ಪೌರ ಕಾರ್ಮಿಕರಿಗೆ ಒಂದೇ ಮಾದರಿ ಸಮವಸ್ತ್ರ
ತ್ಯಾಜ್ಯ ವಿಲೇವಾರಿ, ಕಸ ವಿಂಗಡಣೆ ಪ್ರದೇಶಕ್ಕೆ ಆಡಳಿತಾಧಿಕಾರಿ ಭೇಟಿ
Team Udayavani, Oct 11, 2020, 12:09 PM IST
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕಾಯಂ, ನೇರ ವೇತನ ಪಾವತಿ ಹಾಗೂ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರಕಾರ್ಮಿಕರಿಗೂ ಒಂದೇ ಮಾದರಿಯ ಸಮವಸ್ತ್ರ ನೀಡುವಂತೆ ಬಿಬಿಎಂಪಿಯ ಆಡಳಿತಾಧಿಕಾರಿ ಗೌರವ್ ಗುಪ್ತಾ ನಿರ್ದೇಶಿಸಿದರು.
ಗಾಂಧಿನಗರ ವಾರ್ಡ್‌ಉಪ್ಪಾರಪೇಟೆ ಠಾಣೆ ಹಿಂಭಾಗದಲ್ಲಿರುವ ಮಸ್ಟರಿಂಗ್ ಕೇಂದ್ರ ಸೇರಿದಂತೆ ನಗರದ ವಿವಿಧ ಪ್ರದೇಶದಲ್ಲಿನ ಕಸ ವಿಲೇವಾರಿ, ವಿಂಗಡಣೆ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪೌರಕಾರ್ಮಿ ಕರಿಗೆಕೆಲವು ಸೂಚನೆ ನೀಡಿದರು.
ನಂತರ ಅಧಿಕಾರಿಗಳ ಜತೆ ಮಾತನಾಡಿದ ಅವರು, ಪಾಲಿಕೆಯ ಎಲ್ಲ ಪೌರಕಾರ್ಮಿಕರಿಗೆ ಒಂದೇ ಮಾದರಿಯ ಸಮವಸ್ತ್ರ ನೀಡುವಂತೆ ಹಾಗೂ ಸಮವಸ್ತ್ರದ ಮೇಲೆ ಬಿಬಿಎಂಪಿ ಚಿನ್ಹೆ ಸಷ್ಟವಾಗಿ ಕಾಣಿಸುವಂತೆ ನಮೂದಿಸಲು ಸೂಚಿಸಿದರು. ಇದಕ್ಕೆ ವಿಶೇಷ ಆಯುಕ್ತ ರಂದೀಪ್ ಪ್ರತಿಕ್ರಿಯಿಸಿ ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಣ ತ್ಯಾಜ್ಯ ಸಂಗ್ರಹಣಾಕೇಂದ್ರ ಪರಿಶೀಲನೆ: ಸ್ವಾತಂತ್ರ್ಯ ಉದ್ಯಾನದ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ, ಹಾಗೂ ಅದರ ಬಳಿಯೇ ನಿರ್ಮಿಸಲಾಗುತ್ತಿರುವ ಕಸ ಟ್ರಾನ್ಫರ್ ಸ್ಟೇಷ್ಟೆ ನ್ ಕಾಮಗಾರಿ ಪರಿಶೀಲಿಸಿದರು. ಈ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ವೇಳೆ ಮುಚ್ಚಿದಮಾದರಿಯಲ್ಲಿ ಕಸ ವಿಲೇವಾರಿ ಮಾಡಬೇಕು. ಘಟಕದ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ, ಘಟಕದಿಂದ ಸ್ಥಳೀಯರಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಗೌರವ್ ಗುಪ್ತಾ ಸೂಚನೆ ನೀಡಿದರು.
