ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಎರಡು ವಾರದೊಳಗೆ ಉತ್ತರಿಸಿ: ರಾಜ್ಯಕ್ಕೆ ಸುಪ್ರೀಂ ನೋಟಿಸ್
Team Udayavani, Oct 12, 2020, 10:36 PM IST
ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಿರಂಜನ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾ| ಎಸ್.ಎಸ್. ಬೋಪಣ್ಣ, ನ್ಯಾ| ವಿ. ರಾಮಸುಬ್ರಹ್ಮಣ್ಯಂ ಅವರನ್ನೊಳಗೊಂಡ ನ್ಯಾಯಪೀಠವು ಜಾಮೀನು ಅರ್ಜಿಯ ಕುರಿತು ಎರಡು ವಾರಗಳ ಒಳಗಾಗಿ ಉತ್ತರ ನೀಡುವಂತೆ ರಾಜ್ಯ ಸರಕಾರಕ್ಕೆ ಅ. 8ರಂದು ನೋಟಿಸ್ ಜಾರಿ ಮಾಡಿದೆ. 2016ರಲ್ಲಿ ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು ಹತ್ಯೆ ಮಾಡಿ ಹೋಮಕುಂಡದಲ್ಲಿ ಶವವನ್ನು ಸುಟ್ಟು ಹಾಕಲಾಗಿತ್ತು.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ ಹಾಗೂ ಸಾಕ್ಷಿ ನಾಶದ ಆರೋಪ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ನಿರಂಜನ್ ಭಟ್ ಅವರ ತಂದೆ ಶ್ರೀನಿವಾಸ ಭಟ್ ಹಾಗೂ ಚಾಲಕ ರಾಘವೇಂದ್ರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ ಪ್ರಕರಣದ ಪ್ರಮುಖ ಆರೋಪಿ ನಿರಂಜನ ಭಟ್ ಜಾಮೀನು ಸಿಗದೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ನಿರಂಜನ್ ಭಟ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ಜು. 27ಕ್ಕೆ ವಜಾಗೊಳಿಸಿತ್ತು. ಅಲ್ಲದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿಲ್ಲ. ಮಾತ್ರವಲ್ಲ ಹಲವು ಸಾಕ್ಷಿಗಳನ್ನು ಇನ್ನಷ್ಟೇ ವಿಚಾರಣೆಗೆ ಒಳಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಮುಗಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ಬೇಕಾಗಿದೆ. ಅನಂತರದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿತ್ತು.
ಹೈಕೋರ್ಟ್ನ ಈ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ನಿರಂಜನ್ ಭಟ್ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.