ಪಕ್ಷೇತರರ ನೆರವಿನೊಂದಿಗೆ ಕಾಂಗ್ರೆಸ್‌ ಗದ್ದುಗೆಗೆ


Team Udayavani, Oct 12, 2020, 2:57 PM IST

ಪಕ್ಷೇತರರ ನೆರವಿನೊಂದಿಗೆ ಕಾಂಗ್ರೆಸ್‌ ಗದ್ದುಗೆಗೆ

ಹುಣಸೂರು: ಹುಣಸೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.

ನಗರ ಸ‌ಭೆಯು 31 ವಾರ್ಡ್‌ ಹೊಂದಿದ್ದು, ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌-14, ಜೆಡಿಎಸ್‌ -7, ಬಿಜೆಪಿ- 3 ಹಾಗೂ ಎಸ್‌ಡಿಪಿಐ 2 ಸ್ಥಾನ ‌ ಮತ್ತು ಪಕ್ಷೇತರರಾಗಿ 5 ಮಂದಿ ಆಯ್ಕೆಯಾಗಿದ್ದಾರೆ. ಕಳೆದ ಫೆಬ್ರವರಿ 11 ರಂದು ಚುನಾಯಿತರಾದ ಸದಸ್ಯರು ಅಂದಿನಿಂದಲೂ ನಗರಸಭೆಯಲ್ಲಿ ಮತದಾರರ ಕೆಲಸ ಮಾಡಿಕೊಡಲಾಗದೆಹತಾಶರಾಗಿದ್ದರು. ಇದೀಗ ಮೀಸಲಾತಿ ಪ್ರಕಟಗೊಂಡಿದ್ದು, ಹುರುಪಿನಿಂದ ಓಡಾಡಲಾರಂಭಿಸಿದ್ದಾರೆ.

ಕಾಂಗ್ರೆಸ್‌ಗೆ ಶಾಸಕ ಮಂಜುನಾಥ್‌ ಅವರ ಮತ ಸೇರಿದರೆ 15 ಸ್ಥಾನವಾಗಲಿದೆ. ಜೆಡಿಎಸ್‌ನ 7 ಸಾ §ನ, ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ಸಂಸದ ಪ್ರತಾಪ ಸಿಂಹ ಮತ ಸೇರಿದರೆ ಬಿಜೆಪಿಗೆ 5 ಸ್ಥಾನವಾಗಲಿದೆ. ಸಂಸದ ಹಾಗೂ ಶಾಸಕರು ಸೇರಿದರೆ ಒಟ್ಟು 34 ಸ್ಥಾನಕ್ಕೇರಲಿದ್ದು, ಬಹು ಮತಕ್ಕೆ 18 ಮತ ಬೇಕಿದೆ. ಆದರೆ, ಪಕ್ಷೇತ ರರ ಪೈಕಿ ಈಗಾಗಲೇ ಇಬ್ಬರು ಕಾಂಗ್ರೆಸ್‌ ನೊಂದಿಗೆ ಗುರುತಿಸಿಕೊಂಡಿದ್ದು, ಕಾಂಗ್ರೆಸ್‌ ಅಧ್ಯಕ್ಷಗಾದಿ ಹಿಡಿಯುವ ಸಾಧ್ಯತೆ ಇದೆ.

ಅಧ್ಯಕ್ಷ ಆಕಾಂಕ್ಷಿಗಳು: ಅಧ್ಯಕ್ಷ ‌ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್‌ನ 6 ಮಹಿಳಾ ಸದಸ್ಯರು ಆಕಾಂಕ್ಷಿಗಳಾಗಿದ್ದಾರೆ.  24ನೇ ವಾರ್ಡ್‌ನ ಗೀತಾ, 3ನೇ ವಾರ್ಡ್‌ನ ಅನುಷಾ, 4ನೇ ವಾರ್ಡ್‌ನ ಭವ್ಯಾ, 29ನೇ ವಾರ್ಡ್‌ನ ಪ್ರಿಯಾಂಕ ತೋಮಸ್‌, 15ನೇ ವಾರ್ಡ್‌ನ ಸೌರಭಾ, 9ನೇ ವಾರ್ಡ್‌ನ ಸಮೀನಾ ಪರ್ವಿನ್‌ ನಡುವೆ ಪ್ರಬಲ ಪೈಪೋಟಿ ಎದುರಾಗಿದೆ.

ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು: ಉಪಾಧ್ಯಕ್ಷ ಸ್ಥಾನಕ್ಕಾಗಿ 6ನೇ ವಾರ್ಡ್‌ನ ದೇವನಾಯಕ (ಕಾಂಗ್ರೆಸ್‌), 1ನೇ ವಾರ್ಡ್‌ನ ದೇವರಾಜ (ಜೆಡಿಎಸ್‌), 2ನೇ ವಾರ್ಡ್‌ನ ‌ ಆಶಾಕೃಷ್ಣ (ಪಕ್ಷೇತರ) ಪ‌ರಿಶಿಷ್ಟಪಂಗಡಕ್ಕೆ ಸೇರಿದವರಾಗಿದ್ದು, ಕಾಂಗ್ರೆಸ್‌-ಜೆಡಿಎಸ್‌ ನಡುವೆ ಆಂತರಿಕ ಒಪ್ಪಂದವಾದಲ್ಲಿ ದೇವರಾಜ್‌ ಅಥವಾದೇವನಾಯಕನಿರಾಯಸವಾಗಿ ಉಪಾಧ್ಯಕ್ಷರಾ ಗುವ ಸಾಧ್ಯತೆ ಇದೆ. ಈ ನಡುವೆ ಮೀಸಲಾತಿಯ ಬಗ್ಗೆ ಅಪಸ್ವರವೂ ಕೇಳಿ ಬರುತ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಲೂ ಕೆಲವರು ಚಿಂತನೆ ನಡೆಸಿದ್ದಾರೆ.

ಸಾಮಾಜಿಕ ನ್ಯಾಯದಡಿ ಕಾಂಗ್ರೆಸ್‌ಗೆ ಅಧಿಕಾರ :  ನಗರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವ ವಿಶ್ವಾಸವಿದೆ.ಈಗಾಗಲೇ ಮೂವರು ಪಕ್ಷೇತರರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ.ಇನ್ನೂ ಕೆಲವರು ಬೆಂಬಲ ನೀಡುವ ನಿರೀಕ್ಷೆಯಲ್ಲಿದ್ದೇನೆ. ಈ ಬಾರಿ ಸಾಮಾಜಿಕ ನ್ಯಾಯದಡಿ ಅಧಿಕಾರ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದೇನೆ. ನೂತನ ಆಡಳಿತ ಮಂಡಳಿಯಿಂದ ನಾಗರಿಕರಿಗೆ ಒಳ್ಳೆಯ ಆಡಳಿತ ನೀಡುವ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

-ಸಂಪತ್ ‌ಕುಮಾರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.