![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 14, 2020, 2:01 PM IST
ಹೈದರಾಬಾದ್/ತೆಲಂಗಾಣ: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಮುಂದಿನ 24 ಗಂಟೆಗಳವರೆಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ:Watch: ಗುಡ್ಡದ ಮೇಲಿದ್ದ ನಾಸಿಕ್ ಕೋಟೆ ಏರಿದ 68ರ ಅಜ್ಜಿ: ಟ್ವೀಟರ್ ನಲ್ಲಿ ಪ್ರಶಂಸೆ
ಹೈದರಾಬಾದ್ ನಲ್ಲಿ 11.30ರವರೆಗೆ ದಾಖಲೆಯ 192 ಮಿಲಿ ಮೀಟರ್ ಮಳೆಯಾಗಿದೆ. ಕೃಷ್ಣಾ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ರಕ್ಷಣಾ ತಂಡ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿಸಿದೆ.
#WATCH Hyderabad: Severe waterlogging in Ramanthapur area, after heavy rains. Similar situation in many other parts of the city.
Telangana govt has declared holidays for today & tomorrow for all private institutions/ offices /non-essential services with work-from-home advisory. pic.twitter.com/eZpHwd7dWs
— ANI (@ANI) October 14, 2020
ತೆಲಂಗಾಣದಲ್ಲಿ ಗುರುವಾರದವರೆಗೆ ರಜೆ:
ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.