ಕೋವಿಡ್ ನಿಯಮ ಉಲ್ಲಂಘಿಸಿದರೆ ಕ್ರಮ: ಡಿಸಿ
Team Udayavani, Oct 15, 2020, 3:10 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಹೊಟೇಲ್, ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಈ ಕುರಿತು ಬುಧವಾರ ಆದೇಶವೊಂದನ್ನು ಹೊರಡಿಸಿರುವ ಅವರು, ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಾಧ್ಯವಾದಷ್ಟು ವಿವಿಧ ಮಾದರಿಯ ಇ-ಪೇಮೆಂಟ್ ಮೂಲಕ ವ್ಯವಹಾರ ನಡೆಸಲಾಗುತ್ತಿದೆಯೇ, ಥರ್ಮಲ್ ಟೆಸ್ಟ್ ಮಾಡಲಾಗುತ್ತಿದೆಯೇ, ಕೋವಿಡ್-19 ಸಂಬಂಧ ಪ್ರವಾಸಿಗರಿಗೆ, ಅತಿಥಿಗಳಿಗೆ ಸೂಕ್ತ ನಿರ್ದೇಶನ ನೀಡುವ ಫಲಕ ಅಳವಡಿಸಲಾಗಿದೆಯೇ, ವಾಸ್ತವ್ಯ ಹೂಡಿರುವ ಪ್ರವಾಸಿಗರು, ಅತಿಥಿಗಳ ಪ್ರಯಾಣ ಹಿನ್ನೆಲೆಯ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗಿದೆಯೇ ಮತ್ತು ಅವರು ಗುರುತಿನ ಚೀಟಿಗಳನ್ನು ಪಡೆಯಲಾಗುತ್ತಿದೆಯೇ, ಸಿಬ್ಬಂದಿಗಳು ಕೋವಿಡ್‌ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳಾದ ಕೈಗವಸು, ಮುಖಗವಸು ಮತ್ತು ಶುಚಿತ್ವ ಕಾಪಾಡಿಕೊಳ್ಳಲಾಗಿದೆಯೇ, ಅತಿಥಿಗಳು, ಪ್ರವಾಸಿಗರ ಲಗೇಜುಗಳನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆಯೇ, ಒಂದು ಕೊಠಡಿಯಲ್ಲಿ ಇಬ್ಬರು ಅತಿಥಿಗಳಿಗೆ ಮಾತ್ರ ವಾಸ್ತವ್ಯ ಹೂಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಮಾಹಿತಿ ಕಲೆಹಾಕುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ನಾಲ್ಕು ಮಂದಿಗಿಂತ ಹೆಚ್ಚು ಪ್ರವಾಸಿಗರು, ಸಾರ್ವಜನಿಕರು ಪ್ರವಾಸಿ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಇತರೆಡೆಗಳಲ್ಲಿ ಒಂದೆಡೆ ಸೇರದಿರುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಒಂದು ಟೇಬಲ್‌ನಿಂದ ಮತ್ತೂಂದು ಟೇಬಲ್‌ಗೆ ಕನಿಷ್ಟ 6 ಅಡಿ ಅಂತರ ಮತ್ತು ಒಂದು ಟೇಬಲ್‌ನಲ್ಲಿ ನಾಲ್ಕು ಮಂದಿಗೆ ಮಾತ್ರ ಅವಕಾಶ ನೀಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಹಿರಿಯ ನಾಗರಿಕರು,. ಗರ್ಭಿಣಿಯರು ಮತ್ತು ಮಕ್ಕಳಿಗೆ ನಾಡಿ ಮಿಡಿತ ಮೂಲಕ ಪರೀಕ್ಷಿಸುತ್ತಿರುವ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸೂಚಿಸಿರುವ ಅವರು, ಕೋವಿಡ್‌ಗೆ ಸಂಬಂಧಿಸಿದ ಮೇಲ್ಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ರೆಸಾರ್ಟ್, ಹೊಟೇಲ್ ಮತ್ತು ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಈ ಸಂಬಂಧವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಪೌರಾಯಕ್ತರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು, ಪಟ್ಟಣ ಪಂಚಾಯತ್‌ಗಳ ಮುಖ್ಯಾಧಿಕಾರಿಗಳು ಕ್ರಮವಹಿಸುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.