ಒಡಲಿನಲ್ಲಿ ನದಿಗಳಿದ್ದರೂ ಜನರಿಗೆ ನೀರಿಲ್ಲ

ನಗರದ ಮಧ್ಯೆಯೇ ಲಕ್ಷ್ಮಣ ತೀರ್ಥ ನದಿ ಹರಿಯುತ್ತಿದ್ದರೂ ನೀರಿಗೆ ಬರ

Team Udayavani, Oct 14, 2020, 3:04 PM IST

MYSURU-TDY-3

ಲಕ್ಷ್ಮಣ ತೀರ್ಥ ನದಿ

ಹುಣಸೂರು: ನಗರದ ಮಧ್ಯದಲ್ಲೇ ಲಕ್ಷ್ಮಣ ತೀರ್ಥ ನದಿ ಹರಿಯುತ್ತಿದ್ದರೂ ನಾಗರಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಹುಣಸೂರು ಸುತ್ತಮತ್ತ ಸಾಕಷ್ಟ ಜಲಮೂಲಗಳಿದ್ದು, ಇವುಗಳನ್ನು ವ್ಯವಸ್ಥಿತವಾಗಿ ಬಳಸಿಕೊಂಡು ನಗರಕ್ಕೆ ಸುಲಭವಾಗಿ ನೀರು ಪೂರೈಸಬಹುದಾಗಿದೆ. ಆದರೆ, ಇವುಗಳನ್ನು ಸರಿಯಾಗಿ ಬಳಸಿಕೊಳ್ಳದ ಕಾರಣ ನಗರದ ನಾಗರಿಕರು ಕುಡಿಯುವ ನೀರಿಗಾಗಿ ಪರಿತಪಿಸುವುದು ಸಾಮಾನ್ಯವಾಗಿದೆ.

ನಗರಕ್ಕೆ ಈ ಹಿಂದಿನಿಂದಲೂ ಲಕ್ಷ್ಮಣ ತೀರ್ಥನದಿಯಿಂದಲೇ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದಕ್ಕಾಗಿಯೇ ಪಂಪ್‌ ಹೌಸ್‌ ನಿರ್ಮಿಸಲಾಗಿದೆ. ಆಗ ಜನತೆಗೆ ಸಮರ್ಪಕವಾಗಿ ನೀರು ಸಿಗುತ್ತಿತ್ತು. ಈ ನಡುವೆ, ಜಿ.ಟಿ. ದೇವೇಗೌಡರು ಶಾಸಕರಾಗಿದ್ದ ಅವಧಿಯಲ್ಲಿ ಅಂದರೆ 2008ರಲ್ಲಿ ಕೆ.ಆರ್‌.ನಗರದ ಚಂದಗಾಲು ಬಳಿಯಿಂದ ಕಾವೇರಿ ನೀರನ್ನು ನಗರಕ್ಕೆ ಪೂರೈಸುವ ವ್ಯವಸ್ಥೆಯನ್ನು ಮಾಡಲಾಯಿತು. 2008ರಿಂದಲೂ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಸಾಕಷ್ಟು ನೀರುಅಲ್ಲಿಂದಲೇ ಪೂರೈಕೆಯಾಗುತ್ತಿದ್ದರಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ.

ಹೀಗಾಗಿ ಲಕ್ಷ್ಮಣ ತೀರ್ಥ ನದಿ ನೀರನ್ನು ಸ್ಥಗಿತಗೊಳಿಸಲಾಯಿತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಣಸೂರು ನಗರ ಶರವೇಗದಲ್ಲಿ ಬೆಳೆಯುತ್ತಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಹೊಸಬಡಾವಣೆಗಳು ನಿರ್ಮಾಣಗೊಂಡಿವೆ. ಹೀಗಾಗಿ ನಗರದ ಜನತೆಗೆ ಕಾವೇರಿ ನೀರು ಸಾಕಾಗುತ್ತಿಲ್ಲ. ಈ ಮಧ್ಯೆ, ನಗರದಲ್ಲಿ ಸಾಕಷ್ಟು ಕೊಳವೆ ಬಾವಿಗಳನ್ನು ಕೊರೆಸಿ, ನೀರು ಪೂರೈಸಲಾಗುತ್ತಿದ್ದರೂ ಜನರಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಹೀಗಾಗಿ ಸಾರ್ವಜನಿಕರು ರೋಸಿ ಹೋಗಿದ್ದಾರೆ.

