ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ
Team Udayavani, Oct 12, 2020, 6:45 AM IST
ಹೊಸದಿಲ್ಲಿ: ಇನ್ನು ಗ್ರಾಮೀಣ ಜನರ ಆಸ್ತಿ ಲಪಟಾಯಿಸಲು ಯಾರಿಗೂ ಸಾಧ್ಯವಿಲ್ಲ. ಸ್ವಾಮಿತ್ವ ಯೋಜನೆಯಿಂದ ಗ್ರಾಮ ಭಾರತದ ವರ್ಚಸ್ಸು ಬದಲಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕರ್ನಾಟಕದ ಎರಡು ಸೇರಿದಂತೆ ದೇಶದ 763 ಗ್ರಾಮಗಳ 1.32 ಲಕ್ಷ ಮಂದಿಗೆ ಡಿಜಿಟಲ್ ಆಸ್ತಿ ಮಾಲಕತ್ವ ದಾಖಲೆಯನ್ನು ನೀಡುವ ವೀಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತ ನಾಡಿದರು. ಇದೊಂದು ಐತಿಹಾಸಿಕ ಕ್ರಮ ಎಂದು ಬಣ್ಣಿಸಿದರು.
“ಸರ್ವೇ ಆಫ್ ವಿಲೇಜಸ್ ಆ್ಯಂಡ್ ಮ್ಯಾಪಿಂಗ್ ವಿದ್ ಇಂಪ್ರೊ ವೈಸ್ಡ್ ಟೆಕ್ನಾಲಜಿ ಇನ್ ವಿಲೇಜ್ ಏರಿಯಾಸ್’ (ಸ್ವಾಮಿತ್ವ -SVAMI TVA) ಯೋಜನೆಯಡಿ ಮೊದಲ ಬಾರಿಗೆ ಗ್ರಾಮೀಣ ಪ್ರದೇಶದ ಜಮೀನಿನ ಅಳತೆಯನ್ನು ಡ್ರೋನ್ ಮೂಲಕ ನಡೆಸಲಾಗಿದೆ. ಮಾಲಕರಿಗೆ ಆಧಾರ್ ಮಾದರಿಯ ಕಾರ್ಡ್ ಗಳನ್ನು ನೀಡಲಾಗುತ್ತದೆ.
ಇದನ್ನೂ ಓದಿ :ಫ್ರೆಂಚ್ ಓಪನ್ : 20ನೇ ಗ್ರಾಂಡ್ ಸ್ಲಾಮ್ ಗೆದ್ದ ನಡಾಲ್! ವೃತ್ತಿ ಜೀವನದ 100ನೇ ಗೆಲುವು
ದೇಶದ ಅಭಿವೃದ್ಧಿಯಲ್ಲಿ ಆಸ್ತಿ ಮಾಲಕತ್ವ ಬಹಳ ಪ್ರಭಾವ ಬೀರು ತ್ತದೆ ಎಂದು ಜಗತ್ತಿನ ಹಲವು ತಜ್ಞರು ಪ್ರತಿಪಾದಿಸುತ್ತಿದ್ದಾರೆ.
ಜಗತ್ತಿನ ಒಟ್ಟು ಜನಸಂಖ್ಯೆ ಪೈಕಿ ಮೂರನೇ ಒಂದಂಶದಷ್ಟು ಜನರು ಮಾತ್ರ ಸೂಕ್ತ ರೀತಿಯಲ್ಲಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮುಂದಿನ 3ರಿಂದ 4 ವರ್ಷಗಳ ಅವಧಿಯಲ್ಲಿ ದೇಶದ ಪ್ರತಿಯೊಂದು ಗ್ರಾಮದ ನಿವಾಸಿಗೂ ಇದೇ ಮಾದರಿಯ ಆಸ್ತಿ ಮಾಲಕತ್ವದ ಕಾರ್ಡ್ ಗಳನ್ನು ವಿತರಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ಆಸ್ತಿ ಹಕ್ಕಿನಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಯುವ ಜನತೆಗೆ ಆತ್ಮವಿಶ್ವಾಸದಿಂದ ಮುಂದಿನ ಹೆಜ್ಜೆ ಇಡಲು ನೆರವಾಗಲಿದೆ ಎಂದಿದ್ದಾರೆ.
ಆರು ವರ್ಷಗಳ ಅವಧಿಯಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಲಾಗಿದೆ. ಸ್ವಾಮಿತ್ವ ಯೋಜನೆಯಿಂದಾಗಿ ಗ್ರಾಮೀಣ ಮಟ್ಟದಲ್ಲಿ ಪಂಚಾಯತ್‌ಗಳಿಗೆ ಆಸ್ತಿಯ ನಿರ್ವಹಣೆ ಸುಲಭವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ಹೆಚ್ಚಿನ ವಿವರಣೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ)ಯು, 1.32 ಲಕ್ಷ ಮಂದಿಯ ಮೊಬೈಲ್ ಫೋನ್‌ಗೆ ಎಸ್‌ಎಂಎಸ್ ಲಿಂಕ್ ಕಳುಹಿಸಲಾಗುತ್ತದೆ. ಅದನ್ನು ತೆರೆಯುವ ಮೂಲಕ ಆಧಾರ್ ಮಾದರಿಯ ಆಸ್ತಿಯ ಮಾಲಕತ್ವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಅನಂತರದ ದಿನಗಳಲ್ಲಿ ರಾಜ್ಯ ಸರಕಾರಗಳೇ ಜಮೀನಿನ ಮಾಲಕತ್ವದ ದಾಖಲೆಗಳನ್ನು ನೀಡಲಿವೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.