ಬಿಹಾರ ಚುನಾವಣಾ ಕದನ: ಶರದ್ ಯಾದವ್ ಪುತ್ರಿ, LJP ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಂದೆಗೆ (ಶರದ್ ಯಾದವ್) ಬಿಹಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ
Team Udayavani, Oct 14, 2020, 5:04 PM IST
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ 50 ಅಭ್ಯರ್ಥಿಗಳನ್ನು ಅಖಾಡಕ್ಕಿಸಲು ನಿರ್ಧರಿಸಲಾಗಿದೆ ಎಂದು ಶರದ್ ಯಾದವ್ ನೇತೃತ್ವದ ಎಲ್ ಜೆಪಿ ಪಕ್ಷ ಘೋಷಿಸಿದ್ದ ಬೆನ್ನಲ್ಲೇ ಬುಧವಾರ (ಅಕ್ಟೋಬರ್ 14, 2020) ಯಾದವ್ ಪುತ್ರಿ ಸುಭಾಷಿನಿ ರಾಜ್ ರಾವ್ ಮತ್ತು ಎಲ್ ಜೆಪಿ ಪ್ರಧಾನ ಕಾರ್ಯದರ್ಶಿ ಕಾಲಿ ಪ್ರಸಾದ್ ಪಾಂಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಲಿ ಪ್ರಸಾದ್ ಪಾಂಡೆ ಈಗಾಗಲೇ ಕುಚೈಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಭಾಷಿನಿ ರಾವ್ ಕೂಡಾ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ. ಇವರ ಸೇರ್ಪಡೆಯಿಂದಾಗಿ ಮಹಾಘಟಬಂಧನ್ ಅಥವಾ ಮಹಾ ಮೈತ್ರಿಗೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಬಿಹಾರ ಕಾಂಗ್ರೆಸ್ ಮುಖ್ಯಸ್ಥ ಮದನ್ ಮೋಹನ್ ಝಾ ತಿಳಿಸಿದ್ದಾರೆ.
ದಿಲ್ಲಿಯ ಕಾಂಗ್ರೆಸ್ ಮುಖ್ಯಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸುಭಾಷಿನಿ ರಾವ್, ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ತಂದೆಗೆ (ಶರದ್ ಯಾದವ್) ಬಿಹಾರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ಸೆಂಟ್ರಲ್ ಇಲೆಕ್ಷನ್ ಕಮಿಟಿ(ಸಿಇಟಿ) ಟಿಕೆಟ್ ಹಂಚಿಕೆಯಲ್ಲಿ ಕಾರ್ಯನಿರತವಾಗಿದ್ದರಿಂದ ನಂತರ ಸೋನಿಯಾ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಕ್ಟೋಬರ್ 28ರಂದು ನಡೆಯಲಿರುವ ಮೊದಲ ಹಂತದ ಬಿಹಾರ ಚುನಾವಣೆಗೆ ಕಾಂಗ್ರೆಸ್ ಪಕ್ಷ 21 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.
ಬಿಹಾರದಲ್ಲಿ ನವೆಂಬರ್ 3 ಮತ್ತು 7ರಂದು ಎರಡು, ಮೂರನೇ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಘೋಷಣೆಯಾಗಲಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ 144 ಸ್ಥಾನಗಳಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ, ಎಡಪಕ್ಷ 29 ಕ್ಷೇತ್ರಗಳಲ್ಲಿ ಮಹಾಘಟಬಂಧನ್ ಮೈತ್ರಿಯೊಂದಿಗೆ ಕಣಕ್ಕಿಳಿಯುವುದಾಗಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.