ಮೂರು ಮಾದರಿ ವಿಂಗಡಣೆ: ನಗರದಲ್ಲಿ ಕಸ ವಿಲೇವಾರಿ ಪದ್ಧತಿಯಲ್ಲಿ ಮಾದರಿ ವಾರ್ಡ್ ಗಳನ್ನು ಎ,ಬಿ ಹಾಗೂ ಸಿ ಎಂದು ಮೂರು ಮಾದರಿಯಲ್ಲಿ ವಿಂಗಡಿಸುವಂತೆ ಆಡಳಿತಾಧಿಕಾರಿ ಸೂಚಿಸಿದರು. ರಂದೀಪ್ ಪ್ರತಿಕ್ರಿಯಿಸಿ, ವಾರ್ಡ್‌ಗಳಲ್ಲಿ ಕಸ ವಿಂಗಡಣೆ ಪ್ರಮಾಣ ಹಾಗೂ ಕಸ ನಿಯಮ ಪಾಲನೆ ಸೇರಿದಂತೆ ವಿವಿಧ ಮಾನದಂಡಗಳ ಮೇಲೆ ರ್‍ಯಾಂಕಿಂಗ್ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜೈವಿಕ ಅನಿಲ ಘಟಕ ತಪಾಸಣೆ: ಪಾಲಿಕೆ ವ್ಯಾಪ್ತಿಯ ಜೈವಿಕ ಅನಿಲ ಘಟಕ ತಪಾಸಣೆ ನಡೆಸಿ, ಘಟಕ ಕಾರ್ಯನಿರ್ವಹಿಸುವ ಬಗ್ಗೆ ಮಾಹಿತಿ ಪಡೆದರು. ಹಸಿ ತ್ಯಾಜ್ಯ, ಪ್ರಾಣಿ ತ್ಯಾಜ್ಯ, ಸಗಣಿಯ ಮೂಲಕ ಜೈವಿಕ ಅನಿಲ ಉತ್ಪಾದಿಸಲಾಗುತ್ತಿದ್ದು, ದಿನಕ್ಕೆ 5 ಟನ್ ಸಾಮರ್ಥ್ಯ ಹೊಂದಿದೆ. ಘಟಕದಿಂದ ಉತ್ಪತ್ತಿಯಾಗುವ ವಿದ್ಯುತ್ ಸ್ವಾತಂತ್ರ್ಯ ಉದ್ಯಾನದ ಬೀದಿ ದೀಪಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕುಮಾರ ಪಾರ್ಕ್ ಬಳಿ ಆಟೋ ಟಿಪ್ಪರ್ ಮೂಲಕ ಕಾಂಪ್ಯಾಕ್ಟರ್‌ಗೆ ಕಸ ವಿಲೇವಾರಿ ಮಾಡುವ ಹಾಗೂ ಕಸ ವಿಂಗಡಣೆ ಮಾಡುವ ವೇಳೆ ಸಿಬ್ಬಂದಿ ಗ್ಲೌಸ್ ಹಾಕದೆ ಕೆಲಸ ಮಾಡುವುದನ್ನು ಗಮನಿಸಿದ ಆಡಳಿತಾಧಿಕಾರಿ, ಸಿಬ್ಬಂದಿಗೆ ಏಕೆ ಸುರಕ್ಷಾ ಸಾಧನ ನೀಡಿಲ್ಲ. ಈ ಸಂಬಂಧ ಏನುಕ್ರಮಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು. ಈ ರೀತಿಘಟನೆ ಮರುಕಳಿಸದಂತೆ ಸೂಚಿಸಿದರು. ಘನತ್ಯಾಜ್ಯ ನಿರ್ವಹಣೆ ಮುಖ್ಯ ಎಂಜಿನಿಯರ್ ವಿಶ್ವನಾಥ್, ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ, ವಾರ್ಡ್ ನೋಡಲ್ ಅಧಿಕಾರಿ ಗೀತಾ ಇತರರಿದ್ದರು.
ಹಳೆ ಕಸದ ಗಾಡಿಗೆ ಮುಕ್ತಿ : ನಗರದಲ್ಲಿ ಕಸದ ಆಟೋ ಟಿಪ್ಪರ್‌ಗಳು ಹೋಗಲು ಸಾಧ್ಯವಿಲ್ಲದ ಪ್ರದೇಶದಲ್ಲಿ ಮಾತ್ರ ಕಸದ ತಳ್ಳುವ ಗಾಡಿ ಬಳಸುವಂತೆ ಹಾಗೂ ಉಳಿದ ರಸ್ತೆಗಳಲ್ಲಿ ಬಳಸದಂತೆ ಹಾಗೂ ಕೂಡಲೇ ಹಳೆಯ ಕಸ ತಳ್ಳುವ ಗಾಡಿ ಹಿಂತೆಗದುಕೊಳ್ಳಲು ಸೂಚನೆ ನೀಡಿದರು. ವಿಶೇಷ ಆಯುಕ್ತ ರಂದೀಪ್ ಪ್ರತಿಕ್ರಿಯಿಸಿ, ಕಸ ತಳ್ಳುವ ಗಾಡಿಗಳನ್ನು ಆಟೋ ಟಿಪ್ಪರ್‌ಗಳು ಹೋಗದ ಸ್ಥಳಗಳಲ್ಲಿ ಮಾತ್ರ ಬಳಕೆ ಮಾಡಲಾಗುತ್ತಿದೆ. ರಸ್ತೆ ಬದಿ ಗುಡಿಸುವ ತ್ಯಾಜ್ಯವನ್ನು ಒಂದೆಡೆ ಹಾಕಿ ಆಟೋಗಳ ಮೂಲಕವೇ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಾನವೀಯತೆ ಮುಖ್ಯ: ಕುಮಾರಪಾರ್ಕ್ ಬಳಿ ಕಸ ವಿಲೇವಾರಿ ಮಾಡುವ ಸಂದರ್ಭದಲ್ಲಿ ಪಾಲಿಕೆ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನ ಬಳಸದೆ ಕೆಲಸ ಮಾಡುತ್ತಿದ್ದನ್ನು ನೋಡಿ ಆಡಳಿತಾಧಿಕಾರಿ ಪಾಲಿಕೆಯ ಅಧಿಕಾರಿಗಳನ್ನುತರಾಟೆಗೆತೆಗೆದುಕೊಂಡರು. ಅಲ್ಲದೆ, ಯಾವುದೇ ಸಾಧನ ನೀಡದೆ ಕೆಲಸ ಮಾಡಿಸುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿ,ಸ್ವಚ್ಛತಾ ಸಿಬ್ಬಂದಿಯನ್ನು ಮಾನವೀಯತೆಯಿಂದ ನಡೆಸಿಕೊಳ್ಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.