂಭಿಕನಾಗಿ ಆಡಲಿಳಿದ ರಾಹುಲ್ ತ್ರಿಪಾಠಿ ಉತ್ತಮವಾಗಿ ಆಡಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೌಲಿಂಗ್‌ನಲ್ಲಿ ಕಮಲೇಶ್ ನಾಗರ್‌ಕೋಟಿ, ವರುಣ್ ಚರ್ಕವರ್ತಿ ಉತ್ತಮ ಲಯದಲ್ಲಿದ್ದಾರೆ.
ತಂಡಗಳು
ಕೆಕೆಆರ್: ರಾಹುಲ್ ತ್ರಿಪಾಠಿ, ಶುಬ್ಮನ್ ಗಿಲ್, ನಿತೀಶ್ ರಾಣಾ, ಇಯಾನ್ ಮಾರ್ಗನ್, ದಿನೇಶ್ ಕಾರ್ತಿಕ್ , ಆಂಡ್ರೆ ರಸ್ಸೆಲ್, ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರಕೋಟಿ, ಪ್ರಸಿದ್ದ ಕೃಷ್ಣ, ವರುಣ್ ಚಕ್ರವರ್ತಿ.
ಪಂಜಾಬ್: ಕೆ.ಎಲ್.ರಾಹುಲ್ (ನಾ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಸಿಮ್ರಾನ್ ಸಿಂಗ್ (ವಿ.ಕೀ), ಗ್ಲೆನ್ ಮ್ಯಾಕ್ಸ್‌ವೆಲ್, ಮುಜೀಬ್ ಉರ್ ರಹಮಾನ್, ಕ್ರಿಸ್ ಜೋರ್ಡಾನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.