ಮಾದಕ ವ್ಯಸನ ನಿಯಂತ್ರಿಸುವಲ್ಲಿ ಎನ್‌ಡಿಪಿಎಸ್ ಕಾಯ್ದೆ ಪರಿಣಾಮಕಾರಿ
Team Udayavani, Oct 11, 2020, 7:09 PM IST
ರಾಯಚೂರು: ಮಾದಕ ವ್ಯಸನ ನಿಯಂತ್ರಿಸುವ ನಿಟ್ಟಿನಲ್ಲಿ ಎನ್‌ಡಿಪಿಎಸ್ ಕಾಯ್ದೆ ಅತ್ಯಂತ ಪರಿಣಾಮಕಾರಿಯಾಗಿದೆ. ಕಾಯ್ದೆಯನ್ನು ಪೊಲೀಸರು ಸಮಗ್ರವಾಗಿ ಅಧ್ಯಯನ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುಸ್ತಫ್ ಹುಸೇನ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಮಲು ಪದಾರ್ಥಗಳು ಮಾನವನ ಬದುಕಿಗೆ ಮಾರಕವಾಗಿವೆ. ಜಿಲ್ಲೆಯಲ್ಲಿ ಇತ್ತೀಚೆಗೆ ಗಾಂಜಾ ಬಳಕೆ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಾಗ ಸಂಬಂ ಧಿಸಿದ ಕಾಯ್ದೆ ಅರಿತು ಪ್ರಕರಣ ದಾಖಲಿಸದ ಕಾರಣ ಆರೋಪಿಗೆ ಸೂಕ್ತ ಶಿಕ್ಷೆ ವಿಧಿಸಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಕಾಯ್ದೆಯ ಎಲ್ಲ ಸೆಕ್ಷನ್‌ಗಳನ್ನು ತಿಳಿಯಬೇಕಿದೆ ಎಂದರು.
ಗಾಂಜಾ ಬೆಳೆಯುವ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೂ ದಂಡ ವಿಧಿಸಬಹುದು. ಆದಕಾರಣ ಪೊಲೀಸರು ಗಾಂಜಾ ಪ್ರಕರಣಕ್ಕೆ ಸಂಬಂಧಿ ಸಿದಂತೆ ವಿಚಾರಣೆ ನಡೆಸುವ ಸಂದರ್ಭದಲ್ಲಿಅಪರಾಧಿಗೆ ತಕ್ಕ ಶಿಕ್ಷೆ ವಿ ಧಿಸಲು ಎನ್‌ಡಿಪಿಎಸ್ ಕಾಯ್ದೆ ಅನುಸಾರವಾಗಿ ಪ್ರಕರಣ ದಾಖಸಿಕೊಳ್ಳಬೇಕು ಮತ್ತು ತನಿಖೆ ಸಮರ್ಪಕವಾಗಿ ನಡೆಸಲು ಅಗತ್ಯ ದಾಖಲೆ ಹಾಗೂ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆಗ ಆರೋಪಿಯ ತಪ್ಪಿಗೆ ಅನುಗುಣವಾಗಿ ತೀರ್ಪು ನೀಡಲು ಸಾಧ್ಯವಾಗುತ್ತದೆ ಎಂದರು.
ಎಸ್‌ಪಿ ಪ್ರಕಾಶ ನಿಕ್ಕಂ ಮಾತನಾಡಿ, ಜಿಲ್ಲೆಯಲ್ಲಿ ಗಾಂಜಾ ಮಾರುವುದು, ಬೆಳೆಯುವುದು ಕಂಡು ಬಂದಿದೆ. ಈವರೆಗೂ 50 ಆರೋಪಿಗಳನ್ನು ಬಂಧಿಸಿ, 100 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. 2ನೇ ಹೆಚ್ಚುವರಿ ನ್ಯಾಯಾಧೀಶರಾದ ನರಸಿಂಹಮೂರ್ತಿ, ಒಂದನೇ ಹೆಚ್ಚುವರಿ ನ್ಯಾಯಾಧೀಶರಾದ ಅವಿನಾಶ ಗಾಳಿ ಉಪನ್ಯಾಸ ನೀಡಿದರು. ಜಿಲ್ಲಾ ಅಭಿಯೋಜಕ ಟಿ.ಸುದರ್ಶನ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು ಸೇರಿದಂತೆ ಇತರರಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ಎಂ.ಸಿ.ನಾಡಗೌಡ ಸ್ವಾಗತಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.