ಧಾರಾಕಾರ ಮಳೆಯಾಗಿ ನದಿ ತುಂಬಿ ಹರಿಯುತ್ತಿದ್ದರೂ, ಸೇತುವೆ ಮೇಲಿಂದ ಜಿಗಿದು ಯುವಕರ ಹುಚ್ಚಾಟ !
Team Udayavani, Oct 16, 2020, 6:43 PM IST
ಬೀದರ್: ಮೈದುಂಬಿಕೊಂಡು ಹರಿಯುತ್ತಿರುವ ಔರಾದ ತಾಲೂಕಿನ ಕೌಠಾ (ಬಿ) ಮಾಂಜ್ರಾ ಬಾಂದಾರ ಸೇತುವೆ ಮೇಲಿಂದ ಜಿಗಿದು ಯುವಕರು ಹುಚ್ಚಾಟ ಪ್ರದರ್ಶಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ವಾಯುಭಾರ ಕುಸಿತದಿಂದಾಗಿ ಧಾರಾಕಾರ ಮಳೆಯಾಗಿ ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಜೀವನದಿ ಮಾಂಜ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ವೇಳೆ ಬೀದರ-ನಾಂದೇಡ ಹೆದ್ದಾರಿಯಲ್ಲಿರುವ ಕೌಠಾ ಸೇತುವೆಯಲ್ಲಿ ೫೦ ಅಡಿ ಎತ್ತರದ ಮೇಲಿಂದ ಯುವಕರ ಗುಂಪು ನದಿಗೆ ಹಾರಿ ಈಜಾಡುವ ದುಸ್ಸಾಹಸ ಪ್ರದರ್ಶಿಸಿ ಅಪಾಯವನ್ನು ತಂದುಕೊಳ್ಳುತ್ತಿದೆ.
ಪ್ರವಾಹ ಸ್ಥಿತಿಯಿಂದ ರೈತರು ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದರೆ ಇತ್ತ ಕಿಡಿಗೇಡಿ ಯುವಕರು ಹುಚ್ಚಾಟ ತೋರುತ್ತಿದ್ದಾರೆ. ಹಲವು ಯುವಕರ ಗುಂಪು ಸೇತುವೆ ಮೇಲೆ ಜಮಾಯಿಸಿ ನೀರಿಗೆ ಹಾರುತ್ತಿದ್ದ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ನದಿಗಳು, ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ಕಳೆದೆರಡು ದಿನಗಳ ಹಿಂದೆಯೇ ಜಿಲ್ಲಾಧಿಕಾರಿ ರಾಮಚಂದ್ರನ್ ಅವರು, ಯಾರೂ ಅಪಾಯದ ಸಾಹಸ ಮಾಡದಂತೆ ಮನವಿ ಮಾಡಿದ್ದರೂ ಅದಕ್ಕೆ ಕ್ಯಾರೆ ಎನ್ನುತ್ತಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pani movie: ಕನ್ನಡದಲ್ಲಿ ಜೋಜು ಜಾರ್ಜ್ ಪಣಿ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.