ಗಿಲ್, ಕಾರ್ತಿಕ್ ಅಮೋಘ ಅರ್ಧಶತಕ: ಪಂಜಾಬ್ ಗೆ 165 ರನ್ ಗಳ ಗುರಿ ನೀಡಿದ ಕೋಲ್ಕತ್ತಾ !


Team Udayavani, Oct 10, 2020, 5:22 PM IST

kolkatta

ಅಬುಧಾಬಿ: ಶುಭ್ ಮನ್ ಗಿಲ್ ಅಮೋಘ ಅರ್ಧಶತಕ ಮತ್ತು ನಾಯಕ ದಿನೇಶ್ ಕಾರ್ತಿಕ್ ಬೊಂಬಾಟ್ ಆಟದ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್ ಗಳಲ್ಲಿ 164 ರನ್ ಪೇರಿಸಿದೆ. ಆ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 165 ರನ್ ಗಳ ಟಾರ್ಗೇಟ್ ನೀಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ನಾಯಕ ದಿನೇಶ್ ಕಾರ್ತಿಕ್ ಲೆಕ್ಕಾಚಾರ ಫಲಪ್ರದವಾಗಲಿಲ್ಲ. ಕಳೆದ ಪಂದ್ಯದ ಹೀರೋ ರಾಹುಲ್ ತ್ರಿಪಾಠಿ(4) 10 ಎಸೆತಗಳಲ್ಲಿ ಕೇವಲ ಒಂದು ಫೋರ್ ಸಿಡಿಸಿ ಶಮಿ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆದರು. ಶುಭ್ ಮನ್ ಗಿಲ್ ಜೊತೆಗಿನ ಮೊದಲ ವಿಕೆಟ್ ಜೊತೆಯಾಟದಲ್ಲಿ ಕೇವಲ 12 ರನ್ ಹರಿದುಬಂದಿತ್ತು.

ಒನ್ ಡೌನ್ ನಲ್ಲಿ ಕಣಕ್ಕಿಳಿದ ನಿತೀಶ್ ರಾಣಾ ಕೇವಲ 2 ರನ್ ಗಳಿಸಿ ರನೌಟ್ ಆಗಿ ಬಂದ ಹಾದಿಯಲ್ಲೇ ಹಿಂದಿರುಗಿದರು. ನಂತರ ಗಿಲ್ ಜೊತೆ ಕೂಡಿಕೊಂಡ ಇಯಾನ್ ಮೋರ್ಗನ್ ಉತ್ತಮ ರನ್ ಪೇರಿಸಿದರು. 1 ಸಿಕ್ಸ್ ಹಾಗೂ 2 ಫೋರ್ ಸಹಿತ 24 ರನ್ ಸಿಡಿಸಿ ರವಿ ಬಿಸ್ನೋಯ್ ಎಸೆತದಲ್ಲಿ ಮ್ಯಾಕ್ಸ್ ವೆಲ್ ಗೆ ಕ್ಯಾಚಿತ್ತರು.

ನಂತರ ಬ್ಯಾಟಿಂಗ್ ಗೆ ಇಳಿದ ನಾಯಕ ದಿನೇಶ್ ಕಾರ್ತಿಕ್, ಶುಭ್ ಮನ್ ಗಿಲ್ ಗೆ ಉತ್ತಮ ಸಾಥ್ ನೀಡಿದರು.  ಈ ಜೋಡಿ ಬೌಂಡರಿ ಸಿಕ್ಸರ್ ಗಳ ಮೂಲಕ ತಂಡದ ಮೊತ್ತವನ್ನು 144ರ ಗಡಿ ದಾಟಿಸಿದರು. ಈ ವೇಳೆ ಉತ್ತಮ ಆಟವಾಡಿ ಅರ್ಧಶತಕದ ಸಂಭ್ರಮದಲ್ಲಿದ್ದ ಗಿಲ್ ರನ್ ಔಟ್ ಗೆ ಬಲಿಯಾದರು. ಗಿಲ್ 47 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 57 ರನ್ ಸಿಡಿಸಿದರು.

ನಂತರ ಬಂದ ಆ್ಯಂಡ್ರೆ ರಸೆಲ್ (5) ಸಿಂಗ್ ಬೌಲಿಂಗ್ ನಲ್ಲಿ ಸಿಮ್ರಾನ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಬೊಂಬಾಟ್ ಬ್ಯಾಟಿಂಗ್ ನಡೆಸಿದ ನಾಯಕ ದಿನೇಶ್ ಕಾರ್ತಿಕ್  57 ರನ್ ಗಳಿಸಿದ್ದಾಗ ರನೌಟ್ ಆದರು. ಇವರ ಅರ್ಧಶತಕದಲ್ಲಿ 2 ಸಿಕ್ಸ್ ಮತ್ತು 7 ಫೋರ್ ಗಳು ಸೇರಿದ್ದವು. ಪ್ಯಾಟ್ ಕಮಿನ್ಸ್ 5 ರನ್ ಗಳಿಸಿ ನಾಟೌಟ್ ಆಗಿ ಉಳಿದರು. ಅಂತಿಮವಾಗಿ ಕೊಲ್ಕತ್ತಾ 20 ಓವರ್ ಗಳಲ್ಲಿ 6 ವಿಕಟ್ ನಷ್ಟಕ್ಕೆ 164 ರನ್ ಗಳಿಸಿತು.

ಪಂಜಾಬ್ ಪರ ಮೊಹಮ್ಮದ್ ಶಮಿ, ಹರ್ಷ ದೀಪ್ ಸಿಂಗ್, ರವಿಬಿಸ್ನೋಯ್ ತಲಾ  1 ವಿಕಟ್ ಪಡೆದರು.

ಟಾಪ್ ನ್ಯೂಸ್

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.