ಅವ್ಯವಸ್ಥೆ: ಹುಣಸೂರು ಒಡಲಿನಲ್ಲಿ ಕಾವೇರಿ ನದಿ, ಲಕ್ಷ್ಮಣ ತೀರ್ಥ ನದಿ, 65ಕ್ಕೂ ಹೆಚ್ಚು ಬೋರ್‌ವೆಲ್‌ಗಳಿದ್ದರೂ ನಗರದ ಐದು ಸಾವಿರ ಮನೆಗಳಿಗೆ ಸಮರ್ಪಕವಾಗಿ ನೀರು ಪೂರೈಸಲಾಗುತ್ತಿಲ್ಲ. ದೃರದೃಷ್ಟಿ ಯೋಜನೆಗಳುಇಲ್ಲದಕಾರಣಈ ಅವ್ಯವಸ್ಥೆ ಉಂಟಾಗಿದೆ.

ನೀರು ಸಿಗದ ಬಡಾವಣೆಗಳು: ನಗರದ ಮಂಜುನಾಥ ಬಡಾಣೆ, ನ್ಯೂ ಮಾರುತಿ ಬಡಾವಣೆ, ಒಂಟೆಪಾಳ್ಯ ಬೋರೆ, ಸ್ಟೋರ್‌ ಬೀದಿಯ ಕೆಲ ರಸ್ತೆ, ಬ್ರಾಹ್ಮಣರ ‌ ಬಡಾವಣೆಯ ರಾಘವೇಂದ್ರಸ್ವಾಮಿ ಮಠದ ರಸ್ತೆಯ ಮನೆಗಳಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ, ಹತ್ತಿರದ ‌ಬೋರ್‌ವೆಲ್‌ಗ‌ಳು ಇಲ್ಲವೇ ನಗರಸಭೆಯವರು ಸರಬರಾಜು ಮಾಡುವ  ಟ್ಯಾಂಕರ್‌ ನೀರಿಗಾಗಿ ಕಾಯಬೇಕಾದ ಪರಿಸಿ §ತಿ ನಿರ್ಮಾಣವಾಗಿದೆ. ಬಡಾವಣೆಗಳಿಗೆ ನೀರು ಪೂರೈಕೆಯಾಗದಿರುವ ಕುರಿತು ವಾಟರ್‌ಮ್ಯಾನ್‌ (ನೀರುಗಂಟಿ)ಗಳನ್ನು ಪ್ರಶ್ನಿಸಿದರೆ, ಪೈಪ್‌ಲೈನ್‌, ವಾಲ್ಟ್ ಹಾಳಾಗಿದೆ, ಕೆ.ಆರ್‌.ನಗರದಲ್ಲಿ ಮೋಟಾರ್‌ ಕೆಟ್ಟಿದೆ ಎಂದು ಸಬೂಬು ಹೇಳುತ್ತಾರೆ. ಇನ್ನೂ ನಗರಸಭೆ ಪೌರಾಯುಕ್ತರನ್ನು ಕೇಳಿದರೆ, ದುರಸ್ತಿಪಡಿಸಲಾಗುತ್ತಿದೆ. ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಸಿದ್ಧ ಉತ್ತರ ದೊರೆಯುತ್ತಿದೆ. ಹೀಗಾಗಿ ನಗರದ ‌ ಜನತೆ ಯಾರ ಬಳಿ ತಮ್ಮ ಸಮಸ್ಯೆಗ‌ಳನ್ನು ಹೇಳಿಕೊಳ್ಳಬೇಕು ಎಂಬುದೇ ತೋಚದಂತಾಗಿದೆ.

ಏನಂತಾರೆ ಶಾಸಕರು? :  ಹುಣಸೂರು ನಗರಕ್ಕೆಲಕ್ಷ್ಮಣತೀರ್ಥ ನದಿಯಿಂದ ನೀರು ಒದಗಿಸುತ್ತಿದ್ದ ಪಂಪ್‌ಹೌಸ್‌ ಪುನಶ್ಚೇತನಗೊಳಿಸಲು  ಸೂಚಿಸಲಾಗಿದೆ.ಅಲ್ಲದೇ ಕಾವೇರಿನದಿಯಿಂದ ನೀರುಸರಬರಾಜುಮಾಡುವಕೆ.ಆರ್‌.ನಗರ ತಾಲೂಕಿನಚಂದಗಾಲುಬಳಿಯಪಂಪ್‌ ಹೌಸ್‌ನಲ್ಲಿ ಹೆಚ್ಚಿನ ಸಾಮರ್ಥ್ಯದ ಮೋಟಾರ್‌ ಅಳವಡಿಸಲು ಹಾಗೂ ನಗರದಲ್ಲಿ ಮೂರು ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸಲು ನಿಟ್ಟಿನಲ್ಲಿ ಟೆಂಡರ್‌ ಪ್ರಗತಿಯಲ್ಲಿದೆ.ಈ ಎಲ್ಲಾ ಕಾಮಗಾರಿ ಪೂರ್ಣಗೊಂಡರೆ ನಗರದ ನೀರಿನ ಸಮಸ್ಯೆ ನೀಗಲಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ತಿಳಿಸಿದ್ದಾರೆ.

 

ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.