ಶಿಕ್ಷಕರಿಗೂ ಕೋವಿಡ್ ಸೋಂಕು
Team Udayavani, Oct 10, 2020, 10:32 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 55 ಮಂದಿ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 40 ಮಂದಿ ಶಿಕ್ಷಕರು ಗುಣಮುಖರಾಗಿದ್ದಾರೆ. 15 ಮಂದಿ ಶಿಕ್ಷಕರು ವಿವಿಧ ಆಸ್ಪತ್ರೆ ಮತ್ತು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29 ಮಂದಿ ವಿದ್ಯಾರ್ಥಿಗಳು ಇಲ್ಲಿಯವರೆಗೆ ಸೋಂಕಿಗೆ ಒಳಗಾಗಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಪ್ರಸ್ತುತ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಯಾವುದೇ ಶಿಕ್ಷಕರು ಅಥವಾ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿಲ್ಲ ಎನ್ನುವುದು ಸಮಾಧಾನಕರ ವಿಚಾರ.
50 ಶಿಕ್ಷಕರಿಗೆ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ ಸುಮಾರು 50 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ಜಿಲ್ಲಾ ಶಿಕ್ಷಕರ ಸಂಘದ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕಿತ ಓರ್ವ ಶಿಕ್ಷಕಿಯ ಸಾವು ಸಂಭವಿಸಿದೆ. ಇವರು ಬ್ರಹ್ಮಾವರ ವಲಯದ ಗೋಳಿಯಂಗಡಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಮತ್ತು ಕ್ಯಾನ್ಸರ್ ಪೀಡಿತರಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾರ್ಕಳ ವಲಯದ ಶಿಕ್ಷಕರೊಬ್ಬರಿಗೆ ಕೊರೊನಾ ಸೋಂಕು ತಗಲಿದ ಪರಿಣಾಮ ಅವರ ತಂದೆ, ತಾಯಿಗೂ ಸೋಂಕು ತಗಲಿತು. ಶಿಕ್ಷಕರು ಗುಣಮುಖರಾದರೂ ತಂದೆ ಒಂದು ವಾರದ ಹಿಂದೆ ಮತ್ತು ತಾಯಿ ಅ. 9ರಂದು ನಿಧನ ಹೊಂದಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.