ಚಿತ್ತಿ ಮಳೆ ಅಬ್ಬರಕ್ಕೆ ಜನಜೀವನ ಸ್ತಬ್ಧ! 30ಕ್ಕೂ ಹೆಚ್ಚು ಮನೆಗಳಿಗೆ ಹಾನಿ
Team Udayavani, Oct 15, 2020, 3:00 PM IST
ಗದಗ: ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಚುರುಕುಗೊಂಡಿರುವ “ಚಿತ್ತಿ’ ಮಳೆ ಬುಧವಾರ ಜಿಲ್ಲೆಯಲ್ಲಿ ವೃದ್ಧೆಯೊಬ್ಬರನ್ನು
ಬಲಿ ಪಡೆದಿದ್ದು, 30ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಬುಧವಾರ ದಿನವಿಡೀ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
ಆಂಧ್ರ ಪ್ರದೇಶದ ಕರವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದ “ಚಿತ್ತ’ ಮಳೆ ಆರಂಭದಲ್ಲೇ ರೌದ್ರಾವತಾರ ಪ್ರದರ್ಶಿಸುತ್ತಿದೆ.
ವಾಯುಭಾರ ಕುಸಿತದಿಂದಾಗಿ ಜಿಲ್ಲೆಯಲ್ಲಿ ಅ. 14 ಮತ್ತು 15ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ ತಾಲೂಕು ಹಾಗೂ ರೋಣ, ನರಗುಂದ, ಗಜೇಂದ್ರಗಡ, ಮುಂಡರಗಿ ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದೆ. ಜನರು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣಗೊಂಡಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದೆ.
ಮಳೆಯಿಂದಾಗಿ ಬುಧವಾರ ಬೆಳಗ್ಗೆ ಜಿಲ್ಲೆಯ ಮಾಡಲಗೇರಿಯಲ್ಲಿ ಮನೆ ಗೋಡೆ ಕುಸಿದು, ಶಂಕ್ರವ್ವ(70) ಎಂಬ ವೃದ್ಧೆ ಬಲಿಯಾಗಿದ್ದಾರೆ. ಗದಗ ಸೇರಿದಂತೆ ವಿವಿಧೆಡೆ ಸುಮಾರು 30ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿರುವ ಬಗ್ಗೆ ಕಂದಾಯ ಇಲಾಖೆ ಅ ಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಈ ನಡುವೆ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಮನೆಗಳು ಕುಸಿದಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಭೇಟಿ ನೀಡಿ, ಪರಿಶೀಲಿಸಿದರು. ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಸರಕಾರದ ವಸತಿ ಯೋಜನೆಯಲ್ಲಿ ಮನೆ ಒದಗಿಸುವ ಭರವಸೆ ನೀಡಿದರು. ಕಟಾವಿಗೆ ಬಂದಿರುವ ಶೇಂಗಾ,
ಸೂರ್ಯಕಾಂತಿ ಹಾಗೂ ಈರುಳ್ಳಿ ಬೆಳೆಗಳು ಬಹುತೇಕ ಹಾನಿಯಾಗಿವೆ.
ಮತ್ತೆ ಪ್ರವಾಹ ಭೀತಿ: ಜಿಲ್ಲೆಯಲ್ಲಿ ಬಹುತೇಕ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಕಳೆದ ಐದು ದಿನಗಳಿಂದ ನೀರಿನ ಹರಿವು ಸಾಧಾರಣವಾಗಿದೆ. ಆದರೆ ಬೆಣ್ಣೆಹಳ್ಳದಲ್ಲಿ ನೀರು ಅಪಾಯ ಮಟ್ಟಕ್ಕೆ ತಲುಪುತ್ತಿದ್ದು, ಹೊಳೆಆಲೂರು ಬಳಿ ಹೊಳೆಆಲೂರು-ಬದಾಮಿ ಸಂಪರ್ಕ ಕಲ್ಪಿಸುವ ರಸ್ತೆ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸ್ಥಗಿತಗೊಂಡಿದೆ. ಮೂರು ದಿನಗಳಿಂದ
ಬೆಣ್ಣೆಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.