ಮತಗಟ್ಟೆ ಕೇಂದ್ರ ಸ್ಯಾನಿಟೈಸ್ ಮಾಡಿ: ಡೀಸಿ
Team Udayavani, Oct 14, 2020, 3:29 PM IST
ಚಿಕ್ಕಬಳ್ಳಾಪು : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಅ.28ರಂದು ನಡೆಯಲಿದ್ದು ಕೋವಿಡ್-19 ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತಭವನದಆಡಿಟೋರಿಯಂನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂ« ಭಾರತ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ
ಪ್ರಕಟಿಸಿದೆ. ಹೀಗಾಗಿ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಮತಗಟ್ಟೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದು ಸೂಚಿಸಿದರು.
ಸೌಕರ್ಯ ಕಲ್ಪಿಸಿ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆ ಮತಗಟ್ಟೆ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ ದಾರರಿಗೆ ಥರ್ಮಾಮೀಟರ್ ಮೂಲಕ ತಪಾಸಣೆ ಮಾಡಬೇಕು. ಮತಗಟ್ಟೆ ಕೇಂದ್ರಗಳಲ್ಲಿಕುಡಿಯುವ ನೀರು, ವಿದ್ಯುತ್, ರ್‍ಯಾಂಪ್ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿ ಮತಗಟ್ಟೆಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನುಕೈಗೊಳ್ಳಬೇಕು. ಮತದಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತಗಟ್ಟೆಕೇಂದ್ರಗಳಲ್ಲಿ ಹೆಚ್ಚು ಜನ ಸೇರದಂತೆ ಮತಗಟ್ಟೆ ಅಧಿಕಾರಿಗಳುಕ್ರಮ ವಹಿಸಬೇಕು. –ಆರ್.ಲತಾ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.