ಮಳೆ ಹಾನಿ: ಕೇಂದ್ರ ಸರ್ಕಾರ 25 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು: ವಾಟಾಳ್ ಆಗ್ರಹ
ಅನ್ಯರಾಜ್ಯಗಳಿಗೆ ಮಳೆ ಹಾನಿ ಪರಿಹಾರ ಘೋಷಣೆ ಮಾಡುವ ಪ್ರಧಾನಿ ಮೋದಿ ಕರ್ನಾಟಕಕ್ಕೆ ಏಕೆ ನೀಡುತ್ತಿಲ್ಲ: ವಾಟಾಳ್
Team Udayavani, Oct 16, 2020, 3:22 PM IST
ಬೆಳಗಾವಿ: ಮಳೆಯ ಅರ್ಭಟದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ ಕೂಡಲೇ ಈ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. 25 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ಹಿರಿಯ ಕನ್ನಡಪರ ಹೋರಾಟಗಾರ, ವಾಟಾಳ್ ನಾಗರಾಜ್ ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಉತ್ತರ ಕರ್ನಾಟಕದಲ್ಲಿ ಪ್ರವಾಹ, ಮಳೆಯಿಂದ ಭಾರಿ ಹಾನಿಯಾಗಿದೆ. ಈವರೆಗೂ ಮಳೆಯಿಂದ ಒಂದು ಲಕ್ಷ ಸಾವಿರ ಕೋಟಿ ನಷ್ಟವಾಗಿದೆ ಎಂದರು.
ಅನ್ಯ ರಾಜ್ಯಗಳಲ್ಲಿ ಪ್ರವಾಹ ಬಂದರೆ ಪ್ರಧಾನಿ ಮೋದಿ ಹೋಗುತ್ತಾರೆ ಪರಿಹಾರ ಘೋಷಣೆ ಮಾಡುತ್ತಾರೆ. ಆದರೆ ಕರ್ನಾಟಕ ಕ್ಕೆ ಮಾತ್ರ ಪ್ರಧಾನಿ ಮೋದಿ ಪರಿಹಾರ ನೀಡುತ್ತಿಲ್ಲ. ಇದರ ಬಗ್ಗೆ ಶಾಸಕರು, ಸಚಿವರು,ಸಂಸದರು ಧ್ವನಿ ಎತ್ತುತ್ತಿಲ್ಲ, ತಕ್ಷಣವೇ ಕೇಂದ್ರ ಸರ್ಕಾರ 25 ಸಾವಿರ ಕೋಟಿ ಪರಿಹಾರ ಘೋಷಿಸಬೇಕು, ಇಲ್ಲವಾದರೆ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನೂ ವಿದ್ಯಾಗಮ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಬೇಕು. ಕೋವಿಡ್ ನಿಂದ ಮಕ್ಕಳು ಹಾಗೂ ಶಿಕ್ಷಕರು ಮೃತಪಟ್ಟರೆ ಸರ್ಕಾರ ತಲಾ ಒಂದೊಂದು ಕೋಟಿ ಪರಿಹಾರ ನೀಡಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.