44 ನೀರಿನ ಘಟಕ ದುರಸ್ತಿಗೊಳಿಸಿ
Team Udayavani, Oct 10, 2020, 4:40 PM IST
ಕಲಬುರಗಿ: ಗ್ರಾಮೀಣ ಭಾಗದ ಜನರಿಗೆ ಸ್ವಚ್ಛ ಕುಡಿಯುವ ನೀರು ಪೂರೈಸಲೆಂದೆ ಜಿಲ್ಲೆಯಲ್ಲಿ ಸ್ಥಾಪಿಸಲಾದ 207ಕುಡಿಯುವ ನೀರು ಶುದ್ಧೀಕರಣ ಘಟಕಗಳ ಪೈಕಿ 44ಕೆಟ್ಟು ಹೋಗಿದ್ದು, ಕೂಡಲೇ ಇವುಗಳನ್ನು ದುರಸ್ತಿಗೊಳಿಸಿಆರಂಭಿಸಬೇಕೆಂದು ಮೂಲ ಸೌಲಭ್ಯ ಮತ್ತು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಇದನ್ನು ತೀವ್ರಗೊಳಿಸಬೇಕು. ಶುದ್ಧ ಕುಡಿಯುವ ನೀರು ಘಟಕಗಳ ಸ್ಥಾಪಿಸಿದ ನಂತರ ಐದು ವರ್ಷಗಳ ಕಾಲ ನಿರ್ವಹಣೆ ಕಾರ್ಯ ಸಹ ಗುತ್ತಿಗೆ ಪಡೆದ ಸಂಸ್ಥೆಯೇ ನಿರ್ವಹಿಸಬೇಕು ಎಂದರು.
ಆಯಾ ಇಲಾಖೆಗಳಿಗೆ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಂತೆ ನೀಡಿರುವ ಗುರಿಯನ್ನು ಆರ್ಥಿಕ ಮತ್ತು ಭೌತಿಕ ಗುರಿಯನ್ನು ಶೇ.100 ಪ್ರಗತಿ ಸಾ ಧಿಸಬೇಕು ಎಂದು ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಗೆ ಮರಳಿದ 42 ಸಾವಿರ ವಲಸಿಗ ಕಾರ್ಮಿಕರಿಗೆ ಜಾಬ್ ಕಾರ್ಡ್ ನೀಡಿ ಉದ್ಯೋಗ ನೀಡಲಾಗಿದೆ. ಪ್ರಸ್ತುತ 2020-21ನೇ ಸಾಲಿನಲ್ಲಿ 65 ಲಕ್ಷ ಮಾನವ ದಿನ ಸೃಜನೆ ಗುರಿ ಹೊಂದಲಾಗಿ ಇದೂವರೆಗೆ 45 ಲಕ್ಷ ಮಾನವ ದಿನಸೃಜಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಚ್ಚಲು ಗುಂಡಿ ನಿರ್ಮಾಣ ಕಾರ್ಯವನ್ನು ಆಂದೋಲನ ರೂಪದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿಹಾಗೂ ಸ್ವತ್ಛ ಭಾರತ್ ಮಿಷನ್(ಗ್ರಾ) ನೋಡಲ್ ಅ ಧಿಕಾರಿ ಎಂ.ಡಿ. ಇಸ್ಮಾಯಿಲ್ ಸಭೆಗೆ ತಿಳಿಸಿದರು.
ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರಭುರಾಜ್ ಮತ್ತು ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರು ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ, ಪಂಚಾಯಿತಿ ರಾಜ್, ಎಪಿಎಂಸಿಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನುಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೈಗೊಂಡರು.ಜಿಲ್ಲಾಧಿ ಕಾರಿ ವಿ.ವಿ. ಜ್ಯೋತ್ಸಾÂ, ಎಸ್‌ಪಿ ಡಾ| ಸಿಮಿಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿ ಕಾರಿ ಡಾ|ಶಂಕರ ವಣಿಕ್ಯಾಳ ಇದ್ದರು.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಕರ ವಸೂಲಾತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿದಿನ 15ರಿಂದ 18 ಲಕ್ಷ ರೂ. ಕರ ವಸೂಲಿ ಮಾಡಲಾಗುತ್ತಿದೆ. ಇದಲ್ಲದೆ ಟ್ರೇಡ್ ಲೈಸೆನ್ಸ್ ಪಡೆಯದ ಅನಧಿಕೃತ ಅಂಗಡಿಗಳನ್ನು ಸಕ್ರಮಗೊಳಿಸಿ ಕರ ಪಡೆಯಲು ಟ್ರೇಡ್ ಲೈಸೆನ್ಸ್ ಅಭಿಯಾನ ನಡೆಯುತ್ತಿದೆ. -ಸ್ನೇಹಲ್ ಸುಧಾಕರ ಲೋಖಂಡೆ ಆಯುಕ್ತರು, ಮಹಾನಗರ ಪಾಲಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.