ಮೂರನೇ ಬಾರಿ ಭರ್ತಿಯಾದ ಹಾರಂಗಿ; ಎರಡು ಸಾವಿರ ಕ್ಯುಸೆಕ್ ನೀರು ಬಿಡುಗಡೆ
Team Udayavani, Oct 15, 2020, 12:21 AM IST
ಮಡಿಕೇರಿ: ಜಿಲ್ಲೆಯ ಹಾರಂಗಿ ಅಣೆಕಟ್ಟು ವರ್ಷ ಮೂರನೇ ಬಾರಿಗೆ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದ ರಿಂದ ಜಲಾಶಯಕ್ಕೆ 4,700 ಕ್ಯುಸೆಕ್
ನೀರು ಹರಿದುಬರುತ್ತಿದೆ. ಒಳ ಹರಿವಿನ ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ನಾಲ್ಕು ಕ್ರಸ್ಟ್ಗೇಟ್ಗಳ ಮೂಲಕ ಒಂದು ಸಾವಿರ ಹಾಗೂ ವಿದ್ಯುತ್ ಘಟಕದ ಮೂಲಕ 1,000 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗು ತ್ತಿದೆ. ಅಲ್ಲದೆ ಮುಖ್ಯ ನಾಲೆಗೆ 1,600 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ಶಾಸಕರ ಸೂಚನೆ
ಅಣೆಕಟ್ಟು ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಹೆಚ್ಚುವರಿಯಾಗಿ ನೀರನ್ನು ಸಂಗ್ರಹ ಮಾಡದೆ ಅಧಿಕ ನೀರನ್ನು ನದಿಗೆ ಹರಿಸುವಂತೆ ಶಾಸಕ ಅಪ್ಪಚ್ಚು ರಂಜನ್ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನೀರಾವರಿ ಇಲಾಖೆಯ ಅಧಿಕಾರಿಗಳು ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುತ್ತಿದ್ದು ಹೆಚ್ಚುವರಿ ನೀರಿನ್ನು ನದಿಗೆ ಹರಿಸಲಾಗುವುದು ಎಂದು ಸ. ಕಾರ್ಯಪಾಲಕ ಅಭಿಯಂತ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.