ಮಂಡ್ಯ: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಸ್ಕಾನ್ ದೇವಾಲಯದ ಸನ್ಯಾಸಿಗಳು ನೀರು ಪಾಲು
Team Udayavani, Oct 16, 2020, 9:23 PM IST
ಮಂಡ್ಯ: ಕಾವೇರಿ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಸ್ಕಾನ್ ದೇವಾಲಯದ ಇಬ್ಬರು ಸನ್ಯಾಸಿಗಳು ಕೊಚ್ಚಿ ಹೋಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದ ಹೊರ ವಲಯದಲ್ಲಿರುವ ಇಸ್ಕಾನ್ ಸಂಸ್ಥೆಯ ಹರೇ ಕೃಷ್ಣ ಫಾರ್ಮ್ ನಲ್ಲಿ ನಡೆದಿದೆ.
ಬೆಂಗಳೂರಿನ ಆರ್.ಎಸ್.ದಾಸ್(43) ಹಾಗೂ ಚಿತ್ರದುರ್ಗ ಟೌನ್ ನಿವಾಸಿ ಗುಣಾರನವದಾಸ್(35) ಮೃತರು. ಪ್ರಸ್ತುತ ಮೈಸೂರಿನ ಇಸ್ಕಾನ್ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶುಕ್ರವಾರ ತಾಲೂಕಿನ ಇಸ್ಕಾನ್ ಸಂಸ್ಥೆಗೆ ಸೇರಿದ ಹರೇ ಕೃಷ್ಣ ಫಾರ್ಮ್ನ ದೇವಾಲಯದಲ್ಲಿ ನಡೆಯುತ್ತಿದ್ದ ಭಜನೆಗಾಗಿ ಆಗಮಿಸಿದ್ದರು. ದೇವರ ದರ್ಶನಕ್ಕೆ ಸ್ನಾನ ಮಾಡಲು ಫಾರ್ಮ್ನ ಸಮೀಪದಲ್ಲಿರುವ ಕಾವೇರಿ ನದಿಗೆ ಇಳಿದಾಗ ಈಜು ಬಾರದೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ, ಅರಕೆರೆ ಠಾಣೆ ಪೊಲೀಸರು ಆಗಮಿಸಿ ಸ್ಥಳೀಯರ ನೆರವಿನೊಂದಿಗೆ ದೋಣಿಯಲ್ಲಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ತಾಲೂಕು ಹರೇ ಕೃಷ್ಣ ಫಾರ್ಮ್ ಮುಖ್ಯಸ್ಥ ಕೃಷ್ಣದಾಸ್ ಸ್ಥಳದಲ್ಲೇ ಹಾಜರಿದ್ದು, ಇವರ ಜೊತೆಯಲ್ಲಿದ್ದ ಇತರರನ್ನು ಸಂತೈಸಿದ್ದಾರೆ. ಈ ಸಂಬಂಧ ